1. ಪಶುಸಂಗೋಪನೆ

ಹೈನುಗಾರಿಕೆ, ಕುರಿ, ಮೇಕೆ ಸಾಕಾಣಿಕೆಗೆ ತರಬೇತಿ ನೀಡಲು ಅರ್ಜಿ ಆಹ್ವಾನ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಸೆಪ್ಟೆಂಬರ್ 6 ರಿಂದ 8ರವರೆಗೆ ಮೂರು ದಿನಗಳ ಕಾಲ ಆಧುನಿಕ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆಗೆ ತರಬೇತಿ ನೀಡಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ದಾವಣಗೆರೆ ನಗರದ ಪಿ.ಬಿ. ರಸ್ತೆ ಅರುಣ ಚಿತ್ರಮಂದಿರದ ಎದುರಿನ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.

ತರಬೇತಿಯು ಬೆಳಗ್ಗೆ 10 ರಿಂದ ಸಾಯಂಕಾಲ 5 ರವರೆಗೆ ನಡೆಯಲಿದಂ. ಆಸಕ್ತ ರೈತರು, ಮಹಿಳೆಯರು, ನಿರುದ್ಯೋಗ ಯುವಕ ಯುವತಿಯರು ಇದರ ಅನುಕೂಲ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಪಶುವೈದ್ಯಕೀಯ ಸಹಾಯಕ ತರಬೇತಿ ಕೇಂದ್ರ, ದಾವಣಗೆರೆ, ದೂರವಾಣಿ ಸಂಖ್ಯೆ 08192 233787 ಗೆ ಸಂಪರ್ಕಿಸಬಹುದು ಎಂದು ಪಶು ವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಚಿತ ಹೈನುಗಾರಿಕೆಗೆ, ಕುರಿ ಸಾಕಾಣಿಕೆ ತರಬೇತಿ ನೀಡಲು ಅರ್ಜಿ ಆಹ್ವಾನ

ಪಶು ವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರ ಧಾರವಾಡದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಧಾರವಾಡ, ಗದಗ, ಹಾವೇರಿ, ಕಾರವಾರ ಜಿಲ್ಲೆಗ ರೈತ, ರೈತ ಮಹಿಳೆಯರಿಗೆ ಎರಡು ದಿನಗಳ ಕಾಲ ಹೈನುಗಾರಿಕೆ, ಕುರಿ, ಮೇಕೆ ಸಾಕಾಣಿಕೆಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಎರಡು ದಿನಗಳ ಕಾಲ ನಡೆಯುವ ತರಬೇತಿಯಲ್ಲಿ ತಂಡವಾರು ವೈಜ್ಞಾನಿಕ, ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆಯ ತರಬೇತಿ ನೀಡಲಾಗುವುದು. ಆಸಕ್ತ ರೈತರು ತಮ್ಮ ಹೆಸರನ್ನು ಎಸ್ಎಂಎಸ್ ಮೂಲಕ ಕಚೇರಿಯ ದೂರವಾಣಿ ಕರೆ ಮೂಲಂಕ ಅಥವಾ ಖುದ್ದಾಗಿ ಭೇಟಿ ನೀಡಿ ತಮ್ಮ ಹೆಸರನ್ನು ಬೆಳಗ್ಗೆ 10.15 ರಿಂದ ಸಾಯಂಕಾಲ 5.15ರವರೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836 2443743 ಗೆ ಅಥವಾ ಮೊಬೈಲ್ ಸಂಖ್ಯೆ 9591024499 ಗೆ ಸಂಪರ್ಕಿಸಲು ಕೋರಲಾಗಿದೆ.

