Government Schemes

ಗುಡ್‌ನ್ಯೂಸ್‌: ಸ್ವಾಮಿ ವಿವೇಕಾನಂದ ಸ್ವಸಹಾಯ ಗುಂಪುಗಳಿಗೆ ತಲಾ 10 ಸಾವಿರ ಹಣ ರಿಲೀಸ್‌

14 March, 2023 10:15 AM IST By: Maltesh
10 thousand each to Swami Vivekananda Self Help Groups

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಯೋಜನೆಯಡಿ ಮೊದಲ ಹಂತದಲ್ಲಿ ೧ ಸಾವಿರದ ೭೫೪ ಗುಂಪುಗಳಿಗೆ ತಲಾ ೧೦ ಸಾವಿರ ಆವರ್ತ ನಿಧಿ ಬಿಡುಗಡೆ ಮಾಡಲಾಗಿದೆ ಎಂದು ಯುವಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ. ಈಗಾಗಲೇ ಮೊದಲ ಹಂತದಲ್ಲಿ ೫ ಸಾವಿರದ ೯೫೬ ಗ್ರಾಮ ಪಂಚಾಯತ್‌ನಲ್ಲಿ ಒಂದೊಂದು ಆದ್ಯತಾ ಗುಂಪುಗಳನ್ನು ರಚಿಸಲಾಗಿದೆ.

ಇನ್ನೊಂದು ವಾರದಲ್ಲಿ ನೋಂದಣಿಯಾಗಿರುವ ಎಲ್ಲಾ ಗುಂಪುಗಳಿಗೆ ಸುತ್ತುನಿಧಿ ಬಿಡುಗಡೆ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.  ಎರಡನೇ ಹಂತದಲ್ಲಿ ಪ್ರತಿ ಪಂಚಾಯತ್‌ಗೆ ಎರಡರಂತೆ ೧೨ ಸಾವಿರ ಸ್ವಾಮಿ ವಿವೇಕಾನಂದ ಯುವಕರ ಜಂಟಿ ಹಕ್ಕು ಬಾಧ್ಯತಾ ಗುಂಪುಗಳ ರಚನಾ ಕಾರ್ಯ ಪೂರ್ಣಗೊಳಿಸಲಾಗುವುದು. ಯೋಜನಾ ಚಟುವಟಿಕೆಗಳನ್ನು ಕೈಗೊಳ್ಳಲು ೫ ಲಕ್ಷ ಬ್ಯಾಂಕ್ ಸಾಲ ಹಾಗೂ ಒಂದು ಲಕ್ಷ ರೂಪಾಯಿ ಸಬ್ಸಿಡಿ ನೀಡಲಾಗುವುದು.

ಹವ್ಯಾಸವನ್ನೇ ಉದ್ಯಮವಾಗಿಸಿಕೊಂಡ 21ರ ಯುವತಿ; ತಿಂಗಳಿಗೆ 40ರಿಂದ 45 ಸಾವಿರ ಆದಾಯ!

ಎಸ್‌ವೈಎಸ್‌ವೈ ಯೋಜನೆ ರಾಜ್ಯದಲ್ಲಿ ಅನುಷ್ಠಾನಗೊಳಿಸಲು ವಿಷನ್ ಕರ್ನಾಟಕ ಫೌಂಡೇಷನ್, ಬೆಂಗಳೂರು ಎಂಬ ಸಂಸ್ಥೆಯ ಮೂಲಕ ಈಗಾಗಲೇ ೮೫ ಯೋಜನಾ ವರದಿಗಳನ್ನು ತಯಾರಿಸಿ  https://sysykar.in ಪೋರ್ಟಲ್‌ನಲ್ಲಿ ಅಳವಡಿಸಲಾಗಿದೆ. ರಚನೆಗೊಂಡ ಗುಂಪುಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ರೇಷ್ಮೆ ಬೆಲೆ ದಿಢೀರ್ ಕುಸಿತ: ಬೆಳೆಗಾರರಿಗೆ ಅಭಯ ನೀಡಿದ ಸಚಿವ ಡಾ. ನಾರಾಯಣಗೌಡ

ಕಚ್ಚಾ ರೇಷ್ಮೆ ಬೆಲೆ ದಿಢೀರ್ ಕುಸಿತದಿಂದ ರೇಷ್ಮೆ ಬೆಳೆಗಾರರು ತೊಂದರೆಗೊಳಗಾಗಿರುವ ಹಿನ್ನೆಲೆಯಲ್ಲಿ, ಸರ್ಕಾರದಿಂದಲೇ ಕಚ್ಚಾ ರೇಷ್ಮೆ ಖರೀದಿಸುವಂತೆ ರೇಷ್ಮೆ ಇಲಾಖೆ ಸಚಿವ ಡಾ.ನಾರಾಯಣಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಧಾನಸೌಧದಲ್ಲಿಂದು ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು.

Dearness allowance: ಸರ್ಕಾರಿ ನೌಕರರೇ ಗಮನಿಸಿ; ಶೀಘ್ರದಲ್ಲೇ 4% ತುಟ್ಟಿಭತ್ಯೆ ಹೆಚ್ಚಳ ನಿರೀಕ್ಷೆ!

 ಕಚ್ಛಾ ರೇಷ್ಮೆಗೂಡಿನ ದರ ದಿಢೀರ್ ಕುಸಿತದಿಂದ ರೈತರಿಗೆ ಸಮಸ್ಯೆ ಆಗಬಾರದು. ಸರ್ಕಾರ ರೇಷ್ಮೆ ಬೆಳೆಗಾರರ ಜೊತೆ ನಿಲ್ಲಬೇಕು. ನಾಳೆಯಿಂದಲೇ ಕೆಎಸ್‌ಎಂಬಿ ಮುಖಾಂತರ ಕಚ್ಚಾ ರೇಷ್ಮೆ ಖರೀದಿ ಮಾಡಬೇಕು.  ರೇಷ್ಮೆ ಗೂಡಿನ ದರ ಮತ್ತೆ ಉತ್ತಮ ಸ್ಥಿತಿಗೆ ತಲುಪಬೇಕು ಎಂದು ಸೂಚಿಸಿದ್ದಾರೆ. ಶಿಡ್ಲಘಟ್ಟ ಭಾಗದಲ್ಲಿ ೧೫ ದಿನ ಕಳೆದರೂ ರೇಷ್ಮೆ ಹುಳುಗಳು ಹಣ್ಣಾಗುತ್ತಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ ರೇಷ್ಮೆ ಇಲಾಖೆಯ ವಿಜ್ಞಾನಿಗಳು ಅಲ್ಲಿಗೆ ಭೇಟಿ ನೀಡಿ ನಿಖರ ಕಾರಣದ ಕುರಿತು ವರದಿ ನೀಡುವಂತೆಯೂ ಸಚಿವರು ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.