Animal Husbandry

ಸೆಪ್ಟೆಂಬರ್ 7 ರಿಂದ ರೈತರಿಗೆ ವೈಜ್ಞಾನಿಕ ಕುರಿ ಮತ್ತು ಮೇಕೆ ತರಬೇತಿ

30 August, 2021 9:17 PM IST By:

ಕಲಬುರಗಿ ಸೇಡಂ ರಸ್ತೆಯ ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರದ ಪಶು ಆಸ್ಪತ್ರೆಯ ಆವರಣದಲ್ಲಿ ರೈತರಿಗೆ ಇದೇ ಸೆಪ್ಟೆಂಬರ್ 7 ಹಾಗೂ 8 ರಂದು ಎರಡು ದಿನಗಳ ಕಾಲ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಹಾಗೂ ಸೆಪ್ಟೆಂಬರ್ 14 ಹಾಗೂ 15 ರಂದು ಎರಡು ದಿನಗಳ ಕಾಲ ವ್ಶೆಜ್ಞಾನಿಕ ಹೈನುಗಾರಿಕೆ ತರಬೇತಿಯನ್ನು ನೀಡಲಾಗುತ್ತಿದೆ ಎಂದು ಕಲಬುರಗಿ ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರದ ಉಪನಿರ್ದೇಶಕರು ತಿಳಿಸಿದ್ದಾರೆ.

ತರಬೇತಿಗೆ ಹಾಜರಾಗುವ ರೈತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಮಾಸ್ಕ್ನ್ನು ತಾವೇ ತರಬೇಕು. ತರಬೇತಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಯಾವುದೇ ಭತ್ಯೆ ನೀಡಲಾಗುವುದಿಲ್ಲ. ಮಧ್ಯಾಹ್ನ ಅಲ್ಪ ಉಪಹಾರ ನೀಡಲಾಗುತ್ತದೆ. ಎರಡು ದಿನಗಳ ಕಾಲ ಕಡ್ಡಾಯವಾಗಿ ತರಬೇತಿಗೆ ಹಾಜರಾದ್ದಲ್ಲಿ ಮಾತ್ರ ತರಬೇತಿ ಪ್ರಮಾಣಪತ್ರ ನೀಡಲಾಗುತ್ತದೆ.

ರೈತರು ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು, ಆಧಾರ್ ಕಾರ್ಡ್ ಝೆರಾಕ್ಸ್, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರವನ್ನು  ತರಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-220576ಗೆ ಸಂಪರ್ಕಿಸಲು ಕೋರಲಾಗಿದೆ. 

ಹೈನುಗಾರಿಕೆಗೆ, ಕುರಿ, ಮೇಕೆ ಸಾಕಾಣಿಕೆ ತರಬೇತಿ ನೀಡಲು ರಾಜ್ಯದಲ್ಲಿವೆ 25 ತರಬೇತಿ ಕೇಂದ್ರಗಳು

ಕರ್ನಾಟಕ ರಾಜ್ಯದಲ್ಲಿ ರೈತರಿಗೆ ಕುರಿ ಕುರಿ, ಮೇಕೆ ಸಾಕಾಣಿಕೆ, ಮೊಲ ಸಾಕಾಣಿಕೆ, ಹೈನುಗಾರಿಕೆ ಕುರಿತು ತರಬೇತಿ ನೀಡಲು ರಾಜ್ಯದಲ್ಲಿ 25 ತರಬೇತಿ ಕೇಂದ್ರಗಳಿವೆ. ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿಯೂ ತರಬೇತಿ ಕೇಂದ್ರಗಳಿವೆ.

