1. ತೋಟಗಾರಿಕೆ

ಮಾರ್ಚ್ 8 ರಿಂದ 11 ರವರೆಗೆ ನಾಲ್ಕು ದಿನಗಳ ಕಾಲ ಹಣ್ಣುಗಳ ಮೇಳ

Fruits

ತೋಟಗಾರಿಕೆ ಮಾಡುತ್ತಿರುವ ರೈತರನ್ನು ಪ್ರೋತ್ಸಾಹಿಸುವುದಕ್ಕಾಗಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಕೊಪ್ಪಳ ತೋಟಗಾರಿಕೆ ಇಲಾಖೆಯಿಂದ ಹಣ್ಣುಗಳ ಮೇಳ ಆಯೋಜಿಸಲಾಗಿದೆ.

ಕೊಪ್ಪಳ ತೋಟಗಾರಿಕೆ ಇಲಾಖೆ ಪ್