1. ಅಗ್ರಿಪಿಡಿಯಾ

ರೈತರೇ ಗಮನಿಸಿ: ಬೆಳೆ ವಿಮೆ ಸೌಲಭ್ಯಕ್ಕಾಗಿ ಇಂದೇ ಅರ್ಜಿ ಸಲ್ಲಿಸಿ

ಬೆಳೆ ನಷ್ಟ, ಬೆಳೆ ವಿಫಲಗೊಂಡ ಸಂದರ್ಭದಲ್ಲಿ ನಷ್ಟ ಹೊಂದಿದ ರೈತರ ಕೈಹಿಡಿಯಲು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಸಹಭಾಗೀತ್ವದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಿದೆ.ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ(Pradhanamantri Fasal Bima Scheme)ಯಡಿ ವಿಮೆ ಕಂತು ಕಟ್ಟಿದ್ದ ರೈತರಿಗೆ ಬೆಳೆನಷ್ಟ ಮತ್ತು ಪ್ರಕೃತಿ ವಿಕೋಪದಡಿ ಬೆಳೆ ನಷ್ಟ (crop damage) ಆದರೆ ಬೆಳೆ ವಿಮೆ ಮಾಡಿಸಿರುವ ರೈತರಿಗೆ ಎಕರೆವಾರು ವಿಮಾ ಮೊತ್ತವನ್ನು ಪಾವತಿ ಮಾಡುವ ಯೋಜನೆ ಇದಾಗಿದೆ.

2020-21 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ರಾಜ್ಯದ ಆಯಾ ಜಿಲ್ಲೆಗಳಿಗೆ ಅನುಷ್ಟಾನಗೊಳಿಸಲಾಗಿದೆ.

 ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿ 2020-21ನೇ ಸಾಲಿನ ಮುಂಗಾರು ಹಂಗಾಮಿಗೆ  ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹಾಗೂ ಉಳಿದ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಅನುಷ್ಠಾನಗೊಳಿಸಲು ಆದೇಶಿಸಲಾಗಿದೆ

ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಬೆಂಗಳೂರಿನ ಯೂನಿವರ್ಸಲ್ ಸೊಂಪು ಜನರಲ್ ಇನ್ಸುರೆನ್ಸ್ ಕಂಪನಿಯನ್ನು ನಿಗದಿಪಡಿಸಲಾಗಿದೆ. ಭತ್ತ (paddy) (ನೀರಾವರಿ), ಸೂರ್ಯಕಾಂತಿ (sun flower) (ಮಳೆಯಾಶ್ರಿತ), ಮುಸುಕಿನ ಜೋಳ (Maize) (ನೀರಾವರಿ), ಈರುಳ್ಳಿ (oninon) (ನಿರಾವರಿ) ಕೆಂಪು ಮೆಣಸಿನಕಾಯಿ (ನೀರಾವರಿ0 ಬೆಳೆಗಳಿಗೆ ವಿಮಾ ಕಂತು ತುಂಬಲು  ಆಗಸ್ಟ್ 14 ಕೊನೆಯ ದಿನವಾಗಿದೆ

ಪ್ರಕೃತಿ ವಿಕೋಪಕ್ಕೆ ವಿಮೆ ಪರಿಹಾರ:

ಈ ಯೋಜನೆಯಡಿ 2020 ಮುಂಗಾರು ಹಂಗಾಮಿನಲ್ಲಿ ನಿರ್ಧಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ ಮತ್ತು ಬೆಳೆ ಮುಳುಗಡೆ (ಇನಂಡೇಷನ್)ಗಳಿಂದ ಉಂಟಾಗುವ ನಷ್ಟದ ನಿರ್ಧರಣೆಯನ್ನು ವೈಯಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ನೀಡಲಾಗುವುದು. 

