Government Schemes

ಮೊಬೈಲ್ ರಿಪೇರಿ ಹಾಗೂ ಬ್ಯೂಟಿ ಪಾರ್ಲರ್‌ ತರಬೇತಿಗೆ ಅರ್ಜಿ ಆಹ್ವಾನ

16 November, 2023 4:47 PM IST By: Maltesh
Application Invitation for Mobile Repair and Beauty Parlor Training

ಬೆಂಗಳೂರು ನಗರ ಜಿಲ್ಲೆ, ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಡಿಸೆಂಬರ್ 13 ರಿಂದ ಪ್ರಾರಂಭವಾಗಲಿದ್ದು, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಡಿಸೆಂಬರ್ 10 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 8884554510, 9113880324, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬ್ಯೂಟಿ ಪಾರ್ಲರ್ ತರಬೇತಿಗಾಗಿ ಅರ್ಜಿ ಆಹ್ವಾನ

ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್ ನಿರ್ವಹಣೆ ಕುರಿತು 30 ದಿನಗಳ ಉಚಿತ ತರಬೇತಿಯು ನವೆಂಬರ್ 23 ರಿಂದ ಪ್ರಾರಂಭವಾಗಲಿದೆ, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರು ಅರ್ಜಿ ಸಲ್ಲಿಸಬಹುದು.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ನವೆಂಬರ್ 21 ಕೊನೆಯ ದಿನವಾಗಿದೆ

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 9113880324, 8884554510, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.