Government Schemes

PM Sinchayi: ರೈತರಿಗೆ ಇಲ್ಲಿದೆ ಭರ್ಜರಿ ಸಬ್ಸಿಡಿ: ನೀರಾವರಿ ಯೋಜನೆಗೆ ಶೇ.90ರಷ್ಟು ಸಹಾಯಧನ

09 May, 2022 11:00 AM IST By: Kalmesh T
90% subsidy under Drip-spray irrigation scheme!

ತೋಟಗಳಿಗೆ ಅಥವಾ ಗದ್ದೆಗಳಿಗೆ  ನೀರಾವರಿ ಯೋಜನೆ ಅಳವಡಿಸಿಕೊಳ್ಳಲು ಬಯಸುವ ರೈತರಿಗೆ ಇಲ್ಲಿದೆ ಭರ್ಜರಿ ಸಹಾಯಧನ. Pradhan Matri Sinchayi Yojana ಮೂಲಕ ಸರ್ಕಾರದಿಂದ ಸಿಗಲಿದೆ ಶೇ.90ರಷ್ಟು ಸಬ್ಸಿಡಿ

ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಹಾಗೂ ತುಂತುರು ನೀರಾವರಿ ಅಳವಡಿಸುವ ಎಲ್ಲ ವರ್ಗದ ರೈತರಿಗೆ ನಿಯಮಾನುಸಾರ ಶೇ.90 ರಷ್ಟು ಸಹಾಯಧನವನ್ನು ಗರಿಷ್ಠ ಮಿತಿಗೆ ನೀಡಲಾಗುವುದು. ಪ್ರತಿಫಲಾನುಭವಿಗಳಿಗೆ ಗರಿಷ್ಠ 5 ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನ ಲಭ್ಯವಿದೆ.

ಇದನ್ನೂ ಓದಿರಿ: ಸಿಹಿ ಸುದ್ದಿ: ಪುಣ್ಯಕೋಟಿ ದತ್ತು ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ!

ರೈತರಿಗೆ ಸಿಹಿಸುದ್ದಿ : ಹಸು-ಎಮ್ಮೆ ಖರೀದಿಗೆ ರೂ.20 ಸಾವಿರ ಸಬ್ಸಿಡಿ! ರಾಜ್ಯ ಸರ್ಕಾರದ ಭರ್ಜರಿ ಕೊಡುಗೆ!

ತೋಟಗಾರಿಕೆಯಲ್ಲಿ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ಮೊದಲ ಆದ್ಯತೆಯಾಗಿದೆ.  ತೋಟಗಾರಿಕೆ ಬೆಳೆಗೆ ಪ್ರಮುಖ ಸಂಪನ್ಮೂಲವಾದದ್ದು ಜೀವಜಲ ನೀರು. ನೀರು ಮಿತವಾಗಿ ಬಳಸಿ, ರೈತರು ಉತ್ತಮ ಫಸಲು ಪಡೆಯುವ ಹಿನ್ನೆಲೆಯಲ್ಲಿ ಹನಿ ನಿರಾವರಿ, ತುಂತುರು ನೀರಾವರಿ ಯೋಜನೆಯನ್ನು ತೋಟಗಾರಿಕೆ ಇಲಾಖೆ ಅನುಷ್ಠಾನ ಮಾಡುತ್ತಿದೆ.

Pradhan Matri Sinchayi Yojana

ತೋಟಗಾರಿಕೆ ಕೃಷಿ ರೈತರಿಗೆ ಸೂಕ್ಷ್ಮ ನೀರಾವರಿಯಿಂದ ಪ್ರಯೋಜನವಾಗುತ್ತದೆ ಎಂದು ತೋಟಗಾರಿಕೆ ಬೆಳೆಗಳಿಂದ ಹನಿ ನಿರಾವರಿ ಮತ್ತು ತುಂತುರು ನೀರಾವರಿಯನ್ನು ಪ್ರೋತ್ಸಾಹಿಸಲಾಗುತ್ತಿದೆ. ಕೇಂದ್ರ ಸರಕಾರ ಸೂಕ್ಷ್ಮ ನೀರಾವರಿಯ ಮಹತ್ವವನ್ನು ಗುರುತಿಸಿ 2005-06ನೇ ಸಾಲಿನಿಂದ ಕೇಂದ್ರ ಪುರಸ್ಕೃತ ಸೂಕ್ಷ್ಮ ನೀರಾವರಿ ಯೋಜನೆಯನ್ನು ಪ್ರಾರಂಭಿಸಿತ್ತು.

ನಿಮ್ಮ ದನ-ಕರುಗಳಿಗೆ ಚರ್ಮ ರೋಗ ಇದೆಯೇ? ಇದನ್ನು ಓದಿ

Central Government Scheme! Pashu kisan credit card scheme! ನಿಂದ ನಿಮಗೆ ಪಶುಸಂಗೋಪನೆಗಾಗಿ 60,000 ರೂಪಾಯಿ ನೀಡಲಾಗುತ್ತೆ!

