Agripedia

ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಸಿರಿಧಾನ್ಯ ಮೇಳ ಭರ್ಜರಿ ಸಿದ್ಧತೆ

06 January, 2023 8:00 PM IST By: Hitesh
International Cereal Fair in Bengaluru is well prepared

ಭಾರತವು 2023ನೇ ವರ್ಷವನ್ನು ಸಿರಿಧಾನ್ಯಗಳ ವರ್ಷ ಎಂದು ಆಚರಿಸಲಾಗುತ್ತಿದ್ದು, ಸಿರಿಧಾನ್ಯದ ಪ್ರಚಾರದಲ್ಲಿ ಮುಂಚೂಣಿಯಲ್ಲಿದೆ.

ಮಧ್ಯಾಹ್ನದ ಬಿಸಿಯೂಟದಲ್ಲಿ ಚಿಕನ್‌, ಹಣ್ಣು: 371 ಕೋಟಿ ಅನುದಾನ!

ಜನವರಿ 20ರಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಸಿರಿಧಾನ್ಯ ಮೇಳ -2023ರಲ್ಲಿ ಆಯೋಜಿಸಲಾಗುತ್ತಿದೆ. ಈಗಾಗಲೇ 300 ಮಳಿಗೆಗಳ ಪೈಕಿ 218 ಮಳಿಗೆಗಳು ನಿಗದಿ ಆಗಿವೆ.

ಸಚಿವ ಬಿ.ಸಿ ಪಾಟೀಲ ಅವರು ಸಿರಿಧಾನ್ಯ ಮೇಳದ ಪೂರ್ವಭಾವಿ ಸಭಾ ಕಾರ್ಯಕ್ರಮ ನಡೆಸಿದ್ದರು. 2023 ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಘೋಷಣೆ ಮಾಡಲಾಗಿದೆ. ಸಿರಿಧಾನ್ಯ ಬೆಳೆಯುವ ರೈತರಿಗೆ ಮಾರುಕಟ್ಟೆ ಒದಗಿಸಲು ಹಾಗೂ ರೈತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಮೇಳ ಆಯೋಜಿಸಲಾಗಿದೆ ಎಂದು ಹೇಳಿದರು.

Nandini and Amul| ನಂದಿನಿ ಮತ್ತು ಅಮುಲ್‌ ಬ್ರ್ಯಾಂಡ್‌ ವಿಲೀನಕ್ಕೆ ವಿರೋಧ  

ಕೃಷಿ ಇಲಾಖೆಯು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ನಿಯಮಿತ ಹಾಗೂ ಸಾವಯವ ಕೃಷಿಗಾಗಿ ಅಂತರರಾಷ್ಟ್ರೀಯ ಸಾಮರ್ಥ್ಯ ಕೇಂದ್ರದ ಸಹಯೋಗದಲ್ಲಿ ಮೇಳವನ್ನು ಆಯೋಜಿಸುತ್ತಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿನ 300 ಮಳಿಗೆಗಳ ಪೈಕಿ 110 ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ಕಂಪನಿಗಳು ಈಗಾಗಲೇ 218 ಮಳಿಗೆಗಳನ್ನು ಕಾಯ್ದಿರಿಸಿವೆ. ರಾಯಚೂರಿನಲ್ಲಿ ಸಿರಿಧಾನ್ಯ ಉದ್ಯಾನವನ ಸ್ಥಾಪಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ಇದು ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಉದ್ಯೋಗಾವಕಾಶಗಳಿಗೆ ಉತ್ತೇಜನ ನೀಡುತ್ತದೆ.

Kalasa Banduri Nala Project | ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಜಲ ಆಯೋಗ ಸಮ್ಮತಿ

ಈ ವಲಯದ ರೈತರು ಮತ್ತು ಗ್ರಾಹಕರ ನಡುವಿನ ಅಂತರವನ್ನು ಕಡಿಮೆ ಮಾಡುವುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದ್ದಾರೆ.

ಕೊರೊನಾ ಸೋಂಕು ವ್ಯಾಪಕವಾದ ನಂತರದಲ್ಲಿ ಜನರು ಜಾಗೃತರಾಗಿದ್ದಾರೆ. ಜನರು ಆರೋಗ್ಯಕರ ಜೀವನಶೈಲಿಯ ಬಗ್ಗೆ ಹೆಚ್ಚು ಜಾಗೃತರಾಗಿದ್ದಾರೆ. ಅವರ ಯೋಗಕ್ಷೇಮಕ್ಕಾಗಿ ಆರೋಗ್ಯಕರ ಆಹಾರಕ್ರಮಕ್ಕೆ ಬದಲಾಗುತ್ತಿದ್ದಾರೆ ಎಂದಿದ್ದಾರೆ.

ಜಗತ್ತು ಹೊಸ ಆಯ್ಕೆಗಳನ್ನು ಹುಡುಕುತ್ತಿರುವ ಸಮಯದಲ್ಲೇ ಸಿರಿಧಾನ್ಯ ಮತ್ತು ಸಾವಯವ ಪದಾರ್ಥಗಳು ಆದ್ಯತೆಯ ಆಹಾರವಾಗಿ ವೇಗವಾಗಿ ಹೊರಹೊಮ್ಮುದೆ  ಎಂದಿದ್ದಾರೆ.  

