Health & Lifestyle

ಆಯುಷ್ಮಾನ್ ಕಾರ್ಡ್  ಜೊತೆಗೆ 5 ಲಕ್ಷ ರೂ. ವೈದ್ಯಕೀಯ ನೆರವು.. ಹೇಗೆ?

21 July, 2022 11:39 AM IST By: Maltesh
What is the Ayushman Bharat Scheme And Its Benefits

ಆಯುಷ್ಮಾನ್ ಕಾರ್ಡ್ ನೊಂದಿಗೆ 5 ಲಕ್ಷ ವೈದ್ಯಕೀಯ ನೆರವು

ಕೇಂದ್ರ ಸರ್ಕಾರವು ಜನರಿಗಾಗಿ ಅನೇಕ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತದೆ ಮತ್ತು ಅವುಗಳಲ್ಲಿ ಒಂದು ಆಯುಷ್ಮಾನ್ ಭಾರತ ಕಾರ್ಡ್. ಈ ಕಾರ್ಯಕ್ರಮದ ಮೂಲಕ ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ಕೇಂದ್ರ ಸರ್ಕಾರದಿಂದ ಉಚಿತ ವೈದ್ಯಕೀಯ ನೆರವು ದೊರೆಯುತ್ತದೆ.

ವೈದ್ಯಕೀಯ ಬಿಲ್ ಪಾವತಿಸಲು ಸಾಧ್ಯವಾಗದ ಬಡವರಿಗಾಗಿ ಈ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯ ಪ್ರಕಾರ ಪ್ರತಿ ಕುಟುಂಬಕ್ಕೆ ಆಸ್ಪತ್ರೆಗಳಲ್ಲಿ ರೂ.5 ಲಕ್ಷದವರೆಗೆ ಉಚಿತ ಚಿಕಿತ್ಸೆ ಸಿಗಲಿದೆ.. ಈಗ ಈ ಯೋಜನೆಯ ಲಾಭಗಳ ಬಗ್ಗೆ ತಿಳಿಯೋಣ..

ಈ ಯೋಜನೆಯಡಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ ಆಸ್ಪತ್ರೆ ವೆಚ್ಚವನ್ನು ಭರಿಸಬೇಕಾಗಿಲ್ಲ. ಆಯ್ದ ಆಸ್ಪತ್ರೆಗಳಲ್ಲಿ ರೂ.5 ಲಕ್ಷದವರೆಗಿನ ಚಿಕಿತ್ಸೆ ಸಂಪೂರ್ಣ ಉಚಿತವಾಗಿದೆ. ಆದರೆ ನೀವು ಆಯುಷ್ಮಾನ್ ಭಾರತ್ ಕಾರ್ಡ್ ಹೊಂದಿದ್ದರೆ ಮಾತ್ರ ನೀವು ಇದಕ್ಕೆ ಅರ್ಹರಾಗುತ್ತೀರಿ. ಈ ಯೋಜನೆಯು ವಿಶ್ವದ ಅತಿದೊಡ್ಡ ಸರ್ಕಾರಿ ಆರೋಗ್ಯ ಯೋಜನೆಯಾಗಿದೆ. ಈ ಯೋಜನೆಯಡಿಯಲ್ಲಿ 10.74 ಕೋಟಿ ಕುಟುಂಬಗಳಿಗೆ ರೂ. 5 ಲಕ್ಷ ಆರೋಗ್ಯ ವಿಮೆ ಸೌಲಭ್ಯವನ್ನು ಕೇಂದ್ರ ಸರ್ಕಾರ ನೀಡಲಿದೆ.

ಮಹಿಳೆಯರಿಗೆ ಸಿಹಿಸುದ್ದಿ: ಮಹಿಳಾ ಸ್ವ-ಸಹಾಯ ಸಂಘಗಳಿಗೆ 2.50 ಲಕ್ಷ ಮಂಜೂರು! ಸಾಲ-ಸಬ್ಸಿಡಿ ಎರಡೆರಡು ಲಾಭ..

ಆಯುಷ್ಮಾನ್ ಕಾರ್ಡ್ ಪಡೆಯುವುದು ಹೇಗೆ?

ಮೊದಲು ನಿಮ್ಮ ಸೇವಾ ಕೇಂದ್ರಕ್ಕೆ ಹೋಗಿ..