ನಂತರ ಇದೇ ಸೂಕ್ಷ್ಮ ನೀರಾವರಿ ಯೋಜನೆಯನ್ನು ರಾಷ್ಟ್ರೀಯ ಸೂಕ್ಷ್ಮ ನೀರಾವರಿ ಮಿಷನ್ ಆಗಿ ಮರು ನಾಮಕರಣ ಮಾಡಲಾಗಿತ್ತು. ನಂತರ 2014-15ನೇ ಸಾಲಿನಲ್ಲಿ ಸೂಕ್ಷ್ಮ ನೀರಾವರಿ ಕಾರ್ಯಕ್ರಮವನ್ನು ರಾಷ್ಟ್ರೀಯ ಸುಸ್ಥಿರ ಕೃಷಿ ಅಭಿಯಾನದಡಿ ಅನುಷ್ಠಾನಗೊಳಿಸಲಾಗಿತ್ತು.

ಈ ಬಾರಿ ಇದೇ ಯೋಜನೆಯನ್ನು ಪ್ರಧಾನ ಮಂತ್ರಿ ಸಿಂಚಾಯಿ ಯೋಜನೆ ಎಂದು ನಾಮಕರಣ ಮಾಡಿ ಅನುಷ್ಠಾನ ಗೊಳಿಸಲಾಗುತ್ತಿದೆ. ಯೋಜನೆಯ ಲಾಭ ಆಯಾ ಜಿಲ್ಲೆಯ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಹಾಗೂ ತುಂತುರು ನೀರಾವರಿ ಅಳವಡಿಸುವ ಎಲ್ಲ ವರ್ಗದ ರೈತರಿಗೆ ನಿಯಮಾನುಸಾರ ಶೇ.90 ರಷ್ಟು ಸಹಾಯಧನವನ್ನು ಗರಿಷ್ಠ ಮಿತಿಗೆ ಒಳಪಟ್ಟು ನೀಡಲಾಗುವುದು.

ಪ್ರತಿಫಲಾನುಭವಿಗೆ ಗರಿಷ್ಠ 5 ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನ ಲಭ್ಯವಿದ್ದು, ಎಲ್ಲ ವರ್ಗದ ಅರ್ಹ ರೈತ ಕುಂಟುಂಬಗಳಿಗೆ ಮೊದಲ 2 ಹೆಕ್ಟೇರ್ ಪ್ರದೇಶಕ್ಕೆ ಶೇ.90 ರಂತೆ ಮತ್ತು ಉಳಿದ 3 ಹೆಕ್ಟೇರ್ ಪ್ರದೇಶಕ್ಕೆ ಕೇಂದ್ರ ಸರಕಾರದ ಮಾರ್ಗಸೂಚಿಯನ್ವಯ ಶೇಕಡವಾರು ಮಿತಿಯೊಳಗೆ ಸಹಾಯಧನ ನೀಡಲಾಗುವುದು.

ಕುರಿ, ಮೇಕೆ ಸಾಕಾಣಿಕೆದಾರರಿಗೆ ಭೀತಿ ಹುಟ್ಟಿಸಿದ ಹಿರೇಬೇನೆ..ಈ ರೋಗದ ತಡೆಗಟ್ಟುವಿಕೆ ಹೇಗೆ..?

ಹೈನುಗಾರಿಕೆಯಲ್ಲಿ ಹೆಚ್ಚಿನ ಹಾಲು ಉತ್ಪಾದನೆಗೆ ಹೀಗೆ ಮಾಡಿ…

ತರಕಾರಿ ಹಾಗೂ ಹೂವು ಬೆಳೆಗಳು

ತರಕಾರಿ ಹಾಗೂ ಹೂವು ಬೆಳೆಗಳಿಗೆ ಗರಿಷ್ಠ 2 ಹೆಕ್ಟೇರ್ ವರೆಗೆ ಸಹಾಹಧನ ನೀಡಲಾಗುವುದು, ಅಡಕೆ ಹಾಗೂ ತೆಂಗು ತೋಟಗಳಲ್ಲಿ ಮಿಶ್ರ ಬೆಳೆಗಳನ್ನು ಬೆಳೆದು ಈ ಬೆಳೆಗೆ ಹನಿ ನೀರಾವರಿ ಅಳವಡಿಸಿದ್ದಲ್ಲಿ ಅಂತಹ ರೈತರಿಗೆ ಆದ್ಯತೆ ನೀಡಲಾಗುವುದು.

ಯೋಜನೆಯ ಉದ್ದೇಶ

ತೋಟಗಾರಿಕೆಯ ಯಾವುದೇ ಬೆಳೆಗಳಿಗೆ ಸೂಕ್ಷ್ಮ ನೀರಾವರಿ ಪದ್ಧತಿಯನ್ನು ಬಳಸಿದಲ್ಲಿ ನೀರಿನ ಮಿತ ವ್ಯಯವಾಗುತ್ತದೆ. ರೈತ ಫಲಾನುಭವಿಗಳಿಗೆ ಶೇ.90 ರಷ್ಟು ಸಹಾಯಧನ ನೀಡುವುದರ ಮೂಲಕ ಆಯಾ ರೈತರಲ್ಲಿ ಶೇ.50ರಿಂದ 70 ರಷ್ಟು ನೀರಿನ ಮಿತ ವ್ಯಯ ಸಾಧಿಸುವುದರ ಜತೆಗೆ ವಿದ್ಯುತ್ ಹಾಗೂ ಕೂಲಿ ವೆಚ್ಚವನ್ನು ಕಡಿಮೆ ಮಾಡಬಹುದು.

