ಇತ್ತೀಚಿನ ದಿನಗಳಲ್ಲಿ ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೆ ಇದೆ. ಅದೇ ರೀತಿ ಕೃಷಿಕರಿಗೆ ಯಂತ್ರೋಪಕರಣಗಳ ಬಳಕೆಯಿಂದ ವೆಚ್ಚವು ಕೂಡ ಅಧಿಕವಾಗುತ್ತಿದೆ. ಈ ನಿಟ್ಟಿನಲ್ಲಿ ಕೃಷಿಕರಿಹೆ ಹೊರೆಯಾಗುತ್ತಿರುವ ಇಂಧನ ವೆಚ್ಚವನ್ನ ತಗ್ಗಿಸಲು ಸರ್ಕಾರ ಈ ಹಿಂದಿನ ಬಜೆಟ್‌ನಲ್ಲಿ ಘೋಷಿಸಿದ ರೈತ ಶಕ್ತಿ ಯೋಜನೆಯನ್ನು ಶೀಘ್ರವೇ ಜಾರಿಗೊಳಿಸುವುದಾಗಿ ರಾಜ್ಯ ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರೈತರಿಗೆ ನೆರವಾಗುವ ಈ ಯೋಜನೆಯನ್ನು ಇದೇ ಸೆಪ್ಟೆಂಬರ್ ತಿಂಗಳಿನಿಂದ ಆರಂಭವಾಗಲಿದೆ ಎಂದು ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಏನಿದು ಯೋಜನೆ.?
ಪ್ರತಿ ಎಕರೆಗೆ ರೂ. 250 ರಂತೆ ಗರಿಷ್ಠ 5 ಎಕರೆಯವರೆಗೆ ಡಿ.ಬಿ.ಟಿ (DBT) ಮೂಲಕ ಡೀಸೆಲ್ ಸಹಾಯಧನ ನೀಡುವ “ರೈತಶಕ್ತಿ” ಎಂಬ ಕಾರ್ಯಕ್ರಮವನ್ನು ಸರ್ಕಾರ ಇತ್ತೀಚಿಗೆ ಜಾರಿಗೊಳಿಸಿದೆ. ರೈತಶಕ್ತಿ ಯೋಜನೆಯಲ್ಲಿ ಈ ಸಹಾಯಧನ ಲಭ್ಯವಾಗಲಿದ್ದು, ಕೃಷಿ ಇಲಾಖೆ ಮೂಲಕ ಈ ಸೌಲಭ್ಯ ಪಡೆಯಬಹುದಾಗಿದೆ. ಬಹು ಮುಖ್ಯವಾಗಿ ಈ ಸೌಲಭ್ಯ ಪಡೆಯಲು ರೈತರು ಫೂಟ್ಸ್ ಪೋರ್ಟಲ್ ನಲ್ಲಿ ಹೆಸರು ನೋಂದಾಯಿಸಬೇಕಾಗಿದೆ.
ಕೇವಲ 750 ರೂಪಾಯಿಗೆ ಸಿಗಲಿದೆ LPG ಸಿಲಿಂಡರ್..ಇಲ್ಲಿದೆ ನೋಡಿ ಮಾಹಿತಿ
ರೈತರ ಹಿಡುವಳಿ ಆಧಾರದ ಮೇಲೆ ಗರಿಷ್ಟ 5 ಎಕರೆಯವರೆಗೆ ಡೀಸೆಲ್ ಸಹಾಯಧನ ಒದಗಿಸಲಿದ್ದು, ಫ್ರೂಟ್ ಪೋರ್ಟಲ್‌ನಲ್ಲಿ (FRUITS Portal) ನಮೂದಿಸಿರುವ ಹಿಡುವಳಿಯ ಆಧಾರದ ಮೇಲೆ ಸಹಾಯಧನ ವರ್ಗಾವಣೆಯಾಗಲಿದೆ. ಒಂದೊಮ್ಮೆ ಫೂಟ್ಸ್ ಪೋರ್ಟಲ್ ನಲ್ಲಿ ಹೆಸರು ನೋಂದಾವಣೆ ಮಾಡಿಸಿರದಿದ್ದರೆ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಖಾತೆ, ಪಹಣಿ ವಿವರ ಮತ್ತು ಜಾತಿ ಪ್ರಮಾಣ ಪತ್ರದೊಂದಿಗೆ ನೋಂದಣಿ ಮಾಡಬೇಕು.ʼ
FRUITS ಪೋರ್ಟಲ್ ನಲ್ಲಿ ನೊಂದಣಿಗೊಂಡ ರಾಜ್ಯದ ಎಲ್ಲಾ ರೈತರು ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ. ಯೋಜನೆಯು ಅರ್ಹತಾಧಾರಿತ ಯೋಜನೆಯಾಗಿರುವುದರಿಂದ ಯಾವುದೇ ರೈತರು ಪ್ರತ್ಯೇಕವಾಗಿ ವೈಯಕ್ತಿಕ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ.
