ವಿಶ್ವ ಪ್ರಾಣಿ ಜನ್ಯ ರೋಗಗಳ ದಿನಾಚರಣೆ ಅಂಗವಾಗಿ ಕಲಬುರಗಿ ಪಶುಸಂಗೋಪನಾ ಇಲಾಖೆ ಹಾಗೂ ಸ್ನಾತಕೋತ್ತರ ಸರ್ಕಾರಿ ಪಶುವೈದ್ಯರ ಸಂಘ (ಬೆಂಗಳೂರು) ಇವರ ಸಹಯೋಗದಲ್ಲಿ ಕಲಬುರಗಿ ತಾಲೂಕಿನ ಹಾಗರಗುಂಡಗಿ ಗ್ರಾಮದಲ್ಲಿ ಇದೇ ಜುಲೈ.5ರಂದು ಬೆಳಗ್ಗೆ 9 ಗಂಟೆಗೆ ಪಶು ಆರೋಗ್ಯ ಶಿಬಿರ ಹಾಗೂ ಕುರಿ/ಮೇಕೆಗಳಿಗೆ ಪಿ.ಪಿ.ಆರ್ ಲಸಿಕಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಲಬುರಗಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಶಿಬಿರದಲ್ಲಿ ತಜ್ಞ ಪಶುವೈದ್ಯರು ಪಾಲ್ಗೊಳ್ಳಲಿದ್ದು, ಹಾಗರಗುಂಡಗಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಈ ಶಿಬಿರದ ಸದುಪಯೋಗಪಡೆದುಕೊಳ್ಳಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಟ್ಟಡ ಕಾರ್ಮಿಕರಿಗೆ ಆಹಾರ ಹಾಗೂ ಸುರಕ್ಷಾ ವಿತರಣೆ
ಜಿಲ್ಲೆಯ ಕಟ್ಟಡ ಕಾರ್ಮಿಕರಿಗೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿAದ ಅಫಜಲಪುರ ತಾಲೂಕಿನ ಚಿಣಮಗೇರಾದಲ್ಲಿ ನಿರ್ಮಾಣ ಹಂತದಲ್ಲಿರುವ ಕೆ.ಪಿ.ಶುಗರ್ಸ್
ಕಟ್ಟಡ ಬಳಿಯ ಕಾರ್ಮಿಕರಿಗೆ ಅಗತ್ಯ ಆಹಾರ ಧಾನ್ಯಗಳ ಕಿಟ್‌ಗಳನ್ನು ಇತ್ತೀಚೆಗೆ ವಿತರಿಸಲಾಯಿತು. ಅಫಜಲಪುರ ತಾಲೂಕಿನ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅಶೋಕ.ಟಿ ಅವರು ಕಾರ್ಮಿಕರಿಗೆ ಸಾಂಕೇತಿಕವಾಗಿ ಆಹಾರ ಮತ್ತು ಸುರಕ್ಷತಾ ಕಿಟ್‌ಗಳನ್ನು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸುರಕ್ಷತೆಯಿಂದ ಕಾರ್ಮಿಕರು ತಮ್ಮ ಕೆಲಸವನ್ನು ಮಾಡಬೇಕು ಹಾಗೂ ಕಾರ್ಮಿಕ ಇಲಾಖೆ ವತಿಯಿಂದ ವಿತರಿಸಲಾದ ಆಹಾರ ಸಾಮಗ್ರಿಗಳ ಕಿಟ್ ಹಾಗೂ ಸುರಕ್ಷಾ ಕಿಟ್‌ಗಳನ್ನು ಸದ್ಭಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ಅಲ್ಲದೇ, ಸಾಮಾಜಿಕ ಅಂತರ ಕಾಪಾಡಿಕೊಂಡು ಮಾಸ್ಕ್ ಧರಿಸುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ, ಕಲಬುರಗಿ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತರಾದ ನಾಗೇಶ.ಡಿ.ಅವರು ಮಾತನಾಡಿ, ಕೊವೀಡ್-19 ಸಂದರ್ಭದಲ್ಲಿ ವಿಶೇಷ ಆದ್ಯತೆ ಮೇರೆಗೆ ಸೇವಾ ಸೌಲಭ್ಯಗಳು ಹಾಗೂ ಹಣಕಾಸು ಪ್ಯಾಕೇಜುಗಳನ್ನು ಘೋಷಣೆ ಮಾಡುವುದರ ಮೂಲಕ ಕಾರ್ಮಿಕರ ನೆರವಿಗೆ ಸರ್ಕಾರ ನಿಂತಿದೆ ಎಂದರು.
ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್‌ನಲ್ಲಿ ತೊಗರಿ ಬೇಳೆ 1 ಕೆ.ಜಿ, ಅಡುಗೆಎಣ್ಣೆ 1 ಲೀಟರ್, ಗೋಧಿ ಹಿಟ್ಟು 2 ಕೆ.ಜಿ, ಅವಲಕ್ಕಿ 1 ಕೆ.ಜಿ, ಉಪ್ಪು 1 ಕೆ.ಜಿ, ಸಾಂಬರ ಪೌಡರ್ ಪಾಕೇಟು, ಖಾರಪುಡಿ ಪಾಕೇಟು, ಸಕ್ಕರೆ 1 ಕೆ.ಜಿ, ರವಾ 1 ಕೆ.ಜಿ ಹಾಗೂ ಅಕ್ಕಿ 5 ಕೆ.ಜಿ ಒಳಗೊಂಡಿರುತ್ತದೆ.
ಕಾರ್ಯಕ್ರಮದಲ್ಲಿ ಸಂತೋಷ ಲೋಕಂಡೆ ಸರ್ಕಾರಿ ಸಹಾಯಕಆಭಿಯೋಜಕರು ತಾಲೂಕಾ ನ್ಯಾಯಾಲಯ, ಅಫಜಲಪೂರ, ಹರಿದೇಶಪಾಂಡೆ ಜಿಲ್ಲಾ ಕಾರ್ಮಿಕ ಅಧಿಕಾರಿ ಕಲಬುರಗಿ , ರವೀಂದ್ರಕುಮಾರ ಹಿರಿಯ ಕಾರ್ಮಿಕ ನಿರೀಕ್ಷಕರು, ಸಂತೋಷ ಕುಲಕರ್ಣಿ, ಜಿಲ್ಲಾ ಬಾಲಕಾರ್ಮಿಕಯೋಜನಾ ಸೊಸೈಟಿ, ಯೋಜನಾನಿರ್ದೇಶಕರು, ಮಂಜುನಾಥ ಎಕ್ಸಿಕ್ಯೂಟೀವ್, ಶಾಂತಕುಮಾರ, ದಿಲೀಪ , ಕಾರ್ಮಿಕ ಇಲಾಖೆಯ ಅಧಿಕಾರಿಗಳು ಹಾಗೂ ಕೆ.ಪಿ.ಆರ್.ಶುಗರ್ಸ್ ನ ಸಿಬ್ಬಂದಿ ಹಾಜರಿದ್ದರು.