Madras eye disease : ಸಾಮಾನ್ಯವಾಗಿ ಚಳಿಗಾಲದಲ್ಲಿ ಕಾಣಿಸಿಕೊಳ್ಳುತ್ತಿದ್ದ “ಮದ್ರಾಸ್ ಐ” ವೈರಾಣು ಅತೀ ವೇಗವಾಗಿ ಹರಡುತ್ತಿದ್ದು, ಇದಕ್ಕೆ ಭಯ ಪಡಬೇಕಾಗಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ ತಿಳಿಸಿದ್ದಾರೆ.
how to cure Madras Eye : ಮದ್ರಾಸ್ ಐ ಈ ಬಾರಿ ಮಳೆಗಾಲದಲ್ಲಿ ಆರಂಭವಾಗಿದ್ದು ರಾಜ್ಯದ ಜನರ ಕಣ್ಣು ಕೆಂಪಾಗಿಸುತ್ತಿದೆ. ಮುಖ್ಯವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಹಾಸ್ಟಲ್ ವಿದ್ಯಾರ್ಥಿಗಳಲ್ಲಿ “ಮದ್ರಾಸ್ ಐ” ವೇಗಾಗಿ ಹರಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಕಂಜಕ್ವಿಟಿಸ್ ಎಂದು ಕರೆಯಲಾಗುವ ಮದ್ರಾಸ್ ಐ ಅಥವಾ ಕಣ್ಣು ವೈರಾಣುಗಳಿಂದ ಹರಡುವ ಕಣ್ಣಿನ ಸಮಸ್ಯೆ ತೇವಾಂಶ ಹೆಚ್ಚಾದಾಗ ಅಥವಾ ಚಳಿಗಾಲದ ವಾತಾವರಣದಲ್ಲಿ ಹುಟ್ಟಿಕೊಳ್ಳುವ ಈ ವೈರಾಣುಗಳು ನೇರವಾಗಿ ಕಣ್ಣಿನ ಮೇಲೆ ಪರಿಣಾಮ ಉಂಟು ಮಾಡುತ್ತವೆ.
ರಾಜ್ಯದಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಿಸಿಲು ಇಲ್ಲದಂತಾಗಿದೆ. ಇದರ ಪರಿಣಾಮ ತೇವಾಂಶ ಹೆಚ್ಚಾಗಿ ಅವಧಿಗೂ ಮೊದಲೇ ಈ ವೈರಾಣು ದಾಂಗುಡಿ ಇರಿಸಿದೆ.
ಮದ್ರಾಸ್ ಐ ರೋಗದ ಲಕ್ಷಣಗಳು | Symptoms of Madras Eye Disease
* ಕಸ ಬಿದ್ದದಂತೆ ಆಗುವ ರೀತಿಯಾಗಿ ಕಣ್ಣು ಚುಚ್ಚುವುದು
* ಬೆಳಗ್ಗೆ ಎದ್ದಾಗ ಹೆಚ್ಚು ಪಿಸುರು (ಪಿಚ್ಚು) ಬರುತ್ತದೆ
* ಕಣ್ಣುಗಳು ಕೆಂಪಾಗಿ, ಕಿರಿಕಿರಿ ಹೆಚ್ಚುವುದು
* ಕಣ್ಣಲ್ಲಿ ನೀರು ಬರುವುದು, ರೆಪ್ಪೆ ಕಣ್ಣು ದಪ್ಪ ಆಗುವುದು ಕಂಡು ಬರುತ್ತದೆ.
ಮದ್ರಾಸ್ ಐ ರೋಗಕ್ಕೆ ಮುಂಜಾಗೃತಾ ಕ್ರಮಗಳು | Symptoms of Madras Eye Disease
* ಸಮಸ್ಯೆ ಇರುವವರು ಕೆಲದಿನ ಪ್ರತ್ಯೇಕ ವಾಸ ಮಾಡಿ
* ಲಕ್ಷಣಗಳು ಕಾಣಿಸಿಕೊಳ್ಳದೆ ಕಣ್ಣಿಗೆ ಔಷಧ ಹಾಕಿಸಿಕೊಳ್ಳಬೇಡಿ
* ದಿನಕ್ಕೆ 8-10 ಬಾರಿ ಸ್ಯಾನಿಟೈಸರ್, ಸೋಪು ಬಳಸಿ ಕೈ ತೊಳೆದುಕೊಳ್ಳಿ
* ವೈರಸ್ ಕಾಣಿಸಿಕೊಂಡಾಗ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಸಲಹೆ ಪಡೆಯಬೇಕು
* ವೈದ್ಯರ ತಪಾಸಣೆ ಮಾಡಿಸದೇ, ಔಷಧಿ ಅಂಗಡಿಗಳಲ್ಲಿ ಸಿಗುವ ಡ್ರಾಪ್ಸ್ಗಳನ್ನು ಬಳಸಬಾರದು
* ಪದೆ ಪದೆ ಕಣ್ಣು ಮುಟ್ಟಿಕೊಳ್ಳುವುದನ್ನು ಕಡಿಮೆ ಮಾಡಬೇಕು.
ಮದ್ರಾಸ್ ಐ ರೋಗಕ್ಕೆ ಪರಿಹಾರ | Remedy for Madras Eye Disease
* ಸಮಸ್ಯೆ ಉಳ್ಳವರು ಇತರರಿಂದ ದೂರ ಇರಬೇಕು
* ವೈದ್ಯರ ಬಳಿ ತೋರಿಸಿ ಐ ಡ್ರಾಪ್ಸ್ (Eye Drops) ಮಾತ್ರ ಹಾಕಬೇಕು
* ಸಮಸ್ಯೆ ಕಡಿಮೆ ಆಗುವವರೆಗೆ ಗಾಳಿಗೆ ಹೋಗಬಾರದು
* ದ್ವಿಚಕ್ರ ವಾಹನ ಓಡಿಸಬಾರದು, ಟಿ.ವಿ,ಮೊಬೈಲ್, ಕಂಪ್ಯೂಟರ್ಗಳನ್ನು ನೋಡುವುದನ್ನ ಕಡಿಮೆ ಮಾಡಿ ಕಣ್ಣಿಗೆ ವಿಶ್ರಾಂತಿ ಕೊಡಬೇಕು.
ರೋಗದ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣವೇ ಸಮೀಪದ ನಗರ, ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ತಾಲ್ಲೂಕು ಆಸ್ಪತ್ರೆಗಳು ಹಾಗೂ ಜಿಲ್ಲಾ ಆಸ್ಪತ್ರೆಗೆ ಭೇಟಿ, ವೈದ್ಯರ ಹತ್ತಿರ ತಪಾಸಣೆ ಮಾಡಿಸಿ ಚಿಕಿತ್ಸೆ ಪಡೆಯುವುದು ಸೂಕ್ತ. ವೈರಾಣುವಿನ ಸಮಸ್ಯೆ ಆಗಿರುವ ಕಾರಣ ನಿರ್ದಿಷ್ಟ ಚಿಕಿತ್ಸೆ ಇಲ್ಲ ಮುನ್ನೆಚ್ಚರಿಕೆಯೇ ಮದ್ದಾಗಿದೆ.
Share your comments