Horticulture

ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿಗೆ ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನ

14 January, 2021 10:32 AM IST By:
Drip irrigation

ಪ್ರಸಕ್ತ 2020-21ನೇ ಸಾಲಿನಲ್ಲಿ ಕೇಂದ್ರ ಪುರಿಷ್ಕೃತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಸೂಕ್ಷ್ಮ ಹನಿ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು  ಕಲಬುರಗಿ ಜಿಲ್ಲೆಯ ರೈತರಿಗೆ ಸಹಾಯಧನ ನೀಡಲಾಗುತ್ತಿದೆ. ಇದಕ್ಕಾಗಿ ಜಿಲ್ಲೆಯ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ತೋಟಗಾರಿಕೆ (ಜಿ.ಪಂ.) ಉಪ ನಿರ್ದೇಶಕರು ತಿಳಿಸಿದ್ದಾರೆ.

ತೋಟಗಾರಿಕೆ ಬೆಳೆಗಳಿಗೆ ನೀರಿನ ಮಿತಬಳಕೆಗಾಗಿ ಹನಿ ನೀರಾವರಿ ವ್ಯವಸ್ಥೆ ಅಳವಡಿಸಲು ಅನುಕೂಲವಾಗುವಂತೆ ಕಲಬುರಗಿ ಜಿಲ್ಲೆಯ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ಸಹಾಯಧನ ನೀಡಲಾಗುತ್ತಿದೆ. ಆಸಕ್ತ ರೈತರು ಇದರ ಸದುಪಯೋಗ ಪಡೆಯಬೇಕು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಹಾಗೂ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಲಾಗಿದೆ.