ಕರ್ನಾಟಕದಲ್ಲಿ ಕಳೆದ ಐದು ವರ್ಷಗಳಲ್ಲಿ ವಿದ್ಯುತ್ ತಂತಿ ತಗುಲಿ 43 ಆನೆಗಳು ಸಾವನ್ನಪ್ಪಿವೆ.
ಹೌದು ಈ ವಿಷಯವನ್ನು ಕೇಂದ್ರ ಅರಣ್ಯ, ಪರಿಸರ ಹಾಗೂ ಹವಾಮಾನ ಬದಲಾವಣೆಯ ರಾಜ್ಯ ಸಚಿವ ಅಶ್ವಿನ್ ಕುಮಾರ್ ಚೌಬೆ ತಿಳಿಸಿದ್ದಾರೆ.
ಕೃಷಿ ಭೂಮಿಯಲ್ಲಿ ಹಾವುಗಳ ನಿರ್ವಹಣೆ ಮತ್ತು ಮುಂಜಾಗ್ರತೆ ಕ್ರಮಗಳು
ಲೋಕಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ 5 ವರ್ಷಗಳಲ್ಲಿ 43 ಆನೆಗಳು ಮೃತಪಟ್ಟಿವೆ. ಅಲ್ಲದೇ ರೈಲು ಡಿಕ್ಕಿಯಿಂದಾಗಿ ಐದು ಆನೆಗಳು ಮೃತಪಟ್ಟಿವೆ. ವಿಷಪ್ರಾಶನದಿಂದಲೂ ಒಂದು ಆನೆ ಮೃತಪಟ್ಟಿದೆ ಎಂದು ತಿಳಿಸಿದ್ದಾರೆ.
ಆನೆ ಯೋಜನೆಯಡಿ ರಾಜ್ಯ ಸರ್ಕಾರಗಳಿಗೆ ಆರ್ಥಿಕ ಹಾಗೂ ತಾಂತ್ರಿಕ ನೆರವನ್ನು ಕೇಂದ್ರ ಸರ್ಕಾರವು ನೀಡುತ್ತಿದೆ. ಅಲ್ಲದೇ ಆನೆಗಳು ಹಾಗೂ ಅವುಗಳ ವಾಸಸ್ಥಾನ ಸಂರಕ್ಷಣೆಗೂ ಕೇಂದ್ರ ಸರ್ಕಾರವು ಮುಂದಾಗಿದೆ.
ವಿದ್ಯುತ್ ತಗುಲಿ ಆನೆಗಳು ಮೃತಪಡುವುದನ್ನು ತಪ್ಪಿಸಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳು ಹಾಗೂ ವಿದ್ಯುತ್ ಪ್ರಸರಣಾ ನಿಗಮಗಳಿಗೆ ಆಗಾಗ ನಿರ್ದೇಶನ ನೀಡಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ.
ಕಾರ್ಮಿಕರ ಕೊರತೆ ನಿವಾರಣೆಗೆ ರೈತರ ಉಪಾಯ: ಕೀಟನಾಶಕ ಸಿಂಪಡಣೆಗೆ ಯಂತ್ರಗಳ ಬಳಕೆ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಅವರು, ಮಾನವ–ಪ್ರಾಣಿ ಸಂಘರ್ಷ ತಡೆಗಟ್ಟಲು ಕರ್ನಾಟಕ ಸರ್ಕಾರ ತಜ್ಞರ ನೇತೃತ್ವದ ಕಾರ್ಯಪಡೆ ರಚಿಸಿದೆ.
ಅಲ್ಲದೇ ಮಾನವ–ಪ್ರಾಣಿ ಸಂಷರ್ಘ ತಡೆಯುವ ಉದ್ದೇಶದಿಂದ ರಾಜ್ಯ ಮಟ್ಟದಲ್ಲಿ ಸಮನ್ವಯ ಸಮಿತಿ ರಚಿಸುವಂತೆ ಆಯಾ ರಾಜ್ಯ ಸರ್ಕಾರಗಳಿಗೆ ಈ ವರ್ಷದ ಜೂನ್‌ನಲ್ಲಿ ಸೂಚಿಸಲಾಗಿತ್ತು.
ಆನೆ ಮತ್ತು ಮಾನವ ಸಂಘರ್ಷ ತಡೆಗಟ್ಟಲು ವೈಜ್ಞಾನಿಕ ಮಾರ್ಗಗಳನ್ನು ಅನುಸರಿಸುವಂತೆಯೂ ಸೂಚನೆ ನೀಡಲಾಗಿದೆ.
ಆನೆಗಳು ಸಾಗುವ ಹಾದಿಯ ಬಗ್ಗೆ ಸಮಗ್ರವಾಗಿ ತಿಳಿದುಕೊಳ್ಳಲು ವೈಜ್ಞಾನಿಕ ಅಧ್ಯಯನ ನಡೆಸಿ ಸೂಕ್ತ ಬದಲಾವಣೆ ಮಾಡಿಕೊಳ್ಳುವಂತೆಯೂ ಆಯಾ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.