ಟ್ರ್ಯಾಕ್ಟರ್‌ ಟ್ರಾಲಿ ಖರೀದಿಸಲು ರೈತರಿಗೆ ಸರ್ಕಾರದಿಂದ ಶೇ 60ರಷ್ಟು ಸಬ್ಸಿಡಿ..ಅರ್ಜಿ ಸಲ್ಲಿಕೆ ಹೇಗೆ?

Maltesh
Maltesh
60% subsidy from the government for farmers to buy tractor trolley..How to apply?

ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ಲಭ್ಯತೆ ಆಧಾರದ ಮೇರೆಗೆ ನೀಡಲಾಗುವುದು. ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ಲಭ್ಯತೆ ಆಧಾರದ ಮೇಲೆ ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ನೀಡಲಾಗುವುದು. ಇಲ್ಲಿ ಹಿರಿತನಕ್ಕೆ ಅಂದರೆ ಲಭ್ಯತೆ ಆಧಾರದ ಮೇಲೆ ಅರ್ಜಿ ಮೊದಲು ಸಲ್ಲಿಸಿದವರಿಗೆ ಆದ್ಯತೆ ನೀಡಲಾಗುವುದು.

ಕೃಷಿ ಕ್ಷೇತ್ರದಲ್ಲಿ ಕಾರ್ಮಿಕರ ಕೊರತೆ ಹೆಚ್ಚುತ್ತಲೇ ಇದೆ. ಇದರಿಂದ ಸಹಜವಾಗಿಯೇ ಕೃಷಿ ಯಂತ್ರೋಪಕರಣಗಳ ಬೇಡಿಕೆ ಹೆಚ್ಚುತ್ತಿದೆ. ಅಲ್ಲದೆ, ರೈತರು ಕೂಡ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಲು ಉತ್ಸುಕರಾಗಿದ್ದಾರೆ. ಹೀಗಾಗಿ ರೈತರು ಕೃಷಿ ಯಂತ್ರೋಪಕರಣ ಕೊಳ್ಳಲು ಸರ್ಕಾರವೇ ಸಹಾಯಧನ ನೀಡುತ್ತಿದೆ. ಇದಕ್ಕಾಗಿ ಕೃಷಿ ಯಾಂತ್ರೀಕರಣ ಯೋಜನೆಯನ್ನು ಜಾರಿ ಮಾಡಿದೆ. 

ಕೃಷಿ ಯಾಂತ್ರೀಕರಣ ಯೋಜನೆಯಡಿ ರೈತರಿಗೆ ಶೇ.90ರಷ್ಟು ಸಹಾಯಧನ ಸಿಗುತ್ತದೆ. ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯಿಂದ ಲಭ್ಯತೆ ಆಧಾರದ ಮೇಲೆ ಕೃಷಿ. ಯಂತ್ರೋಪಕರಣಗಳನ್ನು ರೈತರಿಗೆ ನೀಡಲಾಗುವುದು.

ರೈತರ ಕೃಷಿ ಚಟುವಟಿಕೆಗೆ ಅನುಕೂಲವಾಗಲೆಂದು ಕೃಷಿ ಯಂತ್ರೋಪಕರಣಗಳಿಗೆ ಪ್ರೋತ್ಸಾಹ ಧನ ನೀಡಲಾಗುತ್ತದೆ. ಕೃಷಿ ಯಂತ್ರೋಪಕರಣಗಳಿಗೆ  ಆಯಾ ಯಂತ್ರೋಪಕರಣಗಳಿಗನುಗುಣವಾಗಿ ಶೇ. 60, ಶೇ.50  ಮತ್ತು ಶೇ. 40 ರಷ್ಟು ಸಹಾಯಧನ ನೀಡಲಾಗುವುದು. ಇದಕ್ಕಾಗಿ ರೈತಬಾಂಧವರು ಹತ್ತಿರದ ರೈತ ಸಂಪರ್ಕ ಕೇಂದ್ರದಲ್ಲಿ ಅರ್ಜಿ ಸಲ್ಲಿಸಿ ಸಬ್ಸಿಡಿಯಲ್ಲಿ ಯಂತ್ರೋಪಕರಣಗಳನ್ನು ಪಡೆಯಬಹುದು.

ರೈತರು ಯಾವ ಕೃಷಿ ಯಂತ್ರೋಪಕರಣಕ್ಕೆ ಅರ್ಜಿ ಸಲ್ಲಿಸ ಬಯಸುತ್ತೀರೋ ಎಂಬುದರ ಕುರಿತು ಅರ್ಜಿ ಸಲ್ಲಿಸಬೇಕು.  ಕೆ-ಕಿಸಾನ್ ನಲ್ಲಿ ಆನ್ ಲೈನ್ ನಲ್ಲಿ ನೋಂದಣಿ ಪ್ರತಿ (ಎಫ್ ಐಡಿ  ಸಂಖ್ಯೆಯೊಂದಿಗೆ) ರೈತರು ಆಧಾರ್ ಕಾರ್ಡ್ ಹೊಂದಿರಬೇಕು.

