1. ಅಗ್ರಿಪಿಡಿಯಾ

ಕೃಷಿ ವಿಶ್ವವಿದ್ಯಾಲಯಗಳು ಕೃಷಿ ಇಲಾಖೆಗೆ ತಾಯಿಯಿದ್ದಂತೆ: ಸಚಿವ ಬಿ.ಸಿ.ಪಾಟೀಲ್

ಕೃಷಿ ವಿಶ್ವವಿದ್ಯಾಲಯಗಳು ಕೃಷಿ ಇಲಾಖೆಗೆ ತಾಯಿ ಇದ್ದಂತೆ. ಕೃಷಿ ವಿಶ್ವವಿದ್ಯಾಲಯಗಳು ರೈತರಿಗೆ ಬಹಳ ಹತ್ತಿರವಾಗಬೇಕು. ಕೃಷಿ ಇಲಾಖೆಗೆ ವಿಶ್ವವಿದ್ಯಾಲಯಗಳು ಮಾರ್ಗದರ್ಶಿಯಾಗಬೇಕು ಎಂದು ಕರ್ನಾಟಕ ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ವಿಕಾಸಸೌಧದಲ್ಲಿ ಸಚಿವರಾದ ಬಳಿಕ ಮೊದಲ ಕೃಷಿ ವಿಶ್ವವಿದ್ಯಾಲಯಗಳ ಸಮನ್ವಯ ಸಮಿತಿ ಸಭೆ ನಡೆಸಿ ಅವರು ಮಾತನಾಡಿದರು.
ಯಾವ ಕಾಯಿಲೆಗೆ ಯಾವ ಮದ್ದು” ಎನ್ನುವುದು ವೈದ್ಯರಿಗೆ ಹೇಗೆ ತಿಳಿದಿರುತ್ತದೆಯೋ ಅದೇ ರೀತಿ ರೈತರ (Farmers) ಬೆಳೆಯ ಸಮಸ್ಯೆಗಳಿಗೆ ಕೃಷಿವಿಶ್ವವಿದ್ಯಾಲಯಗಳು ಪರಿಹಾರ ಸೂಚಿಸಬೇಕು. ಪ್ರತಿಯೊಬ್ಬ ಪ್ರೊಫೇಸರ್ ಅನ್ನು ಫೀಲ್ಡ್ ಗೆ ಕಳುಹಿಸಬೇಕು. ಹಿಂದಿನ ಕಾಲದ ಬೇಸಾಯದ ಪದ್ಧತಿಗೂ ಈಗಿನ ಪದ್ಧತಿಗೂ ಬಹಳಷ್ಟು ವ್ಯತ್ಯಾಸಗಳಿವೆ. ಕಾಲಕ್ಕೆ ತಕ್ಕ ಬೆಳೆ ತಂತ್ರಜ್ಞಾನದ ಬಳಕೆ ಸಂಶೋಧನೆ ಬಗ್ಗೆ ವಿದ್ಯಾರ್ಥಿಗಳಿಗೆ ರೈತರಿಗೆ ನೇರವಾಗಿ ಮಾಹಿತಿ ಹೋಗುವಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿಗಳನ್ನು ಪ್ರೊಫೆಸರ್ ಗಳನ್ನು ಹೊಸಹೊಸ ಸಂಶೋಧನೆ ತಳಿಗಳು ವಿಶ್ವವಿದ್ಯಾಲಯದ ಸಾಧನೆಗಳನ್ನು ಪ್ರಚುರಪಡಿಸಲು ಸಹಕರಿಸುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಸಭೆಗಳು ಹಾಗೂ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳು ಸೂಚನೆಗಳು ಬರೀ ಕಡತದಲ್ಲಿ ಕಿರುಪುಸ್ತಕದಲ್ಲಷ್ಟೇ ಉಳಿಯದೇ ಕಾರ್ಯರೂಪಕ್ಕೆ ಬರಬೇಕು. ಟಿಎ ಡಿಎ ಸಮಯ ವ್ಯರ್ಥಕ್ಕಾಗಿ ಸಭೆಗಳನ್ನು ಮಾಡದೇ ರೈತರಿಗೆ ಅನುಕೂಲ ಕಲ್ಪಿಸಲು ಹಾಗೂ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ಕೃಷಿಯತ್ತ ಹೊಸ ಕಲಿಕೆಗೆ ಅವಕಾಶ ಮಾಡಿಕೊಡುವಲ್ಲಿ ಉಪಯೋಗವಾಗಬೇಕು. ವಿಶ್ವವಿದ್ಯಾಲಯಗಳಲ್ಲಿ ಹೊಸತನ್ನು ಕಲಿಯಲು ಮತ್ತು ಕಲಿಸಲು ರೈತರಿಗೆ ಎಲ್ಲಾ ರೀತಿಯಲ್ಲಿ ಅನುಕೂಲ ಕಲ್ಪಿಸುವಂತಹ ಹೊಸ ಸಂಶೋಧನೆಗಳು, ತಳಿಗಳನ್ನು ಕಂಡುಹಿಡಿಯಬೇಕು ಎಂದು ಸಭೆಯಲ್ಲಿ ಸಚಿವರು ನಿರ್ದೇಶಿಸಿದರು.

