1. ಪಶುಸಂಗೋಪನೆ

ಕುರಿ, ಆಡು,ಕೋಳಿ ಸಾಕಾಣಿಕೆ ಹಾಗೂ ಹೈನುಗಾರಿಕೆಗೆ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನ

Ramlinganna
Ramlinganna
goat farming

ಆಡು, ಕುರಿ ಹಾಗೂ ಕೋಳಿ ಸಾಕಾಣಿಕೆ ಮಾಡುವ ಮತ್ತು ಹೈನುಗಾರಿಕೆಯಲ್ಲಿ ಆಸಕ್ತಿಯಿರುವ ರೈತರಿಗೆ ಇಲ್ಲಿದೆ ಸಂತಸದ ಸುದ್ದಿ. ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆ ಹಾಗೂ ಹೈನುಗಾರಿಕೆಯಲ್ಲಿ ರೈತರಿಗೆ ಹೆಚ್ಚಿನ ಮಾಹಿತಿ ನೀಡಿ ಅವರನ್ನು ಸ್ವಾವಲಂಬಿಯನ್ನಾಗಿ ಮಾಡುವ ಉದ್ದೇಶದಿಂದ ಈ ಉಚಿತ ತರಬೇತಿ ಶಿಬಿರ ಆಯೋಜಿಸಲಾಗಿದೆ.

ಹೌದು, ಬಾಗಲಕೋಟೆ ಜಿಲ್ಲೆಯ ಕೃಷಿಕರ ಸಂಪನ್ಮೂಲ ಕೇಂದ್ರದಿಂದ ಫೆಬ್ರುವರಿ ಮತ್ತು ಮಾರ್ಚ್ ತಿಂಗಳಲ್ಲಿ ಕುರಿ ಮತ್ತು ಆಡು ಸಾಕಾಣಿಕೆ, ಹೈನುಗಾರಿಕೆ ಹಾಗೂ ಕೋಳಿ ಸಾಕಾಣಿಕೆಯ ಉಚಿತ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.

ತರಬೇತಿ ಬಾಗಲಕೋಟೆಯ ಗದ್ದನಕೇರಿ ರೋಡ್, ಬಿವಿವಿ ಸಂಘದ ಸ್ಪಿನ್ನಿಂಗ್ ಮಿಲ್ ಆವರಣದಲ್ಲಿರುವ ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ಕುರಿ, ಮೇಕೆ ಘಟಕ ಸ್ಥಾಪನೆಗೆ ಶೇ. 90 ರಷ್ಟು ಸಹಾಯಧನ ನೀಡಲು ರೈತರಿಂದ ಅರ್ಜಿ ಆಹ್ವಾನ

ಆಸಕ್ತರು 18 ರಿಂದ 55 ವರ್ಷದೊಳಗಿನ ರೈತರು, ಸ್ವಸಹಾಯ ಸಂಘದ ಸದಸ್ಯರು, ಯುವಕರು, ಮಹಿಳೆಯರು ತಮ್ಮ ಈ ಉಚಿತ ತರಬೇತಿ ಶಿಬಿರದ ಲಾಭ ಪಡೆದುಕೊಳ್ಳಬಹುದು.  ಆಸಕ್ತ ರೈತರು ಮೊಬೈಲ್ ಸಂಖ್ಯೆ: 9482630790ಗೆ ಕರೆ ಮಾಡಿ ತಮ್ಮ ಹೆಸರು ನೋಂದಾಯಿಸುವಂತೆ ಪ್ರಕಟಣೆ ತಿಳಿಸಿದೆ.

Share your comments

Latest feeds

More News
Krishi Jagran Kannada Magazine Subscription Online Subscription
Krishi Jagran Kannada Subscription

CopyRight - 2021 Krishi Jagran Media Group. All Rights Reserved.