Government Schemes

ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಫಲಾನುಭವಿಗಳಿಂದ ಅರ್ಜಿ ಆಹ್ವಾನ

03 August, 2021 11:45 PM IST By:

ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಪರಿಶಿಷ್ಟ ಜಾತಿ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದಿಂದ 2021-22ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಪರಿಶಿಷ್ಟ ಜಾತಿಯ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಾ.ಬಿ.ಆರ್ ಅಂಬೇಡ್ಕರ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. 

ಸ್ವಯಂ ಉದ್ಯೋಗ ಕಾರ್ಯಕ್ರಮಗಳ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ - ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಪ್ರೇರಣಾ (ಮೈಕ್ರೋ ಕ್ರೆಡಿಟ್ ಫೈನಾನ್ಸ್) ಯೋಜನೆ (ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘದವರಿಗೆ), ಸಮಗ್ರ ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ-ಒಡೆತನ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.     

ಅರ್ಹ ಫಲಾನುಭವಿಗಳು ಆನ್‌ಲೈನ್ ಮೂಲಕ 2021ರ ಸೆಪ್ಟೆಂಬರ್ 2 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅವಶ್ಯಕ ದಾಖಲೆಗಳನ್ನು ನಿಗಮದ https://adcl.karnataka.gov.in ವೆಬ್‌ಸೈಟ್‌ದಲ್ಲಿ ಅಪ್‌ಲೋಡ್ ಮಾಡಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮ, ಮೂರನೇ ಹಂತ, ಬಡೇಪುರ ಕಾಲೋನಿ, ಟೋಯಟೊ ಶೋರೂಂ ಎದುರಿಗೆ, ವಿಜಯಬ್ಯಾಂಕ್ ಮೇಲಗಡೆ, ಕಲಬುರಗಿ-585105 ಕಚೇರಿ ವಿಳಾಸಕ್ಕೆ ಸಂಪರ್ಕಿಸಲು ಕೋರಲಾಗಿದೆ. 

ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಫಲಾನುಭವಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ 2021-22ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಪರಿಶಿಷ್ಟ ಜಾತಿಯ ಫಲಾನುಭವಿಗಳಿಂದ ಅರ್ಜಿಗಳನ್ನು  ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಸ್ವಯಂ ಉದ್ಯೋಗ ಕಾರ್ಯಕ್ರಮದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ-ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಪ್ರೇರಣಾ (ಮೈಕ್ರೋ ಕ್ರೆಡಿಟ್ ಫೈನಾನ್ಸ್) ಯೋಜನೆ (ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘದವರಿಗೆ), ಸಮಗ್ರ ಗಂಗಾ ಕಲ್ಯಾಣ ಯೋಜನೆ  ಹಾಗೂ ಭೂ-ಒಡೆತನ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹ ಫಲಾನುಭವಿಗಳು ಆನ್‌ಲೈನ್ ಮೂಲಕ ವೆಬ್‌ಸೈಟ್‌ದಲ್ಲಿ 2021ರ ಸೆಪ್ಟೆಂಬರ್ 2 ರೊಳಗಾಗಿ ಅರ್ಜಿ ಸಲ್ಲಿಸಬೇಕು.  ಅವಶ್ಯಕ ದಾಖಲೆಗಳನ್ನು ನಿಗಮ https://adijambava.online  ವೆಬ್‌ಸೈಟ್‌ದಲ್ಲಿ ಅಪ್‌ಲೋಡ್ ಮಾಡಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, 3ನೇ ಹಂತ, ಬಡೇಪುರ ಕಾಲೋನಿ, ಟೋಯಟೊ ಶೋರೂಂ ಎದುರಿಗೆ, ವಿಜಯ ಬ್ಯಾಂಕ್ ಮೇಲಗಡೆ, ಕಲಬುರಗಿ-585105 ವಿಳಾಸಕ್ಕೆ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.

ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರು ಹೊಂದಿರುವ ಹಾಗೂ ಭೂ ಒಡೆತನ ಯೋಜನೆಯಡಿ ಮಂಜೂರಾತಿ ನೀಡಿರುವ ಒಣ ಭೂಮಿ (ಖುಷ್ಕಿ) ಜಮೀನಿಗೆ ವೈಯಕ್ತಿಕ ಕೊಳವೆ ಬಾವಿಗಳನ್ನು ಕೊರೆಸಿ, ಪಂಪ್ ಸೆಟ್ ಅಳವಡಿಸಿ, ವಿದ್ಯುದ್ಧೀಕರಣಗೊಳಿಸಿ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು.

ಈ ಯೋಜನೆಯಡಿ 6 ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಘಟಕ ವೆಚ್ಚ ರೂ. 4.50 ಲಕ್ಷಗಳಿದ್ದು ಉಳಿದ 24 ಜಿಲ್ಲೆಗಳಲ್ಲಿ ಘಟಕ ವೆಚ್ಚ ರೂ. 3.50 ಲಕ್ಷಗಳಿದ್ದು, ಈ ಪೈಕಿ ಸಹಾಯಧನ ಕ್ರಮವಾಗಿ ರೂ. 4.00 ಲಕ್ಷ ಹಾಗೂ ರೂ. 3.00 ಲಕ್ಷ ಹಾಗೂ 50 ಸಾವಿರ ರೂಪಾಯಿ  ಸಾಲವಾಗಿರುತ್ತದೆ. ಕೊಳವೆಬಾವಿಗಳ ವಿದ್ಯುದ್ಧೀಕರಣಕ್ಕಾಗಿ ಘಟಕ ವೆಚ್ಚದ ಪೈಕಿ ಪ್ರತಿ ಕೊಳವೆ ಬಾವಿಗೆ ರೂ. 50 ಸಾವಿರ ರೂಪಾಯಿ ನೇರವಾಗಿ ಎಸ್ಕಾಂಗಳಿಗೆ ಬಿಡುಗಡೆ ಮಾಡಲಾಗುವುದು.

ಭೂ ಒಡೆತನ ಯೋಜನೆಯಡಿ ಭೂ ರಹಿತ ಕೃಷಿ ಕಾರ್ಮಿಕರ ಕುಟುಂಬದ ಮಹಿಳೆಯರಿಗೆ ಕನಿಷ್ಟ 2 ಎಕರೆ ಖುಷ್ಕಿ ಅಥವಾ 1 ಎಕರೆ ತರಿ ಅಥವಾ ಕನಿಷ್ಟ 1/2 ಎಕರೆ (20 ಗುಂಟೆ) ಭಾಗಾಯ್ತು ಜಮೀನನ್ನು ಅಥವಾ ಘಟಕ ವೆಚ್ಚಕ್ಕೆ ಲಭ್ಯವಾಗುವಷ್ಟು ಜಮೀನನ್ನು ಖರೀದಿಸಿ ನೋಂದಣಿ ಮಾಡಿಕೊಡಲಾಗುವುದು.

ನಿಗಮದಿಂದ ಸಹಾಯಧನ ಹಾಗೂ ಸಾಲವನ್ನು ಮಂಜೂರು ಮಾಡಿ ಭೂರಹಿತ ಕೃಷಿ ಕರ‍್ಮಿಕ ಮಹಿಳೆಯರಿಗೆ ಜಮೀನನ್ನು ಖರೀದಿಸಿ ಕೊಡಲಾಗುವುದು. ಘಟಕ ವೆಚ್ಚ ರೂ. 15 ಲಕ್ಷಗಳಾಗಿದ್ದು, ಈ ಪೈಕಿ ರೂ. 7.50 ಲಕ್ಷ ಸಹಾಯಧನ ಹಾಗೂ ರೂ. 7.50ಲಕ್ಷ ಸಾಲವಾಗಿರುತ್ತದೆ. ಸಾಲದ ಮೊತ್ತವನ್ನು ಶೇ. 6 ರ ಬಡ್ಡಿ ದರದಲ್ಲಿ ೨೦ ಅರ್ಧ ವಾರ್ಷಿಕ ಕಂತುಗಳಲ್ಲಿ ಮರುಪಾವತಿಸಬೇಕು.