ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಮುಖ ತೋಟಗಾರಿಕೆ ಬೆಳೆಯಾದ ಆಲೂಗಡ್ಡೆ ಬೆಳೆಯಲ್ಲಿ ಅಂಗಮಾರಿ ರೋಗ ಕಾಣಿಸಿಕೊಂಡಿರುವುದರಿಂದ ರೈತರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.
ಕನ್ನಡಿಗರಿಗೆ ಸಿಹಿಸುದ್ದಿ: ಇನ್ಮುಂದೆ 11,400 ಕೇಂದ್ರ ಸರ್ಕಾರಿ ಹುದ್ದೆಗಳ ಪರೀಕ್ಷೆಯನ್ನು ಕನ್ನಡದಲ್ಲೇ ಬರೆಯಬಹುದು!
ಜಿಲ್ಲೆಯ ಬಹುತೇಕ ರೈತರು ಪ್ರತಿ ವರ್ಷ ಅಕ್ಟೋಬರ್ ತಿಂಗಳಿನಿಂದ ಜನವರಿ ಅಂತ್ಯದವರೆಗೂ ಆಲೂಗಡ್ಡೆ ಬಿತ್ತನೆ ಮಾಡುತ್ತಾರೆ. ಈ ಬಾರಿಯೂ ರೈತರು ನೂರಾರು ಹೆಕ್ಟೇರ್‌ನಲ್ಲಿ ಆಲೂಗಡ್ಡೆ ಬಿತ್ತನೆ ಮಾಡಿದ್ದಾರೆ.
ಆದರೆ, ಡಿಸೆಂಬರ್ ತಿಂಗಳ ಮಧ್ಯ ಭಾಗದಲ್ಲಿ ಕಾಣಿಸಿಕೊಂಡ ಮಾಂಡೌಸ್ ಚಂಡಮಾರುತದಿಂದಾಗಿ ಬಿತ್ತನೆ ಮಾಡಿದ್ದ ಆಲೂಗಡ್ಡೆ ಬೆಳೆಯಲ್ಲಿ ನೀರು ನಿಂತು ಕೊಳೆಯಲಾರಂಭಿಸಿತು.
ಇದರಿಂದ ಬೆಳೆಗಾರರು ತೀವ್ರ ನಷ್ಟ ಅನುಭವಿಸಿದ್ದಾರೆ. ಅಲ್ಲದೇ ಜಡಿಮಳೆಯಿಂದ ಭೂಮಿಯಲ್ಲಿ ಅತಿಯಾದ ತೇವಾಂಶ ಉಂಟಾಗಿದ್ದರಿಂದ ಆಲೂಗಡ್ಡೆ ಬಿತ್ತನೆಯನ್ನು ರೈತರು ಮುಂದೂಡಿದ್ದರು.
South Western Railway ರೈಲ್ವೇ ಇಲಾಖೆಯಿಂದ ಸಿಹಿಸುದ್ದಿ: ಇನ್ಮುಂದೆ ಕನ್ನಡದಲ್ಲೆ ದೊರೆಯಲಿದೆ ರೈಲ್ವೆ ಸೇವೆ!
ಇದರಿಂದ ಡಿಸೆಂಬರ್ ತಿಂಗಳ ಅಂತ್ಯದವರೆಗೂ ಆಲೂಗಡ್ಡೆ ಬಿತ್ತನೆ ಹಿನ್ನೆಡೆಗೆ ಕಾರಣವಾಗಿದೆ. ಕೆಲವು ಕಡೆ ಈಗಲೂ ಬಿತ್ತನೆ ನಡೆಯುತ್ತಿದ್ದರೆ, ಮತ್ತೆ ಕೆಲವು ಕಡೆ ಬೆಳೆ ಕೊಯ್ಲು ಹಂತವನ್ನು ತಲುಪಿದೆ.
ನಿರಂತರ ಮಳೆಯಿಂದಾಗಿ ವಾತಾವರಣದಲ್ಲಿ ತೇವಾಂಶ ಹೆಚ್ಚಾಗಿ ಹೂ ಬಿಡುವ ಮುನ್ನವೇ ಆಲೂಗಡ್ಡೆ ಬೆಳೆಗೆ ಅಂಗಮಾರಿ ರೋಗ ಕಾಣಿಸಿಕೊಂಡಿದೆ.
ಬೆಳೆ ಹಾನಿಯಿಂದ ಮನನೊಂದು ರೈತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ
ಕಲಬುರಗಿಯ ಕಮಲಾಪುರದ ಕುದಮೂಡ ಗ್ರಾಮದಲ್ಲಿ ಬೆಳೆ ಹಾನಿಯಿಂದ ಮನನೊಂದು ರೈತ ಧೋಂಡಿಬಾ ಕಲ್ಪಪ್ಪ ಪೂಜಾರಿ ಎಂಬವರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜಮೀನಿಗೆ ಬುಧವಾರ ಬೆಳಿಗ್ಗೆ ತೆರಳಿದ ಧೋಂಡಿಬಾ ಅವರು ಕ್ರಿಮಿನಾಶಕ ಸೇವಿಸಿದರು. ಅಲ್ಲಿ ಬಿದ್ದು ಹೊರಳಾಡುತ್ತಿದ್ದ ಅವರನ್ನು ಗಮನಿಸಿದ ಪರಿಚಿತರು ಮತ್ತು ಕುಟುಂಬದವರು ಜಿಲ್ಲಾ ಆಸ್ಪತ್ರೆಗೆ ಸೇರಿಸಿದರು.
ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ. ಈ ಕುರಿತು ನರೋಣಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ರೈತ ಧೋಂಡಿಬಾ ಹೆಸರಿನಲ್ಲಿ 4 ಎಕರೆ, ತಾಯಿ ಶಿವಕಾಂತಾಬಾಯಿ ಹೆಸರಿನಲ್ಲಿ 6 ಎಕರೆ ಜಮೀನಿದೆ.
ಗಂಗಾ ಕಲ್ಯಾಣ ಯೋಜನೆಯಡಿ ನೀರಾವರಿ ಸೌಲಭ್ಯಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಕೆಗೆ ಮಾರ್ಚ್ 2 ಕೊನೆ ದಿನ?
9 ಎಕರೆಯಲ್ಲಿ ತೊಗರಿ ಮತ್ತು 1 ಎಕರೆಯಲ್ಲಿ ಜೋಳ ಬಿತ್ತನೆ ಮಾಡಿದ್ದರು. ನೆಟೆ ರೋಗದಿಂದ ತೊಗರಿ ಸಂಪೂರ್ಣ ಹಾನಿಯಾಗಿತ್ತು.
ಅಲ್ಲದೇ ಖಾಸಗಿ ಮತ್ತು ಬ್ಯಾಂಕ್‌ನಲ್ಲಿ ಅಂದಾಜು 10 ಲಕ್ಷ ಸಾಲ ಹೊಂದಿದ್ದರು ಎನ್ನಲಾಗಿದೆ. ಕಲಬುರಗಿಯಲ್ಲಿ ನೆಟೆ ರೋಗದಿಂದ ಬೆಳೆ ಹಾನಿಯಾಗುತ್ತಿದ್ದು, ರೈತರು ಸಂಕಷ್ಟದಲ್ಲಿ ಇದ್ದಾರೆ.