Government Schemes

ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

04 August, 2021 9:23 PM IST By:

ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದಿಂದ 2021-22ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಪರಿಶಿಷ್ಟ ಜಾತಿಯ ಫಲಾನುಭವಿಗಳಿಂದ ಅರ್ಜಿಗಳನ್ನು  ಆಹ್ವಾನಿಸಲಾಗಿದೆ ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಸ್ವಯಂ ಉದ್ಯೋಗ ಕಾರ್ಯಕ್ರಮದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ - ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಪ್ರೇರಣಾ (ಮೈಕ್ರೋ ಕ್ರೆಡಿಟ್ ಫೈನಾನ್ಸ್) ಯೋಜನೆ (ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘದವರಿಗೆ), ಸಮಗ್ರ ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ-ಒಡೆತನ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹ ಫಲಾನುಭವಿಗಳು ಆನ್‌ಲೈನ್ ಮೂಲಕ 2021ರ ಆಗಸ್ಟ್ 5 ರಿಂದ ಸೆಪ್ಟೆಂಬರ್ 5 ರೊಳಗಾಗಿ ಅರ್ಜಿಯನ್ನು ಅರ್ಜಿ ಸಲ್ಲಿಸಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲಿಚ್ಚಿಸುವವರುwww.banjarathanda.kar.nic.in ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಸ್ಕೀಮ್ಸ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಯಾವ ಸ್ಕೀಮ್ ಮೇಲೆ ಅರ್ಜಿ ಸಲ್ಲಿಸಲು ಬಯಸುವರು ಅದರ ಮೇಲೆ ಕ್ಲಿಕ್ ಮಾಡಬೇಕು. . ಆನ್ಲೈನ್ ಪ್ರಕ್ರಿಯೆ ಮಾಹಿತಿ ಆಗಸ್ಟ್ 5 ರಂದು ಓಪನ್ ಆಗುತ್ತದೆ.   ಅಲ್ಲಿ ವರ್ಷ, ಜಿಲ್ಲೆ, ತಾಲೂಕು, ಹೆಸರು, ವಿಳಾಸ, ಗ್ರಾಮ, ಹೋಬಳಿ, ಆಧಾರ್ ಕಾರ್ಡ್, ಭೂಮಿ ವಿಸ್ತೀರ್ಣ ಸೇರಿದಂತೆ ಇನ್ನಿತರ ಮಾಹಿತಿಯನ್ನು ಭರ್ತಿ ಮಾಡಿ ಸಬ್ಮಿಟ್ ಮಾಡಬೇಕು.

ಅರ್ಹತೆ:

ಅರ್ಜಿದಾರರು ಪರಿಶಿಷ್ಟ ಜಾತಿಯಲ್ಲಿ ಬರುವ ಬಂಜಾರಾ/ಲಂಬಾಣಿ ಜಾತಿಗೆ ಸೇರಿದವರಾಗಿರಬೇಕು.ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.ಅರ್ಜಿದಾರರು 21 ವರ್ಷ ಮೇಲ್ಪಟ್ಟ ವಯೋಮಾನದವರಾಗಿರಬೇಕು. ಅರ್ಜಿದಾರರು/ ಕುಟುಂಬದ ಅವಲಂಬಿತ ಯಾವುದೇ ಸದಸ್ಯರು ಈ ಹಿಂದೆ ನಿಗಮದಿಂದ ಸೌಲಭ್ಯ ಪಡೆದಿದ್ದಲ್ಲಿ, ಅಂತಹ ಫಲಾನುಭವಿಗಳು ಅರ್ಹರಿರುವುದಿಲ್ಲ.

ನಿಯಮಗಳು:

ಅರ್ಜಿದಾರರು ಆಯ್ಕೆ ಸಮಿತಿಯಿಂದ ಆಯ್ಕೆಯಾಗಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದಲ್ಲಿ ರೂ. 1,50,000/- ಹಾಗೂ ನಗರ ಪ್ರದೇಶದಲ್ಲಿ ರೂ.2,00,000/- ಮಿತಿಯೊಳಗಿರಬೇಕು.

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು:

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಇತ್ತೀಚಿನ ಭಾವಚಿತ್ರ ಹೊಂದಿರಬೇಕು. ಜಾತಿ ಪ್ರಮಾಣ ಪತ್ರ (ಆರ್.ಡಿ. ಸಂಖ್ಯೆ ಹೊಂದಿರಬೇಕು). ಆದಾಯ ಪ್ರಮಾಣ ಪತ್ರ (ಆರ್.ಡಿ. ಸಂಖ್ಯೆ ಹೊಂದಿರಬೇಕು). ಹೊಂದಿರಬೇಕು. ಪಹಣಿ (ಆರ್.ಟಿ.ಸಿ), ಆಧಾರ್ ಕಾರ್ಡ್ ಹೊಂದಿರಬೇಕು.

ಈಗಾಗಲೇ ಯೋಜನೆಡಯಲ್ಲಿ ಸೌಲಭ್ಯ ಪಡೆದವರು ಮತ್ತೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹೆಚ್ಚಿನ  ಮಾಹಿತಿಗಾಗಿ ನಿಮ್ಮ ಜಿಲ್ಲೆಯ ವ್ಯವಸ್ಥಾಪಕರು, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮರವರನ್ನು ಸಂಪರ್ಕಿಸಬಹುದು.