Pm Kisan| ಪಿ.ಎಂ ಕಿಸಾನ್‌ ಅಪ್ಡೇಟ್‌: 13ನೇ ಕಂತಿಗಾಗಿ ಕಾಯುತ್ತಿರುವ ಕೋಟಿಗಟ್ಟಲೆ ರೈತರಿಗೆ ಮಹತ್ವದ ಮಾಹಿತಿ

International Cereal Fair in Bengaluru is well prepared

ಭಾರತದ ಗಮನ ಈಗ ಪೌಷ್ಟಿಕಾಂಶದ ಭದ್ರತೆಯ ಮೇಲೆ ಕೇಂದ್ರೀಕೃತವಾಗಿದೆ. ಬೆಳೆಯುವ ರಾಗಿಗಳಲ್ಲಿ ಕೀಟನಾಶಕಗಳು ಮತ್ತು ರಾಸಾಯನಿಕಗಳ ಬಳಕೆಯು ಅತ್ಯಂತ ಕಡಿಮೆ ಅಥವಾ ಶೂನ್ಯವಾಗಿದೆ ಎನ್ನಲಾಗಿದೆ.

ಜನವರಿ 20ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು  ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮೇಳದಲ್ಲಿ ಚರ್ಚಾಗೋಷ್ಠಿಗಳು, ಸಾವಯವ ಮತ್ತು ಸಿರಿಧಾನ್ಯಗಳ ಪ್ರದರ್ಶನ ಮಳಿಗೆಗಳು, ಸಿರಿಧಾನ್ಯ ಉತ್ಪನ್ನಗಳು, ಸಭೆ, ಕಾರ್ಯಾಗಾರಗಳು ಇರಲಿವೆ. ಒಟ್ಟು ಸುಮಾರು 100ಕ್ಕೂ ಹೆಚ್ಚು ಕಂಪನಿಗಳು 200ಕ್ಕೂ ಹೆಚ್ಚು ಮಳಿಗೆಗಳು ಮೇಳದಲ್ಲಿ ರೈತರು ಮತ್ತು ಸಾರ್ವಜನಿಕರನ್ನು ಆಕರ್ಷಿಸಲಿವೆ. ವಿಶೇಷವಾಗಿ ಮೇಳದಲ್ಲಿ ಸಿರಿಧಾನ್ಯ ಬೆಳೆಗಾರರು, ಗ್ರಾಹಕರು, ರಫ್ತುದಾರರು, ಸಂಪರ್ಕ ಕಲ್ಪಿಸುವ ಮಾರಾಟ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಜನರು ಜಂಕ್ ಫುಡ್ ಗುಲಾಮಗಿರಿಯಿಂದ ಹೊರ ಬರಬೇಕು. ಆರೋಗ್ಯಕರ ಆಹಾರ ಶೈಲಿಗೆ ಹೆಚ್ಚು ಆದ್ಯತೆ ನೀಡಬೇಕಿದೆ. ಆಗ ಮಾತ್ರವೇ ಸದೃಢ ಜೀವನ ನಮ್ಮದಾಗುತ್ತದೆ ಎಂದು ಹೇಳಿದರು.

Sugarcane Growers| ಕಬ್ಬು ಬೆಳೆಗಾರರಿಗೆ ವಂಚನೆ: 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ!

ಜನವರಿ 14ಕ್ಕೆ ಜಾಗೃತಿ ವಾಕಥಾನ್ ಆಯೋಜನೆ

ಸಿರಿಧಾನ್ಯ ಸಾವಯವ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಜನವರಿ 14 ರಂದು ಕಬ್ಬನ್‌ಪಾರ್ಕಿನಲ್ಲಿ ವಾಕ್‌ಥಾನ್ ನಡೆಸಲು ನಿರ್ಧರಿಸಲಾಗಿದೆ. ಈಗಾಗಲೇ ರಾಜ್ಯದ‌ ಎಲ್ಲಾ ಜಿಲ್ಲೆಗಳಲ್ಲಿ ಸಿರಿಧಾನ್ಯ ಸಾವಯವ ಮೇಳ ನಡೆಯುತ್ತಿದ್ದು, ಸಿರಿಧಾನ್ಯ ಬಳಕೆ ಮತ್ತು ಬೆಳೆಯುವಲ್ಲಿ ಕರ್ನಾಟಕ ದೇಶಕ್ಕೆ ಮಾದರಿ ಆಗಿದೆ ಎಂದು ಹೇಳಿದರು.

ಇದೇ ವೇಳೆ ಅಂತಾರಾಷ್ಟ್ರೀಯ ಸಿರಿಧಾನ್ಯ ಮಾಹಿತಿ ಸುಲಭವಾಗಿ ಎಲ್ಲಿರಿಗು ಲಭ್ಯವಾಗುವಂತೆ ಅಭಿವೃದ್ಧಿ ಪಡಿಸಲಾದ ವೆಬ್‌ಸೈಟ್‌ ಒಂದನ್ನು ಕೃಷಿ ಸಚಿವರು ಬಿಡುಗಡೆ ಮಾಡಿದರು.

ಕೃಷಿ ಇಲಾಖೆಯ ನಿರ್ದೇಶಕ ಜಿ.ಟಿ.ಪುತ್ರನ್, ಆಯುಕ್ತ ಶರತ್, ಕೆಪೆಕ್ ಅಧ್ಯಕ್ಷ ವಿರೂಪಾಕ್ಷಪ್ಪ ,ಕೆಮಿಕ್‌ ನಿರ್ದೇಶಕ ಪದ್ಮನಾಭಯ್ಯ ಇದ್ದರು.