Government Schemes

ಕೃಷಿ ಹೊಂಡ ನಿರ್ಮಾಣಕ್ಕೆ ರೈತರಿಗೆ ಇಲ್ಲಿದೆ ಶೇ.80ರಷ್ಟು ಸಹಾಯಧನ..!

08 June, 2022 10:01 AM IST By: Kalmesh T
Eighty per cent subsidy for the construction of farm pits

ರೈತರು ತಮ್ಮ ಜಮೀನಿನಲ್ಲಿ ಕೃಷಿ ಹೊಂಡ (Farm Pond) ನಿರ್ಮಾಣಕ್ಕೆ ಶೇ. 80 ರಷ್ಟು ಸಹಾಯಧನ ಪಡೆಯಬಹುದು. ರೈತರಿಗೆ ನೀರಾವರಿ ಸೌಲಭ್ಯ ಒದಗಿಸಲು ಸರ್ಕಾರವು ಕೃಷಿ ಹೊಂಡ ನಿರ್ಮಾಣಕ್ಕೆ ಸಹಾಯಧನವನ್ನು ನೀಡುವ ಯೋಜನೆಯನ್ನು ಆರಂಭಿಸಿದೆ.

ಇದನ್ನೂ ಓದಿರಿ: ಗುಡ್‌ನ್ಯೂಸ್‌; ಡ್ರೋನ್ ಖರೀದಿಸುವ ರೈತರಿಗೆ ಸರ್ಕಾರ ನೀಡುತ್ತಿದೆ ₹5 ಲಕ್ಷ ಸಹಾಯಧನ!

ಹಸು ಸಾಕಾಣಿಕೆಗೆ ₹60,249, ಎಮ್ಮೆ ಸಾಕಾಣಿಕೆಗೆ ₹40,783 ಸಹಾಯಧನ! ಯಾವ ಪ್ರಾಣಿ ಸಾಕಾಣಿಕೆಗೆ ಎಷ್ಟು ಹಣ ಗೊತ್ತೆ?

ಮೊದಲು ಕೃಷಿಭಾಗ್ಯ ಯೋಜನೆಯಡಿಯಲ್ಲಿ ಕೃಷಿ ಹೊಂಡ (Farm Pond) ನಿರ್ಮಾಣ ಮಾಡಲು ಸಹಾಯಧನ ನೀಡಲಾಗುತ್ತಿತ್ತು. ಈಗ (ನರೇಗಾ) ಮಹಾತ್ಮಗಾಂಧಿ ರಾಷ್ಚ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಸಹಾಯಧನವನ್ನು ನೀಡಲಾಗುತ್ತಿದೆ.

ರೈತರ ಕೃಷಿ ಚಟುವಟಿಕೆಗೆ ಮತ್ತು ನೀರಿನ ಅಭಾವ ನೀಗಿಸಲು ಮಳೆಯ ನೀರನ್ನು ಸಂಗ್ರಹಿಸಿ ಅದನ್ನು ಕೃಷಿ ಚಟುವಟಿಕೆಯಲ್ಲಿ ಬಳಸಿಕೊಳ್ಳುವುದು ಇದರ ಉದ್ದೇಶವಾಗಿದೆ. 

ಕೃಷಿ ಹೊಂಡ ರಚನೆ ನಂತರ ನೀರು ಇಂಗದಂತೆ ತಡೆಯಲು ಪಾಲಿಥಿನ್ ಹೊದಿಕೆ ಅಳವಡಿಕೆ, ಹೊಂಡದಿಂದ ನೀರೆತ್ತಲು ಡೀಸೆಲ್ ಪಂಪ್ ಸೆಟ್, ತುಂತುರು ನೀರಾವರಿ ಅಳವಡಿಕೆಗೆ ಈ ಯೋಜನೆಯಡಿಯಲ್ಲಿ ಅವಕಾಶವಿದೆ. ಕೃಷಿಹೊಂಡ ನಿರ್ಮಾಣ ಮಾಡಿದ ರೈತರಿಗೆ ಅಳತೆಗನುಗುಣವಾಗಿ ಶೇ 80 ಸಬ್ಸಿಡಿ ನೀಡಲಾಗುವುದು.

