ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯು ಸರ್ಕಾರಿ ಸ್ನಾತಕೋತ್ತರ ಪಶುವೈದ್ಯಾಧಿಕಾರಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಕಲಬುರಗಿ ತಾಲೂಕಿನ ಬೇಲೂರು (ಜೆ) ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಾನುವಾರಗಳ ಆರೋಗ್ಯ ಹಾಗೂ ಬಂಜೇತನ ಶಿಬಿರದಲ್ಲಿ 218 ದನ ಮತ್ತು 11 ಎಮ್ಮೆಗಳಿಗೆ ಚಪ್ಪೆ ರೋಗ ಮತ್ತು ಗಂಟಲು ಬೇನೆ ರೋಗದ ವಿರುದ್ಧ ಲಸಿಕೆ ಹಾಕಲಾಗಿದೆ ಎಂದು ಪಶುಪಾಲನಾ ಇಲಾಖೆಯ ಪ್ರಭಾರಿ ಉಪನಿರ್ದೇಶಕ ಡಾ. ಸುಭಾಷಚಂದ್ರ ಅವರು ತಿಳಿಸಿದ್ದಾರೆ.
ಇದಲ್ಲದೆ 28 ಜಾನುವಾರುಗಳ ವಿವಿಧ ಆರೋಗ್ಯ ಸಮಸ್ಯೆಗೆ ತಜ್ಞ ಪಶುವೈದ್ಯರಿಂದ ಚಿಕಿತ್ಸೆ ನೀಡಲಾಯಿತು. ಸಂಚಾರಿ ಅಲ್ಟ್ರಾ ಸೌಂಡ್ ಯಂತ್ರದ ಮೂಲಕ 5 ಮೇಕೆಗಳು, 26 ದನ-ಎಮ್ಮೆಗಳಿಗೆ ಗರ್ಭ ಪರೀಕ್ಷೆ ಮಾಡಲಾಯಿತು.
45 ಕರುಗಳಿಗೆ ಹಾಗೂ 136 ಮೇಕೆಗಳಿಗೆ ಜಂತು ನಿವಾರಕ ಔಷಧಿ ನೀಡಲಾಯಿತು. 36 ಜಾನುವಾರುಗಳಿಗೆ ಲವಣ ಮಿಶ್ರಣ ಹಂಚಲಾಯಿತು. ಬಂಜೇತನ ಹೊಂದಿದ ರಾಸುಗಳಿಗೆ ತಜ್ಞ ಪಶು ವೈದ್ಯರಿಂದ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಒಟ್ಟಾರೆಯಾಗಿ ಗ್ರಾಮಸ್ಥರ ಸಹಕಾರದಿಂದ ಶಿಬಿರವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು ಎಂದು ಅವರು ತಿಳಿಸಿದ್ದಾರೆ.
ಶಿಬಿರದಲ್ಲಿ ಸರ್ಕಾರಿ ಸ್ನಾತಕೋತ್ತರ ಪಶುವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ. ಪ್ರಹ್ಲಾದ ಬುದರ, ಪಾಲಿಕ್ಲಿನಿಕ್ ಮುಖ್ಯ ಪಶುವೈದ್ಯಾಧಿಕಾರಿ ಡಾ. ವಿಜಯಕುಮಾರ ತೆಲಗಾರ, ಸಂಘದ ಇತರೆ ಪಧಾಧಿಕಾರಿಗಳು ಒಳಗೊಂಡ 12 ಪಶು ವೈದ್ಯರು, ಸಿಬ್ಬಂದಿಗಳು ಹಾಗೂ ಬೇಲೂರು (ಜೆ) ಗ್ರಾಮದ ಗ್ರಾಮ ಪಂಚಾಯತ್ ಸದಸ್ಯರು, ರೈತರು ಭಾಗವಹಿಸಿದರು.
ಹೈನುಗಾರಿಕೆ-ಎರೆಹುಳು ಗೊಬ್ಬರ ತಯಾರಿಕಾ ಕುರಿತು ತರಬೇತಿ ನೀಡಲು ರೈತರಿಂದ ಅರ್ಜಿ ಆಹ್ವಾನ
ಕಲಬುರಗಿ ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (ಕಿಟಸರ್ಡ್)ಯಿಂದ ಇದೇ ಏಪ್ರಿಲ್ 20 ರಿಂದ 29ರವರೆಗೆ 10 ದಿನಗಳ ಕಾಲ ಉಚಿತವಾಗಿ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಗ್ರಾಮೀಣ ಭಾಗದ 18 ರಿಂದ 45 ವರ್ಷದೊಳಗಿನ ಬಿ.ಪಿ.ಎಲ್. ಕುಟುಂಬದ ನಿರುದ್ಯೋಗ ಯುವಕ, ಯುವತಿಯವರು ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿ ಸಮಯದಲ್ಲಿ ಉಚಿತ ಊಟ, ವಸತಿಯ ಸೌಲಭ್ಯ ಒದಗಿಸಲಾಗುತ್ತದೆ. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ತರಬೇತಿ ಸಂಸ್ಥೆಯಿಂದ ಪಡೆದು ಭರ್ತಿ ಮಾಡಿ ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಬಿ.ಪಿ.ಎಲ್ ಕಾರ್ಡ್, ಬ್ಯಾಂಕ್ ಪಾಸ್‍ಬುಕ್ ಜಿರಾಕ್ಸ್ ಪ್ರತಿ ಹಾಗೂ ಇತ್ತೀಚಿನ 5 ಇತ್ತೀಚಿನ ಭಾವಚಿತ್ರಗಳನ್ನು ಲಗತ್ತಿಸಿ 2020ರ ಏಪ್ರಿಲ್ 20ರೊಳಗಾಗಿ ತರಬೇತಿ ಸಂಸ್ಥೆಯಲ್ಲಿ ಸಲ್ಲಿಸಬೇಕು.
ಅಭ್ಯರ್ಥಿಗಳು ಕಡ್ಡಾಯವಾಗಿ ಇದೇ ಏಪ್ರಿಲ್ 20 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಈ ತರಬೇತಿ ಸಂಸ್ಥೆ ಕಚೇರಿಯಲ್ಲಿ ನಡೆಯುವ ಸಂದರ್ಶನಕ್ಕೆ ದಾಖಲಾತಿಗಳೊಂದಿಗೆ ಭಾಗವಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 9243602888, 9886781239ಗಳಿಗೆ ಸಂಪರ್ಕಿಸಲು ಕೋರಲಾಗಿದೆ.