Animal Husbandry

ಹೈನುಗಾರಿಕೆ ಹಾಗೂ ಎರೆಹುಳು ಗೊಬ್ಬರ ತಯಾರಿಕೆಗೆ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನ

05 January, 2021 7:00 AM IST By:
Animal Husbandry

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಶಿವಮೊಗ್ಗದಲ್ಲಿ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಕುರಿತು 10 ದಿನಗಳ ಉಚಿತ ತರಬೇತಿ ಹಮ್ಮಿಕೊಳ್ಳಲಾಗಿದೆ.

ರೈತರು, ಕಾರ್ಮಿಕರು, ನಿರುದ್ಯೋಗಿ ಯುವಕ ಮತ್ತು ಯುವತಿಯರಿಂದ ಅರ್ಜಿ ಸಲ್ಲಿಸಿ ಈ ಉಚಿತ ತರಬೇತಿಯ ಲಾಭ ಪಡೆದುಕೊಳ್ಳಬಹುದು. ಈ ತರಬೇತಿಯು ಸಂಪೂರ್ಣ ಉಚಿತವಾಗಿರಲಿದೆ. ಇನ್ನೇಕೆ ತಡ ಇಂದೇ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಿ.

ಇದನ್ನೂ ಓದಿ: ಪಶುಪಾಲಕರಿಗೆ ಸಂತಸದ ಸುದ್ದಿ: ಕುರಿ ಸಾಕಾಣಿಕೆ, ಹೈನುಗಾರಿಕೆ ಮಾಡಬೇಕೇ ಈ ಉಚಿತ ಸಹಾಯವಾಣಿಗೆ ಕರೆ ಮಾಡಿ

8ನೇ ತರಗತಿ ಉತ್ತೀರ್ಣರಾದ 18 ರಿಂದ 45 ವರ್ಷದ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 6ರಿಂದ ತರಬೇತಿಗಳು ಆರಂಭಗೊಳ್ಳಲಿದೆ.

ಹೆಚ್ಚಿನ ಮಾಹಿತಿಗೆ ಮೊ.ಸಂ: 9481955721, 9743429595 ಸಂಪರ್ಕಿಸಬಹುದು. ತರಬೇತಿಯ ಸೌಲಭ್ಯ ಪಡೆದು ಸ್ವಾವಲಂಬಿಗಳಾಗಬೇಕು ಎಂದು ಪ್ರಕಟಣೆಯಲ್ಲಿ ಕೋರಲಾಗಿದೆ.