ಸೂಕ್ಷ್ಮ ನೀರಾವರಿಯಲ್ಲಿ ರಸಾವರಿ ಪದ್ಧತಿಯ ಮೂಲಕ ರಾಸಾಯನಿಕ ಗೊಬ್ಬರ ಬಳಕೆಯಲ್ಲಿ ಶೇ 30-40 ರಷ್ಟು ಮಿತವ್ಯಯ ಸಾಧಿಸಬಹುದಾಗಿದೆ ಮತ್ತು ಈ ಪದ್ಧತಿಯಿಂದ ಬೆಳೆಯುವ ಯಾವುದೇ ಬೆಳೆಗಳ ಇಳುವರಿ ಹಾಗೂ ಉತ್ಪಾದನೆಯನ್ನು ಹೆಚ್ಚಿಸಬಹುದು ಎಂದು ಉದ್ದೇಶಿಸಲಾಗಿದೆ.

ಗುಡ್‌ ನ್ಯೂಸ್‌: ಸಾವಯವ ಕೃಷಿಕರಿಗೆ ಇಲ್ಲಿದೆ ಬರೋಬ್ಬರಿ ರೂ.50,000 ಸಬ್ಸಿಡಿ!

ಫಲಾನುಭವಿಗಳ ಅರ್ಹತೆ

ತೋಟಗಾರಿಕೆ ಬೆಳೆ ಬೆಳೆಯುವ ಫಲಾನುಭವಿ ರೈತರ ಹೆಸರಿನಲ್ಲಿ ಜಮೀನು ಇರಬೇಕು. ಜಂಟಿ ಖಾತೆ ಇದ್ದಲ್ಲಿ ಇತರ ಖಾತೆದಾರರ ಒಪ್ಪಿಗೆ ಪತ್ರ ಇರಬೇಕು. ಮಹಿಳೆಯರ ಹೆಸರಿನಲ್ಲಿ ಜಮೀನು ಇದ್ದಲ್ಲಿ ಅವರೇ ಅರ್ಜಿ ಸಲ್ಲಿಸಬೇಕು. ಆಯಾ ಫಲಾನುಭವಿಗಳು ತೋಟಗಾರಿಕೆ ಬೆಳೆ ಬೆಳೆಯುವಲ್ಲಿ ಹೆಚ್ಚಿನ ಆಸಕ್ತಿ ಇರಬೇಕು.

ಇಂಥವರು ಸೂಕ್ಷ್ಮ ನೀರಾವರಿಯನ್ನು ಅಳವಡಿಸಿದ ನಂತರ ತೋಟಗಾರಿಕೆ ಬೆಳೆಯನ್ನು ಬೆಳೆಯಲು ಅವಕಾಶವಿರುತ್ತದೆ. ಆಯಾ ಫಲಾನುಭವಿಗಳ ತೋಟಗಳಲ್ಲಿ ಸೂಕ್ಷ್ಮ ನೀರಾವರಿ ಘಟಕಗಳು ಕಾರ್ಯನಿರ್ವಹಿಸಲು ಅಗತ್ಯ ವಿದ್ಯುತ್ ಶಕ್ತಿ ಇಲ್ಲದಿದ್ದಲ್ಲಿ ಇತರ ಶಕ್ತಿಮೂಲವನ್ನು ಹೊಂದಿರಬೇಕು.

ಅರ್ಜಿ ಸಲ್ಲಿಸುವುದು ಹೇಗೆ?

ಸಿಂಚಾಯಿ ಯೋಜನೆಗೆ ಅರ್ಜಿ ಸಲ್ಲಿಸುವ ತೋಟಗಾರಿಕೆ ಬೆಳೆಗಾರರು ನಿಗದಿತ ನಮೂನೆಯಲ್ಲಿ ನೋಂದಣಿ ಅರ್ಜಿಯನ್ನು ತೋಟಗಾರಿಕೆ ಇಲಾಖೆಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸುವಾಗ ಪಹಣಿ, ಚಕ್‌ಬಂದಿ, ನೀರಿನ ಮೂಲ, ಮಣ್ಣು ಹಾಗೂ ನೀರು ವಿಶ್ಲೇಷಣೆ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಹಾಗೂ ಅಗತ್ಯ ದಾಖಲೆಗಳನ್ನು ನೀಡಬೇಕು. ಕಚೇರಿಯಲ್ಲಿ ರೈತರು ಸಂಪೂರ್ಣ ಮಾಹಿತಿ ಪಡೆಯಬಹುದು.