Animal Husbandry

ಕುರಿ, ಮೇಕೆ ಸಾಕಾಣಿಕೆ ಮಾಡಲು ಸಹಾಯಧನ-ಸಾಲಸೌಲಭ್ಯ: ಅರ್ಜಿ ಆಹ್ವಾನ

07 August, 2021 11:42 PM IST By:

2021-22ನೇ ಸಾಲಿನ ವಿಶೇಷ ಘಟಕ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪ ಯೋಜನೆ ಅಡಿಯಲ್ಲಿ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಕುರಿ/ಮೇಕೆ ಸಾಕಾಣಿಕೆಗಾಗಿ ಸಹಾಯಧನ ಹಾಗೂ ಸಾಲ ಸೌಲಭ್ಯ ನೀಡಲಾಗುತ್ತಿದ್ದು, ಇದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಉಪನಿರ್ದೇಶಕರು ತಿಳಿಸಿದ್ದಾರೆ.

ಅದೇ ರೀತಿ ವಲಸೆ ಕುರಿಗಾರ ಸದಸ್ಯರಿಗೆ ನೈಸರ್ಗಿಕ ವಿಕೋಪದಿಂದ ರಕ್ಷಣೆ ಪಡೆಯುವ ಸಲುವಾಗಿ ಪರಿಕರಗಳ ಕಿಟ್ (ಸಂಚಾರಿ ಟೆಂಟ್, ಸೋಲಾರ್ ಟಾರ್ಚ, ರೈನ್‌ಕೋಟ್ ಮತ್ತು ರಬ್ಬರ್ ಫ್ಲೋರ್ ಮ್ಯಾಟ್) ಗಳನ್ನು ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ  ಉಚಿತವಾಗಿ ಒದಗಿಸಲು ಅರ್ಜಿ  ಆಹ್ವಾನಿಸಲಾಗಿದೆ.

ಆಸಕ್ತಿಯುಳ್ಳ ಬೆಂಗಳೂರಿನ ಹೆಬ್ಬಾಳದ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ(ನಿ)ದಲ್ಲಿ ನೋಂದಣಿಯಾದ ಕಲಬುರಗಿ ಜಿಲ್ಲೆಯ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರು (ರಜಾ ದಿನಗಳನ್ನು ಹೊರತುಪಡಿಸಿ) 2021ರ ಆಗಸ್ಟ್ 21 ರೊಳಗಾಗಿ ಅರ್ಜಿ ಸಲ್ಲಿಸಬೇಕು. 

ನಿಗದಿತ ಅರ್ಜಿ ನಮೂನೆಯನ್ನು ಉಪ ನಿರ್ದೇಶಕರ ಕಛೇರಿ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ(ನಿ), ಕಲಬುರಗಿ-585105 ಕಚೇರಿಯಿಂದ ಪಡೆಯಬೇಕು. ಮತ್ತಿತರ ಹೆಚ್ಚಿನ ಮಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ  08472-237772ಗೆ ಸಂಪರ್ಕಿಸಲು ಕೋರಲಾಗಿದೆ.

ರೈತರಿಗೆ ವೈಜ್ಞಾನಿಕ ಹೈನುಗಾರಿಕೆ ತರಬೇತಿ: ಅರ್ಜಿ ಆಹ್ವಾನ

ಪ್ರಸಕ್ತ 2021-22ನೇ ಸಾಲಿನಲ್ಲಿ ಇದೇ ಆಗಸ್ಟ್ 17 ರಿಂದ 19ರವರೆಗೆ ರೈತರಿಗೆ ಆನ್‌ಲೈನ್ ಮೂಲಕ ಮೂರು ದಿನಗಳ ಕಾಲ ಉಚಿತವಾಗಿ ರೈತರಿಗೆ ವೈಜ್ಞಾನಿಕ ಹೈನುಗಾರಿಕೆ ತರಬೇತಿಯನ್ನು ಕಲಬುರಗಿಯ ಸೇಡಂ ರಸ್ತೆಯ ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರದ ಪಶು ಆಸ್ಪತ್ರೆಯ ಆವರಣದಲ್ಲಿ ನೀಡಲಾಗುತ್ತಿದ್ದು, ಇದಕ್ಕಾಗಿ ಆಸಕ್ತಿಯುಳ್ಳ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರದ ಉಪನಿರ್ದೇಶಕರು ತಿಳಿಸಿದ್ದಾರೆ.

ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿಯ ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರದಿಂದ ಅಥವಾ  ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆಯಬೇಕು.  ತರಬೇತಿಗೆ ಭಾಗವಹಿಸುವ ರೈತರಿಗೆ ಯಾವುದೇ ಭತ್ಯೆ ಇರುವುದಿಲ್ಲ. ಅರ್ಜಿ ಸಲ್ಲಿಸಲು 2021ರ ಆಗಸ್ಟ್ 13 ಕೊನೆಯ ದಿನವಾಗಿದೆ.

ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು, ಆಧಾರ್ ಕಾರ್ಡ್ ಝೆರಾಕ್ಸ್, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಹಾಗೂ ವಾಟ್ಸ್ ಆಪ್ ಇರುವ ಮೊಬೈಲ್ ಸಂಖ್ಯೆಗಳ ವಿವರದೊಂದಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಪ್ರಥಮ ದರ್ಜೆ ಸಹಾಯಕರಾದ ಸುನೀಲ ಇವರ ಮೊಬೈಲ್ ಸಂಖ್ಯೆ 7676475317ಗೆ ಸಂಪರ್ಕಿಸಲು ಕೋರಲಾಗಿದೆ.