ರೈತಬಾಂಧವರಿಗೆ ಸಂತಸದ ಸುದ್ದಿ ಇಲ್ಲಿದೆ. ಇಂದು ಪಿಎಂ ಕಿಸಾನ್ ಯೋಜನೆಯ 9ನೇ ಕಂತಿನ ಹಣ ದೇಶದ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ.
ಹೌದು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 9ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಧ್ಯಾಹ್ನ 12.30 ಗಂಟೆಗೆ ವೀಡಿಯೋ ಕಾನ್ಫರೆನ್ಸ್ ಮೂಲಕ 9.75ಕೋಟಿಗೂ ಅಧಿಕ ರೈತ ಕುಟುಂಬಗಳಿಗೆ ಬಿಡುಗಡೆ ಮಾಡಲಿದ್ದಾರೆ. 19.500 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ರೈತರ ಖಾತೆಗೆ ವರ್ಗಾಯಿಸಲಾಗುವುದು.
ದೇಶದ ರೈತರಿಗೆ ಈಗಾಗಲೇ 8 ಕಂತುಗಳನ್ನು ರೈತರ ಖಾತೆಗೆ ಜಮೆ ಮಾಡಲಾಗಿದೆ. ಅಂದರೆ ಇದುವರೆಗೆ ಪಿಎಂ ಕಿಸಾನ್ ಯೋಜನೆಯಡಿ 8 ಕಂತುಗಳ ಹಣ ಒಟ್ಟು 16 ಸಾವಿರ ರೂಪಾಯಿಯನ್ನು ರೈತರ ಖಾತೆಗೆ ಜಮೆ ಮಾಡಲಾಗಿದೆ.
ಲಿಸ್ಟ್ ನಲ್ಲಿ ಹೆಸರು ಚೆಕ್ ಮಾಡುವುದು ಹೇಗೆ?
https://pmkisan.gov.in/Rpt_BeneficiaryStatus_pub.aspx ಕ್ಲಿಕ್ ಮಾಡಿದಾಗ ವೆಬ್ ಪೇಜ್ ಓಪನ್ ಆಗುತ್ತದೆ ಇಲ್ಲಿ ನಿಮ್ಮ ರಾಜ್ಯ ಜಿಲ್ಲೆ ತಾಲೂಕು ಹಾಗೂ ಗ್ರಾಮವನ್ನು ಆಯ್ಕೆ ಮಾಡಿಕೊಂಡು ನ ಹೊಸ beneficiary ಲಿಸ್ಟ್ ನಲ್ಲಿ ನಿಮ್ಮ ಹೆಸರು ಇರುವುದನ್ನು ಚೆಕ್ ಮಾಡಿ, ಇಲ್ಲಿ A to z ಕ್ರಮವಾಗಿ ಹೆಸರು ಇರುತ್ತದೆ. ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭವಾಗುತ್ತದೆ ಎಂಬುದನ್ನು ನೋಡಿ ಕೆಳಗಡೆ ಕ್ಲಿಕಿ ಮಾಡಿದರೆ ಸಾಕು ಅಲ್ಲಿ ನಿಮ್ಮ ಹೆಸರು ಇರುವುದನ್ನು ನೋಡಿಕೊಳ್ಳಬಹುದು.
ಸ್ಟೇಟಸ್ ಚೆಕ್ ಮಾಡುವುದು ಹೇಗೆ?
ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿಕೊಂಡ ರೈತರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಸಾಕು, https://pmkisan.gov.in/beneficiarystatus.aspx ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯ ವೆಬ್ ಪೇಜ್ ಓಪನ್ ಆಗುತ್ತದೆ. ಇಲ್ಲಿ ನಿಮ್ಮ ಆಧಾರ್ ನಂಬರ್ ಅಥವಾ ಅಕೌಂಟ್ ನಂಬರ್ ಅಥವಾ ಮೊಬೈಲ್ ನಂಬರ್ ಈ ಮೂರರಲ್ಲಿ ಯಾವುದಾದರೊಂದನ್ನು ಸೆಲೆಕ್ಟ್ ಮಾಡಿಕೊಳ್ಳಬೇಕು. ಒಂದು ವೇಳೆ ನೀವು ಮೊಬೈಲ್ ನಂಬರ್ ಸೆಲೆಕ್ಟ್ ಮಾಡಿಕೊಂಡರೆ ಅಲ್ಲಿ ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಗೆಟ್ ಡಾಟಾ (Get Data) ಮೇಲೆ ಕ್ಲಿಕ್ ಮಾಡಬೇಕು. ಆಗ ಇಲ್ಲಿಯವರೆಗೆ ನಿಮ್ಮ ಯಾವ ಖಾತೆಗೆ ಎಷ್ಟು ಕಂತಿನ ಹಣ ಜಮೆಯಾಗಿದೆ. ಹಾಗೂ ಈಗ ಜಮೆಯಾಗಲಿರುವ ಕಂತಿನ ಸ್ಥಿತಿಗತಿ ಅಂದರೆ ಸ್ಟೇಟಸ್ ತಿಳಿದುಕೊಳ್ಳಬಹುದು.
ಆಗಸ್ಟ್ 9 ರಂದು ಮಧ್ಯಾಹ್ನಿ 12.30 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು ದೇಶದ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ. ನೇರವಾಗಿ ಸಂವಾದ ಕ್ರಾಯಕ್ರಮ ವೀಕ್ಷಿಸಲು pmindiawebcast.nic.in ಲಿಂಕ್ ಮೇಲೆ ಕ್ಲಿಕ್ ಮಾಡಿ ಪಾಲ್ಗೊಳ್ಳಬಹುದು ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.