ಒಂದು ವೇಳೆ ಒಂದು ಅಧಿಸೂಚಿತ ಘಟಕದಲ್ಲಿ ಶೇಕಡಾ 25 ಕ್ಕಿಂತ ಹೆಚ್ಚು ವಿಸ್ತೀರ್ಣದಲ್ಲಿ ಬೆಳೆ ನಷ್ಟವಾದರೆ ಆ ಅಧಿಸೂಚಿತ ಘಟಕದಲ್ಲಿ ಬೆಳೆ ವಿಮೆಗೆ ಒಳಪಟ್ಟ ರೈತರಲ್ಲಿ ಬೆಳೆ ನಷ್ಟವಾದ ರೈತರಿಗೆ ಮಾತ್ರ ಮಾದರಿ ಸಮೀಕ್ಷೆಗನುಣವಾಗಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲಾಗುವುದು.

ಬೆಳೆ ನಷ್ಟದ(crop damage) ಬಗ್ಗೆ 72 ಗಂಟೆಯೊಳಗೆ ಮಾಹಿತಿ ನೀಡಬೇಕು:

ಪ್ರಕೃತಿ ವಿಕೋಪದ ಕಾರಣಗಳಿಂದ ಬೆಳೆ ನಷ್ಟ ಸಂಭವಿಸಿದರೆ ಬೆಳೆ ವಿಮೆ ಮಾಡಿಸಿರುವ ರೈತರು ಈ ಬಗ್ಗೆ ಸಂಬಂದಪಟ್ಟ ಹಣಕಾಸು ಸಂಸ್ಥೆ ಅಥವಾ ಅನುಷ್ಟಾನಗೊಳಿಸಿರುವ ವಿಮಾ ಸಂಸ್ಥೆಗಳ ಕಚೇರಿಗಳಿಗೆ ತಕ್ಷಣ ಸೂಚನೆ ನೀಡಬೇಕು ಮತ್ತು ಯಾವುದೇ ಸಂದರ್ಭದಲ್ಲಿ ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣಗಳನ್ನು 72 ಗಂಟೆಯೊಳಗೆ ತಿಳಿಸಬೇಕು.

ಮುಂಗಾರು ಹಂಗಾಮಿನಲ್ಲಿ ಅಧಿಸೂಚಿತ ಘಟಕದಲ್ಲಿ ಶೇ.75ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಟ ಶೇ. 25 ರಷ್ಟು ಬೆಳೆ ವಿಮಾ ನಷ್ಟ ಪರಿಹಾರ ನೀಡಲು, ಬಿತ್ತನೆಯಿಂದ ಕಟಾವು ಹಂತದವರೆಗಿನ ಮಧ್ಯದ ಅವಧಿಯಲ್ಲಿ ಶೇ. 50 ಕ್ಕಿಂತ ಹೆಚ್ಚು ಬೆಳೆ ನಷ್ಟ ಸಂಭವಿಸಿದರೆ ಮುಂಚಿತವಾಗಿ ಅಂದಾಜು ಮಾಡಲಾದ ಬೆಳೆ ವಿಮಾ ನಷ್ಟ ಪರಿಹಾರದಲ್ಲಿ ಶೇ.25 ರಷ್ಟು ಹಣವನ್ನು ಪರಿಹಾರವಾಗಿ ನೀಡಲಾಗುವುದು. 

ಪಹಣಿ, ಬ್ಯಾಂಕ್ ಪಾಸ್ ಬುಕ್ (Bank passbook), ಕಂದಾಯ ರಷಿದಿ ಬೇಕು:

ಪ್ರಸ್ತುತ ಸಾಲು ಹಾಗೂ ಹಂಗಾಮಿನಲ್ಲಿ ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಿದ ಬೆಳೆಗಳಿಗೆ ಇಚ್ಚೆಯುಳ್ಳ ಬೆಳೆ ಸಾಲ ಪಡೆಯದ ರೈತರು ಯೋಜನೆಯಡಿ ಭಾಗವಹಿಸಬಹುದು. ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ / ಖಾತೆ / ಪಾಸ್ ಪುಸ್ತಕ / ಕಂದಾಯ ರಶೀದಿಯನ್ನು ನೀಡಬೇಕು.

ಈ ಯೋಜನೆಯಡಿಯಲ್ಲಿ ಬೆಳೆ ಸಾಲ ಪಡೆಯದ ರೈತರು ಅಂದಾಜು / ಉಪೇಕ್ಷಿತ  ಬೆಳೆ ಬಿತ್ತನೆ ಆಧಾರದ ಮೇಲೆ ಬಿತ್ತನೆ ಪೂರ್ವದಲ್ಲೆ ಪಾಲ್ಗೊಳ್ಳಬಹುದು. ಬೆಳೆ ವಿಮೆಗೆ ನೊಂದಾಯಿಸಿದ ನಂತರ ಬೇರೆ ಬೆಳೆ ಬಿತ್ತನೆ ಮಾಡಿದಲ್ಲಿ ಯೋಜನೆಯಲ್ಲಿ ಭಾಗವಹಿಸಲು ಮಾರ್ಗಸೂಚಿಯಲ್ಲಿ ನಿಗದಿಪಡಿಸಿದ ಅವಧಿಯೊಳಗೆ ನೊಂದಾಯಿತ ಆಥಿಕ ಸಂಸ್ಥೆಗಳಲ್ಲಿ ಬಿತ್ತನೆ ದೃಡೀಕರಣ ಪತ್ರ ನೀಡಿ ವಿಮೆ ಮಾಡಿಸಿದ ಬೆಳೆಯನ್ನು ಬದಲಾಯಿಸಬೇಕು, ಅಂತಹ ಸಂದರ್ಬದಲ್ಲಿ ಹೆಚ್ಚುವರಿ ವಿಮಾ ಕಂತಿನ ವ್ಯತ್ಯಾಸದ ಮೊತ್ತವನ್ನು ರೈತರು ಭರಿಸತಕ್ಕದ್ದು, ಅಥವಾ ಹೆಚ್ಚುವರಿ ವಿಮಾ ಕಂತನ್ನು ರೈತರಿಗೆ ಮರು ಪಾವತಿಸಲಾಗುವುದು.

ಬೆಳೆ ಕಟಾವು ಪ್ರಯೋಗಗಳ ಆದಾರ ಮೇಲೆ ಪರಿಹಾರ(Insurance) :

ಸಾಮಾನ್ಯ ಬೆಳೆ ಅಂದಾಜು ಸಮೀಕ್ಷೆಯಡಿ ರಾಜ್ಯ ಸರ್ಕಾರವು ನಡೆಸುವ ಬೆಳೆ ಕಟಾವು ಪ್ರಯೋಗಗಳ ಆಧಾರದ ಮೇಲೆ ಕಂಡುಹಿಡಿಯಲಾದ ಇಳುವರಿ ಮಾಹಿತಿಯನ್ನು ಮಾತ್ರ ಪರಿಗಣಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ಲೆಕ್ಕಹಾಕಿ ಇತ್ಯರ್ಥಪಡಿಸಲಾಗುವುದು.

ಅಲ್ಲದೆ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಎರಡು ವಾರದೊಳಗೆ (ಹದಿನಾಲ್ಕು ದಿನಗಳು) ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾದರೆ ವೈಯಕ್ತಿಕವಾಗಿ ವಿಮಾ ಸಂಸ್ಥೆಯು ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲು ಜಿಲ್ಲೆಯ ಕೆಳಕಂಡ ಬೆಳೆಗಳನ್ನು ಯೋಜನೆಗೊಳಪಡಿಸಲಾಗಿದೆ.

ಸದರಿ ಯೋಜನೆಯಡಿ ಮುಖ್ಯ ಬೆಳೆಗಳನ್ನು ಜಿಲ್ಲೆಯ ಎಲ್ಲಾ ತಾಲ್ಲೂಕುವಾರು ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಹಾಗೂ ಉಳಿದ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಅನುಷ್ಠಾನಗೊಳಿಸಲು ಆದೇಶಿಸಲಾಗಿದೆ. ರೈತರು ಸಮೀಪದ ಬ್ಯಾಂಕ್‌, ಸಹಕಾರಿ ಸಂಘ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಲ್ಲಿವಿಮೆ ಕಂತು ಪಾವತಿಸಿ ಬೆಳೆ ವಿಮೆ (crop insurance) ನೋಂದಣಿ ಮಾಡಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯತ ಮಟ್ಟದ ಬೆಳೆಗಳಿಗೆ ಹಾಗೂ ಹೋಬಳಿ ಮಟ್ಟದ ಬೆಳೆಗಳಿಗೆ ಹತ್ತಿರದ ಬ್ಯಾಂಕುಗಳು ಅಥವಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಅಥವಾ ತಮ್ಮ ತಾಲೂಕಿನ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು.

ಅಥವಾ ಬೆಂಗಳೂರಿನ ಯುನಿವರ್ಸಲ್ ಸೊಂಪು (universal sompo) ಜನರಲ್ ಇನ್ಸುರೆನ್ಸ್ ಕಂಪನಿ ಲಿಮಿಟೆಡ್ ಕಂಪನಿಯ (ವಿಮಾ ಸಂಸ್ಥೆ) ಜಿಲ್ಲಾ ಪ್ರತಿನಿಧಿಯ ಮೊಬೈಲ್ ಸಂಖ್ಯೆ 74004 34603 ಹಾಗೂ ಟೋಲ್ ಫ್ರೀ ಸಂಖ್ಯೆ: 18002005142 ಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು.

2019 ರ ಮುಂಗಾರು ಹಂಗಾಮಿನಲ್ಲಿ ವಿವಿಧ ಬೆಳೆಗಳಿಗೆ ನಿಗಧಿಪಡಿಸಲಾಗಿರುವ ಇಂಡೆಮ್ನಿಟಿ ಮಟ್ಟ

ಕ್ರ.ಸಂ

ನಿರ್ಧರಿತ ಬೆಳೆಗಳು

ಇಂಡೆಮ್ನಿಟಿ ಮಟ್ಟ (ಶೇಕಡಾಃ

ಸಾಮಾನ್ಯ ವಿಮೆಗೆ ಪ್ರತಿ ಹೆಕ್ಟೇರ್ ಗೆ

 

(ಪ್ರಾರಂಭಿಕ ಇಳುವರಿಯ ಮೌಲ್ಯದವರೆಗೆ)

ನೋಂದಣಿ ಕೊನೆ ದಿನಾಂಕ

 

ವಿಮಾ ಮೊತ್ತ (ರೂ. ಗಳಲ್ಲಿ)

ರೈತರ ವಿಮಾ ಕಂತು (ಶೇಕಡಾ)

ರೈತರು ಪಾವತಿಸಬೇಕಾದ ವಿಮಾ ಮೊತ್ತ (ರೂ.ಗಳಲ್ಲಿ)

1

ಭತ್ತ (ನೀರಾವರಿ)

90

86000

2.00

1720

14-08-2020

2

ಮುಸುಕಿನಜೋಳ (ನೀರಾವರಿ)

90

59000

2.00

1180

14-08-2020

12

ಸೂರ್ಯಕಾಂತಿ (ನೀರಾವರಿ)

90

42000

2.00

840

14-08-2020

13

ಸೂರ್ಯಕಾಂತಿ (ಮಳೆ ಆಶ್ರಿತ)

80

35000

2.00

700

14-08-2020

20

ಈರುಳ್ಳಿ (ನೀರಾವರಿ)

90

75000

5.00

3750

14-08-2020

22

ಕೆಂಪು ಮೆಣಸಿನಕಾಯಿ (ನೀರಾವರಿ)

90

96000

5.00

4800

14-08-2020

 

 

Published On: 11 August 2020, 04:38 PM English Summary: Pradhana mantri Phasal bima yojane

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.