ನಿರುದ್ಯೋಗಿ ಯುವಕರಿಗೆ ಸರ್ಕಾರದಿಂದ ನಿರುದ್ಯೋಗ ಭತ್ಯೆ! ಎಷ್ಟು ಹಣ? ಅರ್ಜಿ ಸಲ್ಲಿಕೆ ಹೇಗೆ?

Kalmesh T
Kalmesh T
Karnataka Yuva Nidhi Scheme: Unemployment allowance from Govt for educated unemployed
Karnataka Yuva Nidhi Scheme: ರಾಜ್ಯದ ಪದವೀಧರರ, ಡಿಪ್ಲೋಮಾ ಪಡೆದ ನಿರುದ್ಯೋಗಿ ವಿದ್ಯಾವಂತ ಯುವ ಜನರಿಗೆ ನಿರುದ್ಯೋಗ ಭತ್ಯೆ ಪಾವತಿಸಲು "ಕರ್ನಾಟಕ ಯುವ ನಿಧಿ ಯೋಜನೆ"ಯನ್ನು ಜಾರಿಗೆ ತರಲಾಗಿದ್ದು, ಇದರ ಪ್ರಯೋಜನ ಎಂದಿನಿಂದ ದೊರೆಯಲಿದೆ ತಿಳಿಯಿರಿ

Karnataka Yuva Nidhi Scheme : ರಾಜ್ಯದಲ್ಲಿ 2022-23 ರಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.3000/- (ಮೂರು ಸಾವಿರ ರೂ.ಗಳು ಮಾತ್ರ) ಹಾಗೂ ಡಿಪ್ಲೋಮಾ ಹೊಂದಿದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.1500/- (ಒಂದು ಸಾವಿರದ ಐದುನೂರು ರೂ.ಗಳು ಮಾತ್ರ) ರಂತೆ ನಿರುದ್ಯೋಗ ಭತ್ಯೆ (Unemployment allowance from Govt) ನೀಡುವ "ಯುವ ನಿಧಿ ಯೋಜನೆ" ಯನ್ನು ಜಾರಿಗೊಳಿಸಲು ಸರ್ಕಾರವು ತಾತ್ವಿಕ ಅನುಮೋದನೆ ನೀಡಿ ಆದೇಶಿಸಿದೆ.

ಸದರಿ ಯೋಜನೆಯನ್ನು ಅನುಷ್ಠಾನಗೊಳಿಸಲು ಷರತ್ತು ಮತ್ತು ನಿಬಂಧನೆಗಳು ಹಾಗೂ ಅನರ್ಹತೆಯ ಮಾನದಂಡಗಳನ್ನು ವಿಧಿಸಿ ಆದೇಶ ಹೊರಡಿಸಲು ಸರ್ಕಾರವು ತೀರ್ಮಾನಿಸಿದೆ.

Karnataka Yuva Nidhi Scheme2023 ರ ವರ್ಷದಲ್ಲಿ ತೇರ್ಗಡೆಯಾಗಿ ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್‌ಗಳು ಸೇರಿದಂತೆ) ಪುತಿ ತಿಂಗಳು ರೂ.3000/- (ಮೂರು ಸಾವಿರ ರೂ.ಗಳು ಮಾತ್ರ ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.1500/- (ಒಂದು ಸಾವಿರದ ಐದುನೂರು ರೂ.ಗಳು ಮಾತ್ರ) ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ನೀಡಲು "ಯುವ ನಿಧಿ ಯೋಜನೆ" ಯನ್ನು ಈ ಕೆಳಕಂಡ ಷರತ್ತಿಗೊಳಪಟ್ಟು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ.

ಷರತ್ತು ಮತ್ತು ನಿಬಂಧನೆಗಳು:

1. ಪದವಿ / ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕನ್ನಡಿಗರಿಗೆ (Domicile - of Karnataka) ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ.

2. ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಥಗಿತಗೊಳಿಸಲಾಗುವುದು.

3. ಭತ್ಯೆಯನ್ನು DBT ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು.

4. ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.

ಯೋಜನೆಗೆ ಅರ್ಹರಾಗದೇ ಇರುವವರು:

1. ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುವವರು.

2. ಶಿಶಿಕ್ಷು (Apprentice) ವೇತನವನ್ನು ಪಡೆಯುತ್ತಿರುವವರು.

3. ಸರ್ಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು

4. ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರು.

ಈ ಆದೇಶವನ್ನು ಸಚಿವ ಸಂಪುಟದ ಪ್ರಕರಣ ಸಂಖ್ಯೆ: ಸಿ:319/2023, ದಿನಾಂಕ: 02.06.2023ರ ಅನುಮೋದನೆಯೊಂದಿಗೆ ಹೊರಡಿಸಲಾಗಿದೆ.

Published On: 04 June 2023, 02:52 PM English Summary: Karnataka Yuva Nidhi Scheme: Unemployment allowance from Govt for educated unemployed

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.