Animal Husbandry

ಹೈನುಗಾರಿಕೆ-ಎರೆಹುಳು ಗೊಬ್ಬರ ತಯಾರಿಕಾ ಕುರಿತು ತರಬೇತಿ ನೀಡಲು ರೈತರಿಂದ ಅರ್ಜಿ ಆಹ್ವಾನ

12 April, 2021 11:39 PM IST By:
Animal Husbandry

ಕಲಬುರಗಿ ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (ಕಿಟಸರ್ಡ್)ಯಿಂದ ಇದೇ ಏಪ್ರಿಲ್ 20 ರಿಂದ 29ರವರೆಗೆ 10 ದಿನಗಳ ಕಾಲ ಉಚಿತವಾಗಿ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

  ಕಲಬುರಗಿ ಜಿಲ್ಲೆಯ ಗ್ರಾಮೀಣ ಭಾಗದ 18 ರಿಂದ 45 ವರ್ಷದೊಳಗಿನ  ಬಿ.ಪಿ.ಎಲ್. ಕುಟುಂಬದ ನಿರುದ್ಯೋಗ ಯುವಕ, ಯುವತಿಯವರು ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿ ಸಮಯದಲ್ಲಿ ಉಚಿತ ಊಟ, ವಸತಿಯ ಸೌಲಭ್ಯ  ಒದಗಿಸಲಾಗುತ್ತದೆ. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ತರಬೇತಿ ಸಂಸ್ಥೆಯಿಂದ ಪಡೆದು   ಭರ್ತಿ ಮಾಡಿ  ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಬಿ.ಪಿ.ಎಲ್ ಕಾರ್ಡ್, ಬ್ಯಾಂಕ್ ಪಾಸ್‍ಬುಕ್ ಜಿರಾಕ್ಸ್ ಪ್ರತಿ ಹಾಗೂ  ಇತ್ತೀಚಿನ 5 ಇತ್ತೀಚಿನ ಭಾವಚಿತ್ರಗಳನ್ನು ಲಗತ್ತಿಸಿ 2020ರ  ಏಪ್ರಿಲ್ 20ರೊಳಗಾಗಿ ತರಬೇತಿ ಸಂಸ್ಥೆಯಲ್ಲಿ ಸಲ್ಲಿಸಬೇಕು. 

ಅಭ್ಯರ್ಥಿಗಳು ಕಡ್ಡಾಯವಾಗಿ  ಇದೇ ಏಪ್ರಿಲ್ 20 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಈ ತರಬೇತಿ ಸಂಸ್ಥೆ ಕಚೇರಿಯಲ್ಲಿ ನಡೆಯುವ ಸಂದರ್ಶನಕ್ಕೆ ದಾಖಲಾತಿಗಳೊಂದಿಗೆ ಭಾಗವಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 9243602888, 9886781239ಗಳಿಗೆ ಸಂಪರ್ಕಿಸಲು ಕೋರಲಾಗಿದೆ.