Government Schemes

ಯುವಕರಿಗೆ ಗುಡ್ ನ್ಯೂಸ್ -ದ್ವಿಚಕ್ರ ವಾಹನ ಖರೀದಿಗೆ 25 ಸಾವಿರ ರೂ. ಸಹಾಯಧನ, ಇಂದೇ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ

17 January, 2021 8:09 PM IST By:
Bike subsidy

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿನ ಬೈಕ್ ಖರೀದಿಗೆ ಸಹಾಯ ಧನ ಪಡೆಯಲು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜನವರಿ 23 ರವರೆಗೆ ವಿಸ್ತರಿಸಲಾಗಿದೆ.

2020-21ನೇ ಸಾಲಿಗೆ ಇ-ವಾಣಿಜ್ಯ ಸಂಸ್ಥೆಗಳಲ್ಲಿ ಉದ್ಯೋಗ ಪಡೆದು, ಮನೆ ಬಾಗಿಲಿಗೆ ಉತ್ಪನ್ನ ತಲುಪಿಸುತ್ತಿರುವ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, ಪ್ರವರ್ಗ-2ಎ, 3ಎ ಮತ್ತು 3ಬಿ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಸವಿತಾ, ಅಲೆಮಾರಿ/ಅರೆ ಅಲೆಮಾರಿ ಜನಾಂಗದವರು ಹಾಗೂ ಮತೀಯ ಅಲ್ಪಸಂಖ್ಯಾತರನ್ನು ಹೊರತು ಪಡಿಸಿ) ಯುವಕರಿಗೆ ಬೈಕ್ ಕೊಂಡುಕೊಳ್ಳಲು ನಿಗಮದಿಂದ 25,000 ಸಹಾಯ ಧನವನ್ನು ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳ ಮೂಲಕ ಸಾಲ ಪಡೆಯುವುದು. ಈ ಸೌಲಭ್ಯ ಪಡೆಯಬಯಸುವವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿಯನ್ನು ಆನ್‍ಲೈನ್ ಅಥವಾ ಆಫ್‍ಲೈನ್ ಮೂಲಕ ಜ.23 ರ ಸಂಜೆ 5.00 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ www.dbcdc.karnataka.gov.in ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿ ಸಂಪರ್ಕಿಸಬಹುದು.