Animal Husbandry

ರೈತರಿಗಾಗಿ ಪಶುಪಾಲನಾ ಸಹಾಯವಾಣಿ; ಮನೆಯಲ್ಲೆ ಕುಳಿತು ಮಾಹಿತಿ ಪಡೆದುಕೊಳ್ಳಿ!

02 May, 2022 2:18 PM IST By: Kalmesh T

ರೈತರು ಮನೆಯಲ್ಲಿಯೇ ಕುಳಿತು ಪಶುಪಾಲನೆ ಹಾಗೂ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯ ಕುರಿತು ಮಾಹಿತಿ ಪಡೆಯಬಹುದು. ಇದಕ್ಕಾಗಿ ರೈತರು ಯಾವುದೇ ಶುಲ್ಕ ಪಾವತಿಸಬೇಕಿಲ್ಲ.

ಪಶುಪಾಲಕರಿಗೆ ಸಹಾಯವಾಣಿ (Animal Husbandry Helpline)

ರೈತರು ಮನೆಯಲ್ಲಿಯೇ ಕುಳಿತು ಪಶುಪಾಲನೆ ಹಾಗೂ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯ ಕುರಿತು ಮಾಹಿತಿ ಪಡೆಯಬಹುದು. ಇದಕ್ಕಾಗಿ ರೈತರು ಯಾವುದೇ ಶುಲ್ಕ ಪಾವತಿಸಬೇಕಿಲ್ಲ. ಎಲ್ಲವೂ ಉಚಿತವಾಗಿರುತ್ತದೆ. ರೈತರು 8277100 200 ನಂಬರಿಗೆ ಕರೆ ಮಾಡಿದರೆ ಸಾಕು, ಅಗತ್ಯ ಮಾಹಿತಿಗಳನ್ನೆಲ್ಲಾ ಪಡೆಯಬಹುದು.

ದಿನದ 24 ಗಂಟೆ ಈ ಉಚಿತ ಸಹಾಯವಾಣಿ ಕಾರ್ಯನಿರ್ವಹಿಸಲಿದೆ. ಪಶುಸಂಗೋಪನಾ ಚಟುವಟಿಕೆಯಲ್ಲಿ ನಿರತರಾಗಿರುವ ರೈತರು ಯಾವುದೇ ಸಮಯದಲ್ಲಿ ಕರೆ ಮಾಡಿ ಸಹಾಯವಾಣಿಯಲ್ಲಿ ಕಾರ್ಯನಿರ್ವಹಿಸುವ ಪಶುವೈದ್ಯರು ಮತ್ತು ಇತರೆ ವಿಷಯ ತಜ್ಞರಿಂದ ಅಗತ್ಯ ಮಾಹಿತಿಗಳನ್ನು ಪಡೆಯಬಹುದು.

ಇನ್ನಷ್ಟು ಓದಿರಿ:

ಹೈನುಗಾರಿಕೆಯಲ್ಲಿ ಯಾರಿಗೆ 'ಡಬಲ್' ಲಾಭ ಬೇಕು!

ಮೇಕೆ ಸಾಕಾಣಿಕೆಗೆ ಲಾಭದಾಯಕವಾದ ತಳಿಗಳು ಯಾವು..? ಇಲ್ಲಿದೆ ಮಾಹಿತಿ

ಸಹಾಯವಾಣಿಯಲ್ಲಿ ಯಾವೆಲ್ಲ ಮಾಹಿತಿ ಲಭ್ಯ ಆಗಲಿವೆ

ಹೈನುಗಾರಿಕೆ, ಕುರಿ, ಮೇಕೆ, ಕೋಳಿ, ಮೊಲ ಸಾಕಾಣಿಕೆ ಹಾಗೂ ಹಂದಿ ಸಾಕಾಣಿಕೆ ಕುರಿತಂತೆ ಇಲಾಖೆಯ ತರಬೇತಿ ಕೇಂದ್ರಗಳಲ್ಲಿ ನಡೆಯುವ ತರಬೇತಿ ಕಾರ್ಯಕ್ರಮಗಳ ಮಾಹಿತಿ ನೀಡಲಾಗುತ್ತದೆ. ಪಶುಸಂಗೋಪನಾ ಚಟುವಟಿಕೆಗಳಿಗೆ ವಿವಿಧ ಬ್ಯಾಂಕುಗಳಿಂದ ದೊರೆಯಬಹುದಾದ ಸಾಲ ಸೌಲಭ್ಯ ಕುರಿತ ಮಾಹಿತಿ ನೀಡಲಾಗುವುದು.

ತುರ್ತು ಪಶುವೈದ್ಯ ಸೇವೆಗಾಗಿ ಒಳಬರುವ ಕರೆಗಳನ್ನು ಹತ್ತಿರದ ಇಲಾಖಾ ತಾಂತ್ರಿಕ ಸಿಬ್ಬಂದಿ/ ಅಧಿಕಾರಿಗೆ ವರ್ಗಾಯಿಸಿ ರೈತರು ಕೇಳಿದ ಎಲ್ಲಾ ಮಾಹಿತಿಗಳನ್ನು ನೀಡುವಲ್ಲಿ ಸಹಕರಿಸುವರು. ಇನ್ನೇಕೆ ತಡ, ಪಶುಪಾಲನೆ ಕುರಿತು ಮಾಹಿತಿ ಕೇಳಬೇಕೆ? ಪಶುಪಾಲನಾ ಉಚಿತ ಸಹಾಯವಾಣಿ ನಂಬರಿಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.

ನಿಮ್ಮ ದನ-ಕರುಗಳಿಗೆ ಚರ್ಮ ರೋಗ ಇದೆಯೇ? ಇದನ್ನು ಓದಿ

Central Government Scheme! Pashu kisan credit card scheme! ನಿಂದ ನಿಮಗೆ ಪಶುಸಂಗೋಪನೆಗಾಗಿ 60,000 ರೂಪಾಯಿ ನೀಡಲಾಗುತ್ತೆ!

ಮುಖ್ಯಮಂತ್ರಿ ಅಮೃತ ಜೀವನ ಯೋಜನೆ:

ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೆ ತಂದಿವೆ. ಈ ಪೈಕಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆ ಕೂಡ ಒಂದು. ರಾಜ್ಯದಲ್ಲಿ ಹೈನುಗಾರಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಹೈನುಗಾರಿಕೆಯಲ್ಲಿ ಆಸಕ್ತಿಯಿರುವ ರೈತರಿಗೆ ಮಿಶ್ರತಳಿ ಹಾಲು ಕರೆಯುವ ಹಸು ಅಥವಾ ಸುಧಾರಿತ ತಳಿಯ ಎಮ್ಮೆಯನ್ನು ಖರೀದಿಸಲು ರಾಜ್ಯ ಸರ್ಕಾರ ಸಬ್ಸಿಡಿ ಹಣವನ್ನು ನೀಡುತ್ತಿದೆ.

50 ಲೀ. ವರೆಗೆ ಹಾಲು ನೀಡುವ ದೇಸಿ ತಳಿಯ ಹಸುಗಳು! ರೈತರಿಗೆ ಇಲ್ಲಿದೆ ಉಪಯುಕ್ತ ಮಾಹಿತಿ.

ಮೇಕೆ ಸಾಕಾಣಿಕೆಗೆ ಲಾಭದಾಯಕವಾದ ತಳಿಗಳು ಯಾವು..? ಇಲ್ಲಿದೆ ಮಾಹಿತಿ