Horticulture

ಇ-ಹರಾಜು ಮೂಲಕ ಚಂದ್ರಂಪಳ್ಳಿ ಕ್ಷೇತ್ರದ ಮಾವಿನ ಫಸಲು ವಿಲೇವಾರಿ

06 March, 2021 5:21 PM IST By:
Mango

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ ತೋಟಗಾರಿಕಾ ಕ್ಷೇತ್ರದಲ್ಲಿ ಬೆಳೆದಿರುವ ಮಾವಿನ ಫಸಲನ್ನು 2020-21ನೇ ಸಾಲಿನಲ್ಲಿ ಹಣ್ಣಿನ ವ್ಯಾಪಾರಿಗಳಿಗೆ ಇ-ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು ಎಂದು ಕಲಬುರಗಿ ತೋಟಗಾರಿಕೆ ಇಲಾಖೆಯ (ರಾಜ್ಯ ವಲಯ) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

ಇ-ಹರಾಜು ಅವಧಿಯು ಮಾರ್ಚ್ 5 ರ ಬೆಳಿಗ್ಗೆ 11.30 ಗಂಟೆಗೆ ಪ್ರಾರಂಭವಾಗಿ ಮಾರ್ಚ್ 16 ರ ಸಂಜೆ 5.30 ಗಂಟೆಗೆ ಮುಕ್ತಾಯಗೊಳ್ಳಲಿದೆ. ಒಂದನೆ ಕೆರೆಯಲ್ಲಿ ಬಿಡ್ ನಿಲ್ಲದಿದ್ದಲ್ಲಿ ಮರು ಇ-ಹರಾಜು ಅವಧಿಯು 2021ರ ಮಾರ್ಚ್ 18 ಬೆಳಿಗ್ಗೆ 11.30 ಗಂಟೆಯಿಂದ ಪ್ರಾರಂಭವಾಗಿ ಮಾರ್ಚ್ 24ರ ಸಂಜೆ 5.30 ಗಂಟೆಗೆ ಮುಕ್ತಾಯಗೊಳ್ಳಲಿದೆ.

ಹೆಚ್ಚಿನ ವಿವರಗಳಿಗಾಗಿ ಕಲಬುರಗಿ ರಾಜ್ಯ ವಲಯದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಹಾಗೂ  ಕಚೇರಿ ದೂರವಾಣಿ ಸಂಖ್ಯೆ 08472-229479ನ್ನು ಸಂಪರ್ಕಿಸಲು ಕೋರಲಾಗಿದೆ.

ಕನ್ನಡ ಕಾವ, ಜಾಣ, ರತ್ನ ಪರೀಕ್ಷಾ ಫಲಿತಾಂಶ ಪ್ರಕಟ

ಕನ್ನಡ ಸಾಹಿತ್ಯ ಪರಿಷತ್ತಿನಿಂದ 2020-21ನೇ ಸಾಲಿನಲ್ಲಿ ಆಯೋಜಿಸಿದ ಕನ್ನಡ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ಪದ್ಮರಾಜ್ ದಂಡಾವತಿ ಅವರು ತಿಳಿಸಿದ್ದಾರೆ.  

ಕನ್ನಡ ಸಾಹಿತ್ಯ ಪರಿಷತ್ತಿನ ಪರೀಕ್ಷೆಯ ಫಲಿತಾಂಶ ಪಟ್ಟಿಯನ್ನು ರಾಜ್ಯದ ಎಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪರೀಕ್ಷಾ ಕೇಂದ್ರಗಳಿಗೆ ಕಳುಹಿಸಲಾಗಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣಾ ಫಲಕದಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಕನ್ನಡ ಸಾಹಿತ್ಯ ಪರಿಷತ್ತಿನ www.kasapa.in ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಮರು ಎಣಿಕೆಗೆ ಅಂಕಪಟ್ಟಿಗಳು ತಲುಪಿದ ಒಂದು ತಿಂಗಳೊಳಗಾಗಿ ಅರ್ಜಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು ದೂರವಾಣಿ ಸಂಖ್ಯೆ: 080-26623584ಗೆ ಸಂಪರ್ಕಿಸಲು ಕೋರಲಾಗಿದೆ.