ಸಾವಯವ ಗೊಬ್ಬರ ಖರೀದಿಸುವ ರೈತರಿಗೆ ಭರ್ಜರಿ ರಿಯಾಯಿತಿ: ಈ ಯೋಜನೆಯಡಿ ₹227.40 ಲಕ್ಷ ಅನುದಾನ ಮೀಸಲು!

Ration Card Update: ನೀವು ಪಡಿತರ ಚೀಟಿ ಹೊಂದಿದ್ದರೆ ಕೂಡಲೇ ಈ ಕೆಲಸ ಮಾಡಿ; ಇಲ್ಲದಿದ್ದರೆ ನಿಮಗೆ ತೊಂದರೆ ತಪ್ಪಿದ್ದಲ್ಲ!

ಏನೇನು ದಾಖಲೆಗಳು ಇರಬೇಕು?

ಕೃಷಿ ಹೊಂಡ ನಿರ್ಮಾಣಕ್ಕೆ ರೈತರ ಬಳಿ ಜಮೀನಿನ ಪಹಣಿ ಇರಬೇಕು. ಬ್ಯಾಂಕ್ ಪಾಸ್ ಬುಕ್ (Bank Pass Book)  ಝರಾಕ್ಸ್ ಪ್ರತಿ ಇರಬೇಕು. ಆಧಾರ್ ಕಾರ್ಡ್ (Aadhaar Card) ಇರಬೇಕು.

ಸಂಬಂಧಿಸಿದ ಅಧಿಕಾರಿಗಳು ರೈತರ ಜಮೀನಿಗೆ ಭೇಟಿ ನೀಡಿ ತಾಂತ್ರಿಕವಾಗಿಯೂ ಕೃಷಿ ಹೊಂಡ ಎಲ್ಲಿ ನಿರ್ಮಿಸಬೇಕು ಎಂಬುದನ್ನು ಸ್ಥಳ ಗುರುತಿಸಿ ಆಗಾಗ ಪರಿಶೀಲನೆ ನಡೆಸುತ್ತಾರೆ. ಕೃಷಿ ಹೊಂಡದ ಸುತ್ತ ನೆರಳು ಪರದೆ ರಚಿಸಲು ಹಾಗೂ ಹೊಂಡದ ಸುತ್ತ ಬದು ನಿರ್ಮಾಣ ಮಾಡಲು ಅವಕಾಶವಿದೆ.

ಇತ್ತೀಚೆಗೆ ಕೃಷಿ ಹೊಂಡದಲ್ಲಿ ಜಾನುವಾರುಗಳು, ಜನರಿಗೆ ಅನಾಹುತ ಆಗುವುದನ್ನು ತಪ್ಪಿಸಲು ಹೊಂಡಗಳ ಸುತ್ತಮುತ್ತ ಬೇಲೆ ನಿರ್ಮಾಣವನ್ನು ಕಡ್ಡಾಯಗೊಳಿಸಲಾಗಿದೆ. ಬೇಲಿ ಹಾಕಿಸಿಕೊಳ್ಳಲು ಶೇ. 50 ರಷ್ಟು ಸಹಾಯಧನೂ ಸಿಗಲಿದೆ.

ನರೇಗಾ ಯೋಜನೆಯಡಿಯಲ್ಲಿ ಈಗಾಗಲೇ ರೈತರು ಕೃಷಿ ಹೊಂಡಗಳನ್ನು ನಿರ್ಮಿಸಿಕೊಳ್ಳುತ್ತಿದ್ದಾರೆ. ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣದಿಂದ ರೈತರಿಗೆ ಸಾಕಷ್ಟು ಅನುಕೂಲವಾಗುತ್ತಿದೆ. ಹೊಲದಲ್ಲಿ ಮಳೆ ನೀರು ಹರಿದುಹೋಗುವುದನ್ನು ಇದರಿಂದ ತಡೆಯಬಹುದು.

