ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ 2021-22ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಸಫಾಯಿ ಕರ್ಮಚಾರಿ, ಮ್ಯಾನುವೆಲ್ ಸ್ಕ್ಯಾವೆಂಜರ್ ಹಾಗೂ ಅವರ ಅವಲಂಬಿತರಿಂದ ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಸ್ವಯಂ ಉದ್ಯಮಶೀಲತಾ (ಐ.ಎಸ್.ಬಿ.) ಯೋಜನೆ, ಐರಾವತ ಪ್ರವಾಸಿ ಟ್ಯಾಕ್ಸಿ ಮತ್ತು ಸರಕು ಸಾಗಾಣಿಕೆ ವಾಹನ ಯೋಜನೆ, ಪ್ರೇರಣೆ ಯೋಜನೆ ಮತ್ತು ಮೈಕ್ರೋ ಕ್ರೆಡಿಟ್ ಹಾಗೂ ಭೂ ಒಡೆತನ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಫಲಾನುಭವಿಗಳು ಆನ್‌ಲೈನ್ ಮೂಲಕ 2021ರ ಸೆಪ್ಟೆಂಬರ್ 20 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಹ ಫಲಾನುಭವಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕುರಿತು, ನಿಗಮದ ಯೋಜನೆಗಳ ವಿವರಗಳನ್ನು www.ksskdc.kar.nic.in ವೆಬ್‌ಸೈಟ್‌ದಿಂದ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಕಚೇರಿಗೆ ಸಂಪರ್ಕಿಸಲು ಕೋರಲಾಗಿದೆ
ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ
ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದಿಂದ 2021-22ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಪರಿಶಿಷ್ಟ ಜಾತಿಯ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ಕಾರ್ಯಕ್ರಮದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ - ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಪ್ರೇರಣಾ (ಮೈಕ್ರೋ ಕ್ರೆಡಿಟ್ ಫೈನಾನ್ಸ್) ಯೋಜನೆ (ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘದವರಿಗೆ), ಸಮಗ್ರ ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ-ಒಡೆತನ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಫಲಾನುಭವಿಗಳು ಆನ್‌ಲೈನ್ ಮೂಲಕ 2021ರ ಆಗಸ್ಟ್ 5 ರಿಂದ ಸೆಪ್ಟೆಂಬರ್ 5 ರೊಳಗಾಗಿ ಅರ್ಜಿಯನ್ನು ಅರ್ಜಿ ಸಲ್ಲಿಸಬೇಕು. ಅವಶ್ಯಕ ದಾಖಲೆಗಳನ್ನು ನಿಗಮ www.banjarathanda.kar.nic.in ವೆಬ್‌ಸೈಟ್‌ದಲ್ಲಿ ಅಪ್‌ಲೋಡ್ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಕಚೇರಿಗೆ ಸಂಪರ್ಕಿಸಲು ಕೋರಲಾಗಿದೆ.
ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಪರಿಶಿಷ್ಟ ಜಾತಿ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷö್ಮ ಮತ್ತು ಅತಿಸೂಕ್ಷö್ಮ ಸಮುದಾಯಗಳ ಅಭಿವೃದ್ಧಿ ಕೋಶದಿಂದ 2021-22ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಪರಿಶಿಷ್ಟ ಜಾತಿಯ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ಕಾರ್ಯಕ್ರಮಗಳ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ - ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಪ್ರೇರಣಾ (ಮೈಕ್ರೋ ಕ್ರೆಡಿಟ್ ಫೈನಾನ್ಸ್) ಯೋಜನೆ (ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘದವರಿಗೆ), ಸಮಗ್ರ ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ-ಒಡೆತನ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಫಲಾನುಭವಿಗಳು ಆನ್‌ಲೈನ್ ಮೂಲಕ 2021ರ ಸೆಪ್ಟೆಂಬರ್ 2 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅವಶ್ಯಕ ದಾಖಲೆಗಳನ್ನು ನಿಗಮದ https://adcl.karnataka.gov.in ವೆಬ್‌ಸೈಟ್‌ದಲ್ಲಿ ಅಪ್‌ಲೋಡ್ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮ ಕಚೇರಿ ಸಂಪರ್ಕಿಸಲು ಕೋರಲಾಗಿದೆ.
ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಫಲಾನುಭವಿಗಳಿಂದ ಅರ್ಜಿ ಆಹ್ವಾನ
ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ 2021-22ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಪರಿಶಿಷ್ಟ ಜಾತಿಯ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಸ್ವಯಂ ಉದ್ಯೋಗ ಕಾರ್ಯಕ್ರಮದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ-ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಪ್ರೇರಣಾ (ಮೈಕ್ರೋ ಕ್ರೆಡಿಟ್ ಫೈನಾನ್ಸ್) ಯೋಜನೆ (ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘದವರಿಗೆ), ಸಮಗ್ರ ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ-ಒಡೆತನ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಫಲಾನುಭವಿಗಳು ಆನ್‌ಲೈನ್ ಮೂಲಕ ವೆಬ್‌ಸೈಟ್‌ದಲ್ಲಿ 2021ರ ಸೆಪ್ಟೆಂಬರ್ 2 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅವಶ್ಯಕ ದಾಖಲೆಗಳನ್ನು ನಿಗಮ https://adijambava.online ವೆಬ್‌ಸೈಟ್‌ದಲ್ಲಿ ಅಪ್‌ಲೋಡ್ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಕಚೇರಿಗೆ ಸಂಪರ್ಕಿಸಲು ಕೋರಲಾಗಿದೆ