ಜಮೀನಿ ಪಹಣಿ ಸೇರಿದಂತೆ ಜಮೀನಿನ ಜಮಾಬಂಧಿ, ಬ್ಯಾಂಕ್ ಖಾತೆ ವಿವರ, ಪಾಸ್ ಪೋರ್ಟ್ ಅಳತೆಯ ಫೋಟೋ ಇರಬೇಕು. ರೈತರ ಬ್ಯಾಂಕ್ ಪಾಸ್ ಬುಕ್ ನಲ್ಲಿ ರೈತರ ವಂತಿಕೆ ಸರಬರಾಜು ಸಂಸ್ಥೆಗೆ  ಆರ್.ಟಿ.ಜಿ.ಎಸ್  ಜಮವಾಣೆಯಾದ ಝರಾಕ್ಸ್ ಪ್ರತಿ,  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದರೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಸೇರಿದಂತೆ ಅಗತ್ಯ ದಾಖಲೆಗಳನ್ನು ರೈತ ಸಂಪರ್ಕ ಕೇಂದ್ರ ಕಚೇರಿಯಲ್ಲಿ ವಿಚಾರಿಸಿ ನೀಡಬೇಕು

PUC ಪಾಸ್‌ ಆದ ವಿದ್ಯಾರ್ಥಿನಿಯರಿಗೆ 60 ಸಾವಿರ ರೂಪಾಯಿ ಸ್ಕಾಲರ್‌ಶಿಪ್‌..ಇಲ್ಲಿದೆ ಪೂರ್ಣ ಮಾಹಿತಿ

ಯಾವ ಯಾವ ಉಪಕರಣಗಳು ಸಿಗುತ್ತವೆ?

ಕೃಷಿ ಯಾಂತ್ರೀಕರಣ ಯೋಜನೆಯಡಿಯಲ್ಲಿ ಸಣ್ಣ ಟ್ರ್ಯಾಕ್ಟರ್, ಟಿಲ್ಲರ್, ಟ್ರ್ಯಾಕ್ಟರ್ ಟ್ರ್ಯಾಲಿ, ಕ್ರಾಪ್ ರೀಪರ್, ಪೋಸ್ಟ ಹೋಲ್ ಡಿಗ್ಗರ್, ಪಾವರ್ ವೀಡರ್, ರೈಸ್ ಟ್ರಾನ್ಸ್ ಪ್ಲೆಟರ್,  ಕೊಯ್ಲು ಒಕ್ಕಣೆಗಳು, ಅಂತರ ಬೇಸಾಯ ಉಪಕರಣಗಳು ಸೇರಿದಂತೆ ಇನ್ನಿತರ ಉಪಕರಣಗಳು ಸಿಗುತ್ತವೆ.

ಯಾವ ಕೃಷಿ ಯಂತ್ರೋಪಕರಣಕ್ಕೆ ಎಷ್ಟು ಸಹಾಯಧನ?

ಪವರ್ ಟಿಲ್ಲರ್ : ಖರೀದಿಗೆ ಸಾಮಾನ್ಯ ವರ್ಗದವರಿಗೆ ಶೇ. 50 ರಷ್ಟು ಸಹಾಯಧನ ಗರಿಷ್ಠ 72500 ರೂಪಾಯಿವರೆಗೆ ಸಹಾಯಧನ ಸಿಗಲಿದೆ. ಅದೇ ರೀತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ. 60ರಷ್ಟು ಸಹಾಯಧನ, ಗರಿಷ್ಠ 1 ಲಕ್ಷ ರೂಪಾಯಿಯವರೆಗೆ ಸಹಾಯಧನ ಸಿಗಲಿದೆ.

ಗಮನಿಸಿ: ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹೋಬಳಿಯಲ್ಲಿ ಲಭ್ಯವಿರುವ ಕೃಷಿ ಯಂತ್ರೋಪಕರಣಗಳ ಬಗ್ಗೆ ಮಾಹಿತಿ ಪಡೆಯಲು ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು. ಲಭ್ಯವಿರುವ ಕೃಷಿ ಯಂತ್ರೋಪಕರಣಗಳನ್ನು ಪಡೆಯಬಹುದು.

10ನೇ ತರಗತಿ ಪಾಸ್‌ ಆದವರಿಗೆ ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾನಲ್ಲಿ ಉದ್ಯೋಗಾವಕಾಶ

Published On: 31 August 2022, 02:20 PM English Summary: 60% subsidy from the government for farmers to buy tractor trolley..How to apply?

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.