ಮಾವು ಉತ್ಪಾದನೆಯಲ್ಲಿ ಶೇ.80ರಷ್ಟು ದಾಖಲೆಯ ಕುಸಿತ ಕಂಡ ಭಾರತ

ಚಹಾ ಬೆಳೆಗಾರರಿಗೆ ಕಹಿ ಸುದ್ದಿ; ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆ ಕಳೆದುಕೊಂಡ ಭಾರತದ ಚಹಾ!

ಮಣ್ಣು ಕೊಚ್ಚಿ ಹೋಗುವುದನ್ನು ತಡೆಯಲು ಹಾಗೂ ಹೊಲದಲ್ಲಿ ಅಂತರ್ಜಲ ಹೆಚ್ಚಳಕ್ಕಾಗಿ ಕೃಷಿ ಹೊಂಡಗಳನ್ನು ಉದ್ಯೋಗ ಖಾತ್ರಿ ಯೋಜನೆಯಿಂದ ನಿರ್ಮಿಸಿಕೊಳ್ಳಬಹುದು. ರೈತರು ಕೃಷಿ ಹೊಂಡ ನಿರ್ಮಿಸಿಕೊಳ್ಳಬೇಕಾದರೆ ಉದ್ಯೋಗ ಖಾತ್ರಿ ಯೋಜನೆಯ ಜಾಬ್ ಕಾರ್ಡ್ ಹೊಂದಿರಬೇಕು.

ಈ ಕಾರ್ಡ್ ಹೊಂದಿರುವ ಸಣ್ಣ ಮತ್ತು ಅತೀ ಸಣ್ಣ ರೈತರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಹಾಗೂ ರೈತ ಮಹಿಳೆಯರು ಅರ್ಹರಾಗಿರುತ್ತಾರೆ. 

ರೈತರು ತಮ್ಮ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಲಿಚ್ಚಿಸಿದರೆ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿ ಅಥವಾ ತಾಲೂಕಿನ ತೋಟಗಾರಿಕೆ ಇಲಾಖೆಗೆ ಸಂಪರ್ಕಿಸಬೇಕು.

ಕುರಿ ಸಾಕಾಣಿಕೆಯಲ್ಲಿ ಲಸಿಕೆಗಳ ಮಹತ್ವ..! ನೀವು ಇದರ ಬಗ್ಗೆ ತಿಳಿದಿರಲೇಬೇಕು..

ಮೇಕೆ ಸಾಕಾಣಿಕೆಗೆ ಲಾಭದಾಯಕವಾದ ತಳಿಗಳು ಯಾವು..? ಇಲ್ಲಿದೆ ಮಾಹಿತಿ

ಅಲ್ಲಿ ನಿಮ್ಮ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಅರ್ಜಿ ಪಡೆದು ಭರ್ತಿ ಮಾಡಿ ಕೃಷಿ ಹೊಂಡ ನಿರ್ಮಾಣ ಮಾಡಬಹುದು.
ತೋಟಗಾರಿಕೆ ಇಲಾಖೆಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ ಹಾಗೂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಅವಕಾಶವಿದೆ.

ರೈತರು ತಮ್ಮ ಹತ್ತಿರದ ತೋಟಗಾರಿಕೆ ಇಲಾಖೆಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು. ಲಭ್ಯತೆಯ ಆಧಾರದ ಮೇಲೆ ತೋಟಗಾರಿಕೆ ಇಲಾಖೆಯು ಕೃಷಿ ಹೊಂಡ ನಿರ್ಮಾಣಕ್ಕೆ ಸಹಾಯಧನ ನೀಡುವುದು.