ಇದುವರೆಗೆ ಫೂಟ್ ತಂತ್ರಾಂಶದಲ್ಲಿ (FRUITS Portal) ನೋಂದಣಿ ಮಾಡಿಕೊಳ್ಳದ ರೈತರು ಕೂಡಲೇ ನೋಂದಣಿ ಮಾಡಿಸಿಕೊಳ್ಳುವಂತೆ ಕೃಷಿ ಇಲಾಖೆ ತಿಳಿಸುತ್ತದೆ.
ದಾಖಲೆಗಳ ಪರಿಶೀಲನೆಯನ್ನು ಸರ್ಕಾರದ FRUITS ಪೋರ್ಟಲ್ ನಲ್ಲಿ ಲಭ್ಯವಿರುವ ದತ್ತಾಂಶಗಳ ಆಧಾರದ ಮೇಲೆ ಮಾಡಲಾಗುವುದು. FRUITS ಪೋರ್ಟಲ್‌ನಲ್ಲಿ ನಮೂದಿಸಲಾದ ಹಿಡುವಳಿಯ ವಿಸ್ತೀರ್ಣದ ಆಧಾರದ ಮೇಲೆ ರೈತರಿಗೆ ಡೀಸೆಲ್ ಸಹಾಯಧನವನ್ನು ನೇರ ನಗದು ವರ್ಗಾವಣೆ (DBT) ಮೂಲಕ ರೈತರ ಖಾತೆಗೆ ವರ್ಗಾಯಿಸಲಾಗುವುದು.
ಬಂಪರ್ ಯೋಜನೆ: 10 ವರ್ಷ ಮೇಲ್ಪಟ್ಟ ಮಕ್ಕಳ ಹೆಸರಲ್ಲಿ ಈ ಖಾತೆ ತೆರೆದರೆ ತಿಂಗಳಿಗೆ 2500 ರೂಪಾಯಿ
FRUITS ತಂತ್ರಾಂಶದಲ್ಲಿ ನೋಂದಾವಣಿಗೊಂಡ ರೈತರು ಹೊಂದಿರುವ ಭೂ ಹಿಡುವಳಿಯ ಆಧಾರದ ಮೇಲೆ ಪ್ರತಿಯೊಬ್ಬ ರೈತರಿಗೆ ಪ್ರತಿ ಎಕರೆಗೆ ರೂ.250/- ರಂತೆ ಗರಿಷ್ಠ ಐದು ಎಕರೆಗೆ ರೂ.1250/- ರವರೆಗೆ ಡೀಸೆಲ್ ಸಹಾಯಧನವನ್ನು ಒದಗಿಸಲಾಗುವುದು.
ಅರ್ಹ ರೈತರಿಗೆ ಡೀಸೆಲ್ ಸಹಾಯಧನದ ಮೊತ್ತವನ್ನು ಸರ್ಕಾರದ DBT ಮೂಲಕ ಆಧಾರದ ಸೀಡೆಡ್ ಬ್ಯಾಂಕ್ / ಪೋಸ್ಟ್ ಆಫೀಸ್ ಖಾತೆಗೆ ವರ್ಗಾಯಿಸಲಾಗುವುದು.