1. ಪಶುಸಂಗೋಪನೆ

Brucellosis : ಕಂದುರೋಗ ವಿರುದ್ಧ ಲಸಿಕೆ ಹಾಕಿಸಿ ಜಾನುವಾರುಗಳನ್ನು ರಕ್ಷಿಸಿ

Maltesh
Maltesh
Brucellosis Vaccine Program in shimoga

ಶಿವಮೊಗ್ಗ: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜಾನುವಾರುಗಳಲ್ಲಿ ಕಂದುರೋಗ ನಿಯಂತ್ರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಂದುರೋಗವು ಪ್ರಾಣಿಜನ್ಯರೋಗವಾಗಿದ್ದು, ರಾಸುಗಳಲ್ಲಿ ಈ ರೋಗದಿಂದ ಗರ್ಭ ಧರಿಸಿದ ಹಸುಗಳು 6 ತಿಂಗಳ ನಂತರ ಕಂದು ಹಾಕಬಹುದು. ಅವುಗಳ ಗರ್ಭ ಸ್ರಾವದಿಂದ ಮತ್ತು ಹಸಿ ಹಾಲನ್ನು ಹಾಗೆಯೇ ಉಪಯೋಗಿಸುವುದರಿಂದ ರೋಗವು ಮನುಷ್ಯರಿಗೂ ಹರಡಬಹುದು. ಸದರಿ ರೋಗವು ಮನುಷ್ಯರಿಗೆ ಬಂದರೆ ಸಂತಾನೋತ್ಪತ್ತಿ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ.

ಕಾರಣ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು, ಅರ್ಹ ಕರುಗಳಿಗೆ ಲಸಿಕೆ ಹಾಕಿಸಿ, ಸಂಭವಿಸಬಹುದಾದಆರ್ಥಿಕ ನಷ್ಟ ತಪ್ಪಿಸಿ ನಿಮ್ಮ ಜಾನುವಾರುಗಳನ್ನೂ ರಕ್ಷಿಸಿಕೊಳ್ಳಲು ಕೋರಿದೆ.ಜಿಲ್ಲೆಯಲ್ಲಿ ಸದರಿ ಲಸಿಕಾ ಕಾರ್ಯಕ್ರಮದಡಿ 4 ರಿಂದ 8 ತಿಂಗಳ ಆಕಳು/ಎಮ್ಮೆಗಳ ಹೆಣ್ಣು ಕರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಿದ್ದು, ದಿನಾಂಕ: 15-05-2023 ರಿಂದ 30-05-2023ರವರೆಗೆ ಲಸಿಕೆಯನ್ನು ಹಾಕಲಾಗುವುದು.

2023-24 ನೇ ಸಾಲಿನಲ್ಲಿ ವಾರ್ಷಿಕಒಟ್ಟು 75000 ಅರ್ಹ ಹೆಣ್ಣುಕರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಿದ್ದು, ಈ ಸುತ್ತಿನಲ್ಲಿ 25000 ಅರ್ಹ ಹೆಣ್ಣು ಕರುಗಳಿಗೆ ಲಸಿಕೆಯನ್ನು ಹಾಕಲಾಗುವುದು. ಜಿಲ್ಲೆಯಎಲ್ಲಾರೈತ ಬಾಂಧವರು ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೋರಲಾಗಿದೆ.

ಲಸಿಕಾದಾರರು ತಮ್ಮ ಮನೆ ಬಾಗಿಲಲ್ಲೇ ತಮ್ಮ ಕರುಗಳಿಗೆ ಕಿವಿಯೋಲೆ ಅಳವಡಿಸಿ ನೊಂದಣಿ ಮಾಡಿಕೊಂಡು ಲಸಿಕೆ ಹಾಕುತ್ತಾರೆ. ಎಲ್ಲಾರೈತ ಬಾಂಧವರು ಮತ್ತು ಪಶು ಪಾಲಕರು ತಮ್ಮಲ್ಲಿರುವ ಅರ್ಹ ಹೆಣ್ಣು ಕರುಗಳಿಗೆ ತಪ್ಪದೇ ಲಸಿಕೆ ಹಾಕಿಸುವ ಮೂಲಕ ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕಂದುರೋಗವನ್ನು ನಿಯಂತ್ರಿಸುವಲ್ಲಿ ಸಹಕರಿಸುವುದು.

ಲಸಿಕಾ ಕಾರ್ಯಕ್ರಮದ ವೇಳಾಪಟ್ಟಿಯನ್ನು ತಾಲ್ಲೂಕುವಾರು ಗ್ರಾಮವಾರುಚತಯಾರಿಸಲಾಗಿದ್ದು, ಪಶುಪಾಲನಾ ಇಲಾಖೆಯಅಧಿಕಾರಿ/ಸಿಬ್ಬಂದಿಯನ್ನೊಳಗೊಂಡ ಲಸಿಕಾ ತಂಡಗಳು ವೇಳಾಪಟ್ಟಿಯಂತೆ ಆಯಾ ಗ್ರಾಮಗಳಿಗೆ ಬೇಟಿ ನೀಡಿ ಜಾನುವಾರುಗಳಿಗೆ ಉಚಿತವಾಗಿ ಲಸಿಕೆಯನ್ನು ಹಾಕಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶು ಚಿಕಿತ್ಸಾ ಸಂಸ್ಥೆಗಳನ್ನು ಸಂಪರ್ಕಿಸಬೇಕೆಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ. ಶಿವಯೋಗಿ.ಬಿ.ಯಲಿ ತಿಳಿಸಿದ್ದಾರೆ.

Published On: 11 May 2023, 02:04 PM English Summary: Brucellosis Vaccine Program in shimoga

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.