2019-20ನೇ ಸಾಲಿನ ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡದವರು ಕೋಳಿ ಸಾಕಾಣಿಕೆ ಕೇಂದ್ರ ಸ್ಥಾಪನೆಗೆ ಸಹಾಯಧನ ನೀಡಲು ಫಲಾನುಭವಿಗಳ ಆಯ್ಕೆಗೆ ಅರ್ಹ ಪರಿಶಿಷ್ಠ ಪಂಗಡದ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿದಾರರು ಕಲಬುರಗಿ ಜಿಲ್ಲೆಯವರಾಗಿದ್ದು, ವಯಸ್ಸು 18 ರಿಂದ 60 ವರ್ಷಗಳ ಒಳಗಿರಬೇಕು. ಫಲಾನುಭವಿಯ ವಾರ್ಷಿಕ ಆದಾಯ 1.50 ಲಕ್ಷ ರೂ.ಗಳ ಒಳಗಿರಬೇಕು.
ಅರ್ಜಿಯನ್ನು ಜಂಟಿ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಮಿನಿ ವಿಧಾನ ಸೌಧ ಎದುರುಗಡೆ ಕಲಬುರಗಿ ಇಲ್ಲಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಇದೇ ಕಚೇರಿಗೆ ಫೆಬ್ರವರಿ 12 ರಿಂದ 20ರ ಸಾಯಂಕಾಲ 5-30 ಗಂಟೆ ವರೆಗೆ ಸಲ್ಲಿಸಬೇಕು ಎಂದು ಜಂಟಿ ನಿರ್ದೇಶಕ ಅಲ್ಲಾಭಕ್ಷ ಅವರು ತಿಳಿಸಿದ್ದಾರೆ.
ನಿಗಧಿತ ಅರ್ಜಿಯೊಂದಿಗೆ ಕೋಳಿ ಸಾಕಾಣಿಕೆ ಕೇಂದ್ರಗಳನ್ನು ಸ್ಥಾಪಿಸಲು ನಿವೇಶನ / ಜಮೀನಿನ ವಿವರ (ಪಹಣಿ) ಪ್ರತಿ, ಬಿ.ಪಿ.ಎಲ್ ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ ಕಾರ್ಡ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಜನ್ಮ ದಿನಾಂಕಕ್ಕೆ ಸಂಬಂಧಿಸಿದ ದಾಖಲಾತಿ ಪ್ರತಿ, ಘಟಕ ಸದುಪಯೋಗಪಡಿಸಿಕೊಳ್ಳುವ ಬಗ್ಗೆ ಪ್ರಮಾಣ ಪತ್ರ / ಮುಚ್ಚಳಿಕೆ ಪತ್ರ ಹಾಗೂ ಅರ್ಜಿದಾರರಾಗಲೀ ಅಥವಾ ಅವರ ಕುಟುಂಬದ ಸದಸ್ಯರಾಗಲೀ ಈ ಹಿಂದೆ ಸರ್ಕಾರದಿಂದ ಯಾವುದೇ ಸೌಲಭ್ಯಗಳನ್ನು ಪಡೆಯದೇ ಇರುವ ಬಗ್ಗೆ ಮತ್ತು ಅರ್ಜಿದಾರರು ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರು ಸರಕಾರಿ ನೌಕರಿಯಲ್ಲಿ ಇಲ್ಲದೇ ಇರುವ ಬಗ್ಗೆ ಮುಚ್ಚಳಿಕೆ ಪ್ರಮಾಣ ಪತ್ರ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಮತ್ತು ದೂರವಾಣಿ ಸಂಖ್ಯೆ: 08472-278621 ಹಾಗೂ ಮೊಬೈಲ್ ಸಂಖ್ಯೆ: 9243332555 ಸಂಪರ್ಕಿಸಲು ಕೋರಿದೆ.