ಅಲ್ಲಿ ನಿಮ್ಮ ಹೆಸರು ಪಟ್ಟಿಯಲ್ಲಿದೆಯೇ ಎಂದು ಪರಿಶೀಲಿಸುತ್ತಾರೆ.

ಆಯುಷ್ಮಾನ್ ಯೋಜನೆ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ನೋಂದಾಯಿಸಿದರೆ ನೀವು ಕಾರ್ಡ್ ಪಡೆಯುತ್ತೀರಿ.

ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ನೋಂದಾಯಿತ ಮೊಬೈಲ್ ಸಂಖ್ಯೆ, ಪಡಿತರ ಚೀಟಿಯ

ಫೋಟೋ ನಕಲು ಮತ್ತು ಪಾಸ್‌ಪೋರ್ಟ್ ಅಳತೆಯ ಫೋಟೋ ಮುಂತಾದ ಎಲ್ಲಾ ದಾಖಲೆಗಳನ್ನು ಸಂಬಂಧಪಟ್ಟ ಪ್ರಾಧಿಕಾರಕ್ಕೆ ಸಲ್ಲಿಸಬೇಕು.

ನಂತರ ನಿಮ್ಮ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.

ನೋಂದಣಿಯ ನಂತರ ನಿಮಗೆ ನೋಂದಣಿ ಸಂಖ್ಯೆ ಮತ್ತು ಪಾಸ್ವರ್ಡ್ ಅನ್ನು ಒದಗಿಸಲಾಗುತ್ತದೆ.

ನೋಂದಣಿಯಾದ 15 ದಿನಗಳಲ್ಲಿ ನಿಮ್ಮ ಆಯುಷ್ಮಾನ್ ಕಾರ್ಡ್ ಅನ್ನು ನೀವು ಸ್ವೀಕರಿಸುತ್ತೀರಿ.

ಆಯುಷ್ಮಾನ್‌ ಭಾರತ್  ಆರೋಗ್ಯ ಕರ್ನಾಟಕ" ಯೋಜನೆಯಡಿಯಲ್ಲಿ ರಾಜ್ಯದ 115 ಲಕ್ಷ (ಬಿಪಿಎಲ್) ಕುಟುಂಬಗಳ ಪೈಕಿ 62 ಲಕ್ಷ ಕುಟುಂಬಗಳಿಗೆ (ಅರ್.ಎಸ್.ಬಿ.ವೈ ನೋಂದಾಯಿತ) ಮಾತ್ರ ಕೇಂದ್ರ ಸರ್ಕಾರವು ಶೇ.60 ರಷ್ಟು ಅನುದಾನ ಭರಿಸುತ್ತದೆ. ರಾಜ್ಯ ಸರ್ಕಾರವು ಶೇ.40 ರಷ್ಟು ಅನುದಾನ ಭರಿಸುತ್ತದೆ. ಇನ್ನುಳಿದ 53 ಲಕ್ಷ ಕುಟುಂಬಗಳಿಗೆ ರಾಜ್ಯ ಸರ್ಕಾರವೇ ಶೇ.100 ರಷ್ಟು ವೆಚ್ಚ ಭರಿಸುತ್ತದೆ. ಸಾಮಾನ್ಯ ವರ್ಗದ 19 ಲಕ್ಷ ಕುಟುಂಬಗಳಿಗೂ ಸಹ ರಾಜ್ಯ ಸರ್ಕಾರವೇ ಶೇ.100 ರಷ್ಟು ಅನುದಾನ ಭರಿಸುತ್ತದೆ.

ಸೌಲಭ್ಯ ಹಾಗೂ ಮಾಹಿತಿಗಾಗಿ ಯಾರನ್ನು ಸಂಪರ್ಕಿಸಬೇಕು

ಹತ್ತಿರದ ಸರ್ಕಾರಿ ಆಸ್ಪತ್ರೆ, ತಾಲೂಕು ಆಸ್ಪತ್ರೆಗಳು, ಜಿಲ್ಲಾ ಆಸ್ಪತ್ರೆಗಳು,

ಸಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು,

ಆಸ್ಪತ್ರೆಗಳಲ್ಲಿನ ಆರೋಗ್ಯ ಮಿತ್ರರು,

ಆರೋಗ್ಯ ಸಹಾಯವಾಣಿ 104, ಟೋಲ್ ಫ್ರೀ ಸಂಖ್ಯೆ: 1800 425 8330