ಚಿತ್ರದುರ್ಗ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿಗೆ, ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ
ಸಮುದಾಯ, ಒಕ್ಕಲಿಗ, ಲಿಂಗಾಯುತ, ಕಾಡುಗೊಲ್ಲ, ಹಟ್ಟಿ ಗೊಲ್ಲ, ಮರಾಠ ಮತ್ತು ಇವರ ಉಪ ಸಮುದಾಯಗಳನ್ನು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿನಲ್ಲಿ ಉಳಿದ ಸಮುದಾಯಗಳ ಅಭಿವೃದ್ಧಿಗಾಗಿ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಗ್ಯಾರಂಟಿಗಳಿಗೆ ಹಣದ ಸಮಸ್ಯೆ? ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
ಸ್ವಯಂ ಉದ್ಯೋಗ ವೈಯಕ್ತಿಕ ಸಾಲ, ಗಂಗಾ ಕಲ್ಯಾಣ ನೀರಾವರಿ, ಅರಿವು-ಶೈಕ್ಷಣಿಕ ಸಾಲ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ, ಸ್ವಾವಲಂಬಿ ಸಾರಥಿ, ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ. ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ.
ಯೋಜನೆಗಳ ಸೌಲಭ್ಯ ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ www.dbcdc.karnataka.gov.in ಅಥವಾ ದೂರವಾಣಿ ಸಂಖ್ಯೆ 080-22374832, 8050770004, 8050770005 ಅಥವಾ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ 08194-220882 ಗೆ ಸಂಪರ್ಕಿಸಬಹುದು ಜಿಲ್ಲಾ ವ್ಯವಸ್ಥಾಪಕ ಇ. ಸಂಪತ್‍ಕುಮಾರ್ ತಿಳಿಸಿದ್ದಾರೆ.