Health & Lifestyle

Bhadra Upper Bank Project: ಭದ್ರಾ ಮೇಲ್ದಂಡೆ ಯೋಜನೆಗೆ ₹5300 ಕೋಟಿ ಅನುದಾನ: ಸಿಎಂ

20 March, 2023 1:34 PM IST By: Kalmesh T
₹5300 crore grant for Bhadra Upper Bank Project: CM

ಭದ್ರಾ ಮೇಲ್ದಂಡೆ ಯೋಜನೆಗೆ ₹5300 ಕೋಟಿ ಅನುದಾನ ಮೀಸಲಿರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

PM Kisan 14th Installment release: ಪಿಎಂ ಕಿಸಾನ್‌ 14ನೇ ಕಂತಿನ ಕುರಿತು ಮಹತ್ವದ ಮಾಹಿತಿ!

ಕಾಲಮಿತಿಯಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲಾಗವುದು ಎಂದು ಮುಖ್ಯಮಂತ್ರಿ ಬಸವಾರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇದಕ್ಕಾಗಿ ಕೇಂದ್ರ ಸರ್ಕಾರ ಈ ಯೋಜನೆಗೆ  5300 ಕೋಟಿ ರೂಪಾಯಿಗಳ ಅನುದಾನವನ್ನು ಬಜೆಟ್‍ನಲ್ಲಿ ಮೀಸಲಿರಿಸಿದೆ.

ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ವೇಳೆ, ನಾನು ಜಲಸಂಪನ್ಮೂಲ ಸಚಿವನಾಗಿದ್ದ ಸಂದರ್ಭದಲ್ಲಿ, ಅವರು ಕೈಗೊಂಡ ದಿಟ್ಟ ನಿಲುವಿನಿಂದಾಗಿ, ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ  ಭದ್ರಾ ಮೇಲ್ದಂಡೆ ಯೋಜನೆ ರೂಪಿಸಿ, ಕಾಮಗಾರಿ ಆರಂಭಿಸಲಾಗಿತ್ತು ಎಂದರು.

ದೇಶದಾದ್ಯಂತ 24 ಕೋಟಿ ದನ ಮತ್ತು ಎಮ್ಮೆಗಳಿಗೆ ಕಾಲು ಮತ್ತು ಬಾಯಿ ರೋಗದ ವಿರುದ್ಧ ಲಸಿಕೆ

ಮಧ್ಯ ಕರ್ನಾಟಕದ ಜನರ ಭೂಮಿಗೆ ನೀರು ಕೊಟ್ಟು, ಬರದ ಭೂಮಿಯನ್ನು ಹಸಿರಾಗಿಸುವ ಕಾರ್ಯವನ್ನು ನಮ್ಮ ಸರ್ಕಾರ ಮಾಡುತ್ತಿದ್ದು, ಯೋಜನೆಯನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಮಧ್ಯ ಕರ್ನಾಟಕದ ಬರದ ನಾಡನ್ನು ಹಸಿರಾಗಿಸಲು ಭದ್ರಾ ಮೇಲ್ದಂಡೆ ಯೋಜನೆಯನ್ನು ಶಂಕುಸ್ಥಾಪನೆ ಮಾಡಿದ್ದು ನಾವೇ, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡುತ್ತಿರುವುದು ನಾವೇ, ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿ.ಎಸ್. ಯಡಿಯೂರಪ್ಪ ಹಾಗೂ ನಾವೇ ಆಗಮಿಸಿ ಉದ್ಘಾಟನೆಯನ್ನು ಕೂಡ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಹೊಳಲ್ಕೆರೆ ಪಟ್ಟಣದಲ್ಲಿ ಭಾನುವಾರ ಹೊಳೆಲ್ಕೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಫಲಾನುಭವಿಗಳ ಸೌಲಭ್ಯ ಮತ್ತು ಸಲಕರಣೆಗಳ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಅಲ್ಲಮಪ್ರಭು ಜನ್ಮ ಸ್ಥಳ ಅಭಿವೃದ್ಧಿಗೆ 5 ಕೋಟಿ ಬಿಡುಗಡೆ: ಸಿಎಂ ಬೊಮ್ಮಾಯಿ

ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ವೇಳೆ, ನಾನು ಜಲಸಂಪನ್ಮೂಲ ಸಚಿವನಾಗಿದ್ದ ಸಂದರ್ಭದಲ್ಲಿ, ಅವರು ಕೈಗೊಂಡ ದಿಟ್ಟ ನಿಲುವಿನಿಂದಾಗಿ, ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ  ಭದ್ರಾ ಮೇಲ್ದಂಡೆ ಯೋಜನೆ ರೂಪಿಸಿ, ಕಾಮಗಾರಿ ಆರಂಭಿಸಲಾಯಿತು. 

ಕೇಂದ್ರ ಸರ್ಕಾರ ಈ ಯೋಜನೆಗೆ ರೂ.5300 ಕೋಟಿಗಳ ಅನುದಾನವನ್ನು ಬಜೆಟ್‍ನಲ್ಲಿ ಮೀಸಲಿರಿಸಿದೆ.   ಮಧ್ಯ ಕರ್ನಾಟಕದ ಜನರ ಭೂಮಿಗೆ ನೀರು ಕೊಟ್ಟು, ಬರದ ಭೂಮಿಯನ್ನು ಹಸಿರಾಗಿಸುವ ಕಾರ್ಯವನ್ನು ನಮ್ಮ ಸರ್ಕಾರ ಮಾಡುತ್ತಿದ್ದು, ಯೋಜನೆಯನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲಾಗುವುದು.

ಬರದ ನಾಡನ್ನು ಹಸಿರಾಗಿಸಲು ಭದ್ರಾ ಮೇಲ್ದಂಡೆ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದು ನಾವೇ, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡುತ್ತಿರುವುದು ನಾವೇ, ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿ.ಎಸ್. ಯಡಿಯೂರಪ್ಪ ಹಾಗೂ ನಾವೇ ಆಗಮಿಸಿ ಉದ್ಘಾಟನೆಯನ್ನು ಕೂಡ ಮಾಡುತ್ತೇವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹೊಳಲ್ಕರೆ ಪಟ್ಟಣದಲ್ಲಿ ಅಭಿವೃದ್ಧಿಯ ಹೊಳೆ ಹರಿದಿದೆ.  ಈ ಕ್ಷೇತ್ರದಲ್ಲಿ ಕಳೆದ ನಾಲ್ಕೂ ಮುಕ್ಕಾಲು ವರ್ಷದಲ್ಲಿ ರೂ.4116 ಕೋಟಿ ವೆಚ್ಚದಲ್ಲಿ ವಿವಿದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಮಾಡಲಾಗಿದೆ ಎಂದರು.