1. ಪಶುಸಂಗೋಪನೆ

ನ. 4 ರಿಂದ 6 ರವರೆಗೆ ಮೂರು ದಿನಗಳ ಕಾಲ ಹೈನುಗಾರಿಕೆಗೆ ಉಚಿತ ತರಬೇತಿ

ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ನಗರದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುವೈದ್ಯಕೀಯ ಸಹಾಯಕರ ತರಬೇತಿ ಕೇಂದ್ರದಲ್ಲಿ ನವೆಂಬರ್ 4 ರಿಂದ 6 ರವರೆಗೆ ಮೂರು ದಿನಗಳ ಕಾಲ ಬೆಳಗ್ಗೆ 10 ರಿಂದ ಸಾಯಂಕಾಲ 5 ಗಂಟೆಯವರೆಗೆ ಆಧುನಿಕ ಹೈನುಗಾರಿಕೆ ಉಚಿತ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ತರಬೇತಿಗೆ ಹಾಜರಾಗುವ  ರೈತರು ಆಧಾರ್ ಕಾರ್ಡ್, ಎರಡು ಭಾವಚಿತ್ರ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಜಾತಿ ಪ್ರಮಾಣ ಪತ್ರದ ಪ್ರತಿ ನೀಡಬೇಕು.

ಆಸಕ್ತ ರೈತರು, ಮಹಿಳೆಯರು, ನಿರುದ್ಯೋಗ ಯುವಕ-ಯುವತಿಯರು ಈ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕೆಂದು ಕೋರಲಾಗಿದೆ.

ತರಬೇತಿಯ ಅವಧಿಯಲ್ಲಿ ಊಟ ವಸತಿ, ಸೌಕರ್ಯದ ವ್ಯವಸ್ಥೆಯಿರುವುದಿಲ್ಲ. ತರಬೇತಿ ಕಾರ್ಯಕ್ರಮಕ್ಕೆ ಪ್ರೋತ್ಸಾಹಧನ ಮತ್ತು ಭತ್ಯೆ ನೀಡಲಾಗುವುದಿಲ್ಲ. ತರಬೇತಿ ಪಡೆಯಲು 35 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

 ಹೆಚ್ಚಿನ ಮಾಹಿತಿಗಾಗಿ ಪಶು ವೈದ್ಯಕೀಯ ಸಹಾಯಕರ ತರಬೇತಿ ಕೇಂದ್ರ, ದಾವಣಗೆರೆ ದೂರವಾಣಿ ಸಂಖ್ಯೆ 08192-233787 ಗೆ ಸಂಪರ್ಕಿಸಬಹುದು ಎಂದು ಪಶುವೈದ್ಯಕೀಯ ಸಹಾಯಕ ತರಬೇತಿ ಕೇಂದ್ರದಮುಖ್ಯ ಪಶು ವೈದ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share your comments

Latest feeds

More News
Krishi Jagran Kannada Magazine Subscription Online Subscription
Krishi Jagran Kannada Subscription

CopyRight - 2021 Krishi Jagran Media Group. All Rights Reserved.