ವಿಶ್ವವಿದ್ಯಾಲಯಗಳಲ್ಲಿ ಹೊಸಹೊಸ ತಳಿಗಳ ಸಂಶೋಧನೆ ಹೆಚ್ಚೆಚ್ಚು ನಡೆಯಬೇಕು. ವಿಶ್ವವಿದ್ಯಾಲಯಗಳ ಸಾಧನೆ ಸಂಶೋಧನೆಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚುರಪಡಿಸಬೇಕು. ಸಭೆಗೆ ಯಾವುದೇ ಅಧಿಕಾರಿಗಳಾಗಲೀ ಕುಲಪತಿ ನಿರ್ದೇಶಕರಾಗಲೀ ಯಾರೇ ಆಗಲೀ ಪೂರ್ವಮಾಹಿತಿ ದಾಖಲೆಯಿಲ್ಲದೇ ಬರಬಾರದು. ಕೃಷಿ ವಿಶ್ವವಿದ್ಯಾಲಯಗಳು ಹಾಗೂ ಕೃಷಿ ಇಲಾಖೆ ನಡುವೆ ಎಂದಿಗೂ ಸಮನ್ವಯದ ಕೊರತೆಯಾಗದಂತೆ ನೋಡಿಕೊಳ್ಳಬೇಕು. ರೈತರ ಜೊತೆ ಸಂವಾದ ಮಾಡುವ ಮೂಲಕ ರೈತರ ಸಮಸ್ಯೆಗಳನ್ನು ಹತ್ತಿರದಿಂದ ಅರಿತು ಅವುಗಳ ಪರಿಹಾರಕ್ಕೆ ಕ್ರಮವಹಿಸಬೇಕು ಎಂದು ಬಿ.ಸಿ.ಪಾಟೀಲ್ ಸೂಚಿಸಿದರು.

ಇನ್ನುಮುಂದೆ ತಿಂಗಳಿಗೊಮ್ಮೆ ಸಮನ್ವಯ ಸಮಿತಿ ಸಭೆ ನಡೆಸಲಾಗುವುದು. ಮೇಲಿಂದ ಮೇಲೆ ಸಭೆಗಳನ್ನು ನಡೆಸುವುದರಿಂದ ವಿಷಯಗಳ ಮಾಹಿತಿಯ ವಿನಿಮಯ ಕೆಲಸದ ಪ್ರಗತಿ ಬಗ್ಗೆ ಅರಿಯಲು ಹಾಗೂ ರೈತರಿಗಾಗಿ ಇನ್ನಷ್ಟು ದುಡಿಯಲು ಸಾಧ್ಯವಾಗುತ್ತದೆ ಎಂದರು.
 ಸಭೆಯಲ್ಲಿ ರಾಜ್ಯದ ಎಲ್ಲಾ ಕೃಷಿ ವಿಶ್ವವಿದ್ಯಾಲಯಗಳ ಉಪಕುಲಪತಿಗಳು, ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ ಸೇರಿದಂತೆ ಮತ್ತಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.

Published On: 15 May 2020, 06:56 PM English Summary: Karnataka Agriculture minister press meet news

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.