1 ರಾಜ್ಯ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರ, ಹೆಸರಘಟ್ಟ

2 ಜಾನುವಾರು ಸಂವರ್ಧನಾ ಕೇಂದ್ರ, ಹೆಸರಘಟ್ಟ

3 ಜಾನುವಾರು ಸಂವರ್ಧನಾ ಕೇಂದ್ರ, ಕುರಿಕುಪ್ಪೆ

4 ಹಳ್ಳಿಕಾರ್ ತಳಿ ಸಂವರ್ಧನಾ ಕೇಂದ್ರ, ಕುಣಿಕೇನಹಳ್ಳಿ

5 ರಾಜ್ಯ ಕುಕ್ಕುಟ ಸಂವರ್ಧನಾ ಮತ್ತು ತರಬೇತಿ ಕೇಂದ್ರ, ಹೆಸರಘಟ್ಟ

6 ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರ, ಕೊಯ್ಲಾ

7 ಅಮೃತ್ ಮಹಲ್ ತಳಿ ಸಂವರ್ಧನಾ ಮತ್ತು ತರಬೇತಿ ಕೇಂದ್ರ, ಅಜ್ಜಂಪುರ

8 ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರ, ಧಾರವಾಡ

9 ಖಿಲ್ಲಾರ್ ತಳಿ ಸಂವರ್ಧನಾ ಕೇಂದ್ರ, ಬಂಕಾಪುರ

10 ಪ್ರಾದೇಶಿಕ ಕುಕ್ಕುಟ ಸಂವರ್ಧನಾ ಕೇಂದ್ರ, ಮಳವಳ್ಳಿ

11 ಪ್ರಾದೇಶಿಕ ಕುಕ್ಕುಟ ಸಂವರ್ಧನಾ ಮತ್ತು ತರಬೇತಿ ಕೇಂದ್ರ, ಗಂಗಾವತಿ

12 ಕೋಳಿ ಸಾಕಾಣಿಕೆ ಮತ್ತು ತರಬೇತಿ ಕೇಂದ್ರ, ದಕ್ಷಿಣ ಕನ್ನಡ

13 ಕೋಳಿ ಸಾಕಾಣಿಕೆ ಮತ್ತು ತರಬೇತಿ ಕೇಂದ್ರ, ಉತ್ತರ ಕನ್ನಡ

14 ಕೋಳಿ ಸಾಕಾಣಿಕೆ ಮತ್ತು ತರಬೇತಿ ಕೇಂದ್ರ, ವಿಜಯಪುರ

15 ಕೋಳಿ ಸಾಕಾಣಿಕೆ ಮತ್ತು ತರಬೇತಿ ಕೇಂದ್ರ, ರಾಯಚೂರು

16 ಕೋಳಿ ಸಾಕಾಣಿಕೆ ಮತ್ತು ತರಬೇತಿ ಕೇಂದ್ರ, ಕೋಲಾರ

17 ಹಂದಿ ತಳಿ ಸಂವರ್ಧನಾ ಕೇಂದ್ರ, ಕೊಯ್ಲಾ

18 ಹಂದಿ ತಳಿ ಸಂವರ್ಧನಾ ಕೇಂದ್ರ, ಕೂಡಿಗೆ

19 ರೈತರ ತರಬೇತಿ ಕೇಂದ್ರ, ಬೀದರ

20 ಪಶುವೈದ್ಯ ಪರೀಕ್ಷಕರ ತರಬೇತಿ ಕೇಂದ್ರ, ಧಾರವಾಡ

21 ಪಶುವೈದ್ಯ ಸಹಾಯಕರ ತರಬೇತಿ ಕೇಂದ್ರ, ಬಳ್ಳಾರಿ

22 ಪಶುವೈದ್ಯ ಪರೀಕ್ಷಕರ ತರಬೇತಿ ಕೇಂದ್ರ, ಹಾಸನ

23 ಪಶುವೈದ್ಯ ಸಹಾಯಕರ ತರಬೇತಿ ಕೇಂದ್ರ, ದಾವಣಗೆರೆ

24 ಪಶುವೈದ್ಯ ಪರೀಕ್ಷಕರ ತರಬೇತಿ ಕೇಂದ್ರ, ತುಮಕೂರು

25 ಪಶುವೈದ್ಯ ಸಹಾಯಕರ ತರಬೇತಿ ಕೇಂದ್ರ, ಬೆಳಗಾವಿ