Agripedia

ಈರುಳ್ಳಿ ಬೆಲೆ ಇಳಿಕೆಗೆ ಕೇಂದ್ರ ಸರ್ಕಾರದಿಂದ ಮಹತ್ವದ ಕ್ರಮ

16 November, 2023 3:09 PM IST By: Maltesh

ಪ್ರಸ್ತುತ ದೇಶದಲ್ಲಿ ಈರುಳ್ಳಿ ಬೆಲೆಯಲ್ಲಿ ಗಮನಾರ್ಹ ಏರಿಕೆಯನ್ನ ನಾವು ಕಾಣುತ್ತಿದ್ದೇವೆ. ಈ ಹಿಂದೆ ಒಂದು ಕಿಲೋ ಈರುಳ್ಳಿ ಬೆಲೆ ರೂ. 30 ರಿಂದ 40 ಆಗಿತ್ತು. ಆದರೆ ಸದ್ಯ ಈರುಳ್ಳಿ ಅತಿ ದುಬಾರಿ ಬೆಲೆಗೆ ಇದೀಗ ಮಾರಾಟವಾಗುತ್ತಿದೆ. ಸದ್ಯ ಒಂದು ಕಿಲೋ ಈರುಳ್ಳಿ ರೂ. 80ರಿಂದ 100 ರೂ.ವರೆಗೆ ಮಾರಾಟ ಮಾಡಲಾಗುತ್ತಿದೆ.

ಹೆಚ್ಚುತ್ತಿರುವ ಈರುಳ್ಳಿ ಬೆಲೆ ಸಾಮಾನ್ಯರ ಆರ್ಥಿಕ ಹೊರೆಯನ್ನು ಗಣನೀಯವಾಗಿ ಹೆಚ್ಚಿಸುತ್ತಿದ್ದು, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಲು ಮುಂದಾಗಿದೆ. ಈ ಆದೇಶದಲ್ಲಿ ಈರುಳ್ಳಿ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ.

ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಒಂದು ಲಕ್ಷ ಟನ್ ಈರುಳ್ಳಿಯನ್ನು ಬಫರ್ ಸ್ಟಾಕ್‌ನಿಂದ ಬಿಡುಗಡೆ ಮಾಡಿ ಚಿಲ್ಲರೆ ಮಾರುಕಟ್ಟೆಗಳಲ್ಲಿ ಲಭ್ಯವಾಗುವಂತೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇದಲ್ಲದೆ, ಈರುಳ್ಳಿ ಬೆಲೆ ಏರಿಕೆಯನ್ನು ತಡೆಯಲು ಸರ್ಕಾರ ಈಗಾಗಲೇ ರಫ್ತು ನಿರ್ಬಂಧಗಳನ್ನು ಜಾರಿಗೆ ತಂದಿದೆ. ಹೆಚ್ಚಿನ ನೆರವು ನೀಡಲು ಕೇಂದ್ರ ಸರ್ಕಾರವು ದೇಶಾದ್ಯಂತ ಈರುಳ್ಳಿಯನ್ನು ಕೆಜಿಗೆ 25 ರೂ.ನಂತೆ ಸಬ್ಸಿಡಿಯಲ್ಲಿ ಮಾರಾಟ ಮಾಡಲು ಪ್ರಾರಂಭಿಸಿದೆ.

ಇದಲ್ಲದೆ, ಬಫರ್ ಸ್ಟಾಕ್‌ನಿಂದ ಈ ತಿಂಗಳು ಹೆಚ್ಚುವರಿಯಾಗಿ ಒಂದು ಲಕ್ಷ ಟನ್ ಈರುಳ್ಳಿ ಮಾರುಕಟ್ಟೆಗೆ ಬಿಡುಗಡೆಯಾಗಲಿದೆ. ಮುಂದಿನ ದಿನಗಳಲ್ಲಿ ಈರುಳ್ಳಿ ಬೆಲೆ ಇಳಿಕೆಯಾಗಲಿದ್ದು, ಜನಸಾಮಾನ್ಯರಿಗೆ ನೆಮ್ಮದಿ ಸಿಗಲಿದೆ.

ಸಗಟು ಹಣದುಬ್ಬರ ಪ್ರಮಾಣ ಕುಸಿತ

ಭಾರತದಲ್ಲಿ ಸಗಟು ಹಣದುಬ್ಬರ ಪ್ರಮಾಣ ಅಕ್ಟೋಬರ್ ತಿಂಗಳಲ್ಲಿ ಸತತ 7 ನೇ ತಿಂಗಳಲ್ಲೂ ಋಣಾತ್ಮಕ ಮಟ್ಟದಲ್ಲಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ, ಅಕ್ಟೋಬರ್‌ನಲ್ಲಿ ಸಗಟು ಬೆಲೆ ಸೂಚ್ಯಂಕ ೦.51 ರಷ್ಟು ಕುಸಿತವನ್ನು ದಾಖಲಿಸಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ-ಅಂಶದಲ್ಲಿ ತಿಳಿಸಿದೆ.

ಸಗಟು ಹಣದುಬ್ಬರವು ಸೆಪ್ಟೆಂಬರ್ ತಿಂಗಳಲ್ಲಿ ಶೇಕಡ ೦.23 ರಷ್ಟು ಕುಸಿತವನ್ನು ದಾಖಲಿಸಿತ್ತು. ಕಳೆದ ವರ್ಷದ ಈ ತಿಂಗಳಿಗೆ ಹೋಲಿಸಿದರೆ, ಈ ವರ್ಷದ ಅಕ್ಟೋಬರ್‌ನಲ್ಲಿ ಋಣಾತ್ಮಕ ಹಣದುಬ್ಬರ ದರ ಪ್ರಾಥಮಿಕವಾಗಿ ರಾಸಾಯನಿಕಗಳು, ರಾಸಾಯನಿಕ ಉತ್ಪನ್ನಗಳು, ವಿದ್ಯುತ್, ಜವಳಿ, ಲೋಹಗಳು, ಆಹಾರ ಉತ್ಪನ್ನಗಳು, ಕಾಗದ ಹಾಗೂ ಕಾಗದ ಉತ್ಪನ್ನಗಳ ಬೆಲೆಗಳ  ಕುಸಿತದಿಂದಾಗಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.