1. ಪಶುಸಂಗೋಪನೆ

ಲಂಪಿಸ್ಕಿನ್ ರೋಗ ನಿಯಂತ್ರಣಕ್ಕೆ ಪಶುವೈದ್ಯಾಧಿಕಾರಿಗಳುಮುಂದಾಗಬೇಕು-ಪ್ರಭು ಚವ್ಹಾಣ

ಕಲ್ಯಾಣ ಕರ್ನಾಟಕ ಭಾಗದಲ್ಲಿ ‘ಲಂಪಿಸ್ಕಿನ್’  ಎಂಬ ರೋಗ ಕಾಣಿಸಿಕೊಂಡಿರುವುದು ಗಮನಕ್ಕೆ ಬಂದಿದೆ. ಪಶುವೈದ್ಯಾಧಿಕಾರಿಗಳು ರೋಗ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಒಂದೆಡೆ ಕೋರೊನಾ ಸಂಕಷ್ಟ, ಮತ್ತೊಂದೆಡೆ ನೆರೆಯಿಂದ ಆದಾಯವಿಲ್ಲದೆ ರೈತರು ಕಂಗೆಟ್ಟಿದ್ದಾರೆ. ಈ ಸಮಯದಲ್ಲಿ ಪಶುಸಂಗೋಪನೆ ಒಂದೇ ರೈತರಿಗೆ ಜೀವನಾಧಾರವಾಗಿದೆ. ಈಗ ಕಲ್ಯಾಣ ಕರ್ನಾಟಕ ಭಾಗದ ಕೆಲ ಜಿಲ್ಲೆಗಳಲ್ಲಿ ‘ಲಂಪಿಸ್ಕಿನ್’  ಜಾನುವಾರುಗಳಿಗೆ ಈ ವಿಚಿತ್ರ ಕಾಯಿಲೆ ಕಂಡುಬಂದಿದ್ದು ದನ-ಕರುಗಳ ಮೈಮೇಲೆ ಗುಳ್ಳೆ ಬರುವುದು, ಜ್ವರ ಕಾಣಿಸಿಕೊಳ್ಳುವುದು, ಆಹಾರ ಸೇವನೆಯಲ್ಲಿ ಸಮಸ್ಯೆ ಕಂಡು ಬರುತ್ತಿರುವುದರಿಂದ ಪಶುಪಾಲಕರು ಆಂತಂಕಕ್ಕಿಡಾಗಿರುವುದು ನನ್ನ ಗಮನಕ್ಕೂ ಬಂದಿದೆ.

ಕಲ್ಯಾಣ ಕರ್ನಾಟಕ ಭಾಗದ ಪಶುಸಂಗೋಪನೆ ಇಲಾಖೆಯ ಎಲ್ಲಾ ಅಧಿಕಾರಿಗಳಿಗೆ ಮತ್ತು ಪಶುವೈದ್ಯಾಧಿಕಾರಿಗಳಿಗೆ ರೋಗ ಹೆಚ್ಚು ಕಂಡುಬರುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ಅಲ್ಲದೇ ಹೆಚ್ಚು ಪ್ರಕರಣಗಳಿರುವ ಗ್ರಾಮಗಳಲ್ಲಿ ಪಶು ಆರೋಗ್ಯ ಶಿಬಿರ ನಡೆಸಿ ರೋಗವನ್ನು ಹತೋಟಿಗೆ ತರಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾನುವಾರುಗಳ ಆರೋಗ್ಯದಲ್ಲಿ ಏನಾದರೂ ಏರು-ಪೇರು ಕಂಡುಬದಲ್ಲಿ ತಕ್ಷಣಕ್ಕೆ ಹತ್ತಿರದ ಪಶು ಆರೋಗ್ಯ ಕೇಂದ್ರದಕ್ಕೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳಿ ಎಂದು ಪಶುಪಾಲಕರಿಗೆ  ಸಚಿವರು ಸಲಹೆ ನೀಡಿದ್ದಾರೆ. ಜಾನುವಾರುಗಳಲ್ಲಿನ ಈ ರೋಗ ನೋಣ ಹಾಗೂ ಸೊಳ್ಳೆಗಳಿಂದ ಹರಡುವುದರಿಂದ ಜಾನುವಾರು ಸಾಕಣೆದಾರರು ಸ್ವಚ್ಛತೆಯನ್ನು ಹೆಚ್ಚು ಕಾಪಾಡಬೇಕು. ಅಲ್ಲದೇ ಇಲಾಖೆಯಿಂದ ‘ಲಂಪಿಸ್ಕಿನ್’ ಹತೋಟಿಗೆ ತರಲು ಎಲ್ಲಾ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Published On: 31 August 2020, 03:18 PM English Summary: measures to take control of lumpy skin disease says animal husbandry minster prabhu chavan

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.