Agripedia

ಸಂಕಷ್ಟದಲ್ಲಿರುವ ಮೆಕ್ಕೆಜೋಳ ರೈತರ ಕೈ ಹಿಡಿದ ರಾಜ್ಯ ಸರ್ಕಾರ

15 May, 2020 7:06 PM IST By:
ಕೊರೋನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ವಿವಿಧ ವರ್ಗದ ಜನರಿಗೆ ನೆರವಾಗುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೂರನೇ ಆರ್ಥಿಕ ಪ್ಯಾಕೇಜ್‌ ಘೋಷಿಸಿದ್ದಾರೆ.
ಈಗಾಗಲೇ ಕೇಂದ್ರ ಸರ್ಕಾರವು ಸಹ ರೈತರು ಸೇರಿದಂತೆ ವಿವಿಧ ವರ್ಗಗಳಿಗೆ ನೆರವು ನೀಡುತ್ತಿದೆ. ಇದಕ್ಕೆ ರಾಜ್ಯ ಸರ್ಕಾರವೂ ಸಹ ಕೈಜೋಡಿಸುತ್ತಿದೆ.
ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯದಲ್ಲಿ ಮೆಕ್ಕೆಜೋಳ ಬೆಳೆಗಾರರಿಗೆ ತಲಾ 5 ಸಾವಿರ ನೆರವು ಘೋಷಿಸಲಾಗಿದೆ. ರಾಜ್ಯದಲ್ಲಿ 10 ಲಕ್ಷ ಬೆಳೆಗಾರರು ಇದ್ದು, ಇದಕ್ಕೆ 500 ಕೋಟಿ ವೆಚ್ಚವಾಗಲಿದೆ. ಆಶಾ ಕಾರ್ಯಕರ್ತರಿಗೆ ಸಹಕಾರ
ಇಲಾಖೆಯಿಂದ ಒಂದು ಬಾರಿಗೆ 3 ಸಾವಿರ ಪ್ರೋತ್ಸಾಹಧನ ಘೋಷಿಸಲಾಗಿದೆ. ಒಟ್ಟು 40 ಸಾವಿರ ಆಶಾ ಕಾರ್ಯಕರ್ತರಿದ್ದು, 12.50 ಕೋಟಿ ವೆಚ್ಚ ಆಗಲಿದೆ ಎಂದು ಸರ್ಕಾರ ತಿಳಿಸಿದೆ.
ಪ್ರಾಕೃತಿಕ ವಿಕೋಪಗಳಲ್ಲಿ ಸಾವನ್ನಪ್ಪುವ ಕುರಿ ಮೇಕೆ ಜಾನುವಾರುಗಳಿಗೆ ₹5 ಸಾವಿರ ಪರಿಹಾರ ಮುಂದುವರೆಸಲಾಗುವುದು ಎಂದೂ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.