ಪಶುಪಾಲನೆಗೆ ಉಚಿತ ಸಹಾಯವಾಣಿ

ಶುಪಾಲನೆ, ಕುರಿ ಸಾಕಾಣಿಕೆ ಅಷ್ಟೇ ಅಲ್ಲ, ಮೇಕೆ ಸಾಕಾಣಿಕೆ, ಕೋಳಿ ಸಾಕಾಣಿಕೆ, ಹೈನುಗಾರಿಕೆ, ಮೊಲ ಸಾಕಾಣಿಕೆ ಹಾಗೂ ಹಂದಿ ಸಾಕಾಣಿಕೆ ಕುರಿತು ಸಹ  ಸಂಪೂರ್ಣ ಮಾಹಿತಿ ಪಡೆಯಬಹುದು. ಇದಕ್ಕಾಗಿ ನೀವು ಯಾವುದೇ ಕರೆ ಶುಲ್ಕ ಪಾವತಿಸುವ ಅವಶ್ಯಕತೆಯಿಲ್ಲ. ಪಶು ಇಲಾಖೆಯ ತಜ್ಞರಿಂದ ಮಾಹಿತಿ ಪಡೆಯಲು ಬಯಸಿದ್ದರೆ ಈ ಉಚಿತ ಸಹಾಯವಾಣಿಗೆ ಕರೆ ಮಾಡಿದರೆ ಸಾಕು ನಿಮ್ಮ ಜಿಲ್ಲೆಯ, ತಾಲೂಕಿನ ಪಶು ಇಲಾಖೆಯ ಸಿಬ್ಬಂದಿಯೊಂದಿಗೆ ಸಂಪರ್ಕ ನೀಡಲಾಗುವುದು. ನಿಮಗೆ ಬೇಕಾದ ಮಾಹಿತಿ ಪಶು ಇಲಾಖೆಯ ಸಿಬ್ಬಂದಿಗಳಿಗೆ ಮನೆಯಲ್ಲಿಯೇ ಕುಳಿತು ಪಡೆಯಬಹುದು. ಅದು ಹೇಗೆ ಅಂದುಕೊಂಡಿದ್ದೀರಾ. ಇಲ್ಲಿದೆ  ಸಂಪೂರ್ಣ ಮಾಹಿತಿ.

ರೈತರು ದೂರವಾಣಿ ಸಂಖ್ಯೆ 8277 100 200 (ಉಚಿತ)  24*7  ಕರೆ ಮಾಡಿ ಪಶುವೈದ್ಯರು ಮತ್ತು  ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆಯಬಹುದು.

ಸಹಾಯವಾಣಿಯ ಮೂಲಕ ಲಭ್ಯವಿರುವ ಮಾಹಿತಿಗಳು:

ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ, ಮೊಲ ಸಾಕಾಣಿಕೆ, ಹಂದಿ ಸಾಕಾಣಿಕೆ, ಕೋಳಿ ಸಾಕಾಣಿಕೆ ಕುರಿತಂತೆ ಇಲಾಖೆಯ ತರಬೇತಿ ಕೇಂದ್ರಗಳಲ್ಲಿ ನಡೆಯುವ ತರಬೇತಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು.

ಜಾನುವಾರು ರೋಗಗಳು, ಲಸಿಕಾ ಕಾರ್ಯಕ್ರಮ ಹಾಗೂ ಜಾನುವಾರು ರೋಗ ತಡೆಗಟ್ಟಲು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ವಿವರ ನೀಡಲಾಗುವುದು. ದೇಶಿ ಹಾಗೂ ವಿದೇಶಿ ಜಾನವಾರು ತಳಿಗಳ ಬಗ್ಗೆ ಮಾಹಿತಿ ನೀಡಲಾಗುವುದು.

ಜಾನುವಾರುಗಳಲ್ಲಿ ನಿಯಮಿತವಾಗಿ ನೀಡಬೇಕಾಗಿರುವ ಲಸಿಕೆಗಳ ಕುರಿತು ಮಾಹಿತಿ ನೀಡಲಾಗುವುದು. ಪಶುಸಂಗೋಪನಾ ಚಟುವಟಿಕೆಗಳಿಗೆ ವಿವಿಧ ಬ್ಯಾಂಕುಗಳಿಂದ ದೊರೆಯಬಹುದಾದ ಸಾಲ ಸೌಲಭ್ಯ ಕುರಿತು ಮಾಹಿತಿ ನೀಡಲಾಗುವುದು.

ಮಿಶ‍್ರತಳಿ ಹಸು, ಕುರಿ ಮತ್ತು ಮೇಕೆ, ಹಂದಿಗಳ ಅಂದಾಜು ಬೆಲೆ ಹಾಗೂ ಅವುಗಳ ಲಭ್ಯತೆ ಕುರಿತಂತೆ ಸೂಕ್ತ ಸ್ಥಳಗಳ ವಿವರ ನೀಡಲಾಗುವುದು.

ಯಶಸ್ವಿ ಹೈನುಗಾರಿಕೆಗೆ ಅಗತ್ಯವಿರುವ ಮೇವಿನ ಬೆಳೆಗಳ ಬಗ್ಗೆ ಮಾಹಿತಿ ನೀಡಲಾಗುವುದು.

ತುರ್ತು ಪಶುವೈದ್ಯ ಸೇವೆಗಾಗಿ ಒಳಬರುವ ಕರೆಗಳನ್ನು ಹತ್ತಿರದ ಇಲಾಖಾ ತಾಂತ್ರಿಕ ಸಿಬ್ಬಂದಿ/ಅಧಿಕಾರಿಗೆ ವರ್ಗಾಯಿಸಿ, ಅಗತ್ಯ ಸೇವೆ ದೊರೆಯುವಂತೆ ಸಹಕರಿಸಲಾಗುವುದು.

Published On: 02 September 2021, 11:33 AM English Summary: Application invited for training dairy, sheep, goat rearing

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.