ಶಿವಮೊಗ್ಗ: ಮೀನುಗಾರಿಕೆ ಇಲಾಖೆಯು 2023-24ನೇ ಸಾಲಿನಲ್ಲಿ ಮೀನುಗಾರಿಕೆ ಸಲಕರಣೆ ಕಿಟ್ಟು/ ಫೈಬರ್ ಗ್ಲಾಸ್ ಹರಿಗೋಲು ವಿತರಣೆ, ಮೀನುಮರಿ ಖರೀದಿಗೆ ಸಹಾಯಧನ, ಕೆರೆ/ಜಲಾಶಯ ಅಂಚಿನಲ್ಲಿ ನಿರ್ಮಿಸಿರುವ ಕೊಳಗಳಲ್ಲಿ ಮೀನುಮರಿ ಪಾಲನೆಗೆ ಸಹಾಯ ಇತ್ಯಾದಿ ಯೋಜನೆಗಳಡಿ ಆಸಕ್ತ ಒಳನಾಡು ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸಂಬಂಧಪಟ್ಟ ತಾಲೂಕು ಮಟ್ಟದ ಕಚೇರಿಗಳನ್ನು ಸಂಪರ್ಕಿಸಿ ಸೇವಾಸಿಂಧು ಪೊರ್ಟಲ್ ಮೂಲಕ ಅರ್ಜಿಗಳನ್ನು ಆಗಸ್ಟ್-19ರೊಳಗಾಗಿ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‍ಸೈಟ್ www.fisheries.karnatakal.gov.in ರಲ್ಲಿ ಹಾಗೂ ಶಿವಮೊಗ್ಗ-ಭದ್ರಾವತಿ-ಶಿಕಾರಿಪುರ ಮತ್ತು ಸೊರಬ-, ಸಾಗರ-, ಗಳ ತಾಲೂಕು ಮೀನುಗಾರಿಗೆ ಸಹಾಯಕ ನಿರ್ದೇಶಕರುಗಳನ್ನು ಸಂಪರ್ಕಿಸುವುದು.
ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿಯಲ್ಲಿ ಅರ್ಜಿ ಆಹ್ವಾನ
ತೋಟಗಾರಿಕೆ ಇಲಾಖೆಯು 2023-24ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ್ರದೇಶ ವಿಸ್ತರಣೆ (ಅಂಗಾಂಶಬಾಳೆ, ಹೈಬ್ರೀಡ್ ತರಕಾರಿ, ಕಾಳುಮೆಣಸು, ಗೇರು, ಕೋಕೋ, ಬಿಡಿಹೂ, ಗೆಡ್ಡೆ ಜಾತಿಯ ಹೂ ಮತ್ತು ಗುಲಾಬಿ), ಸಮುದಾಯ ಕೃಷಿಹೊಂಡ, ವೈಯುಕ್ತಿಕ ಕೃಷಿಹೊಂಡ, ಪ್ಯಾಕ್ ಹೌಸ್, ಪ್ರಾಥಮಿಕ ಸಂಸ್ಕರಣಾ ಘಟಕಗಳಿಗೆ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 16 ರೊಳಗಾಗಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಆಯಾ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸುವುದು.
ಜಿಟಿಟಿಸಿ : ಲ್ಯಾಟರಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ) ಶಿವಮೊಗ್ಗ ಕೇಂದ್ರದಲ್ಲಿ 2023-24 ನೇ ಸಾಲಿನ ಡಿಪ್ಲೊಮಾ ಇನ್ ಟೂಲ್ & ಡೈ ಮೇಕಿಂಗ್ ಕೋರ್ಸಿಗೆ ಪಿಯುಸಿ(ವಿಜ್ಞಾನ) ಹಾಗೂ ಐಟಿಐ (ಫಿಟ್ಟರ್, ಟರ್ನರ್ & ಮಷಿನಿಸ್ಟ್) ಪಾಸಾದ ವಿದ್ಯಾರ್ಥಿಗಳಿಗೆ ಲ್ಯಾಟರಲ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 08 ಕಡೆಯ ದಿನವಾಗಿದೆ. ಈ ಕೋರ್ಸ್ ಶೇ.100 ಉದ್ಯೋಗಾವಕಾಶವನ್ನು ಹೊಂದಿದ್ದು, ಈ ಕೋರ್ಸ್ ಮುಗಿಸಿದ ಕೂಡಲೇ ಉದ್ಯೋಗ ದೊರಕುತ್ತದೆ ಹಾಗೂ ವ್ಯಾಸಂಗಕ್ಕೆ ಸಹಕಾರಿಯಾಗಿದೆ. ಸುಸಜ್ಜಿತವಾದ ಬಾಲಕರ ವಸತಿ ನಿಲಯ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಘಟಕದ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರು, ಜಿಟಿಟಿಸಿ, ಪ್ಲಾಟ್ ನಂ ಸಿಎ-38, ನಿದಿಗೆ ಕೈಗಾರಿಕಾ ಪ್ರದೇಶ, ಮಾಚೇನಹಳ್ಳಿ, ಸಂಪರ್ಕಿಸಬಹುದೆಂದು ಜಿಟಿಟಿಸಿ ಪ್ರಾಂಶುಪಾಲರು ತಿಳಿಸಿದ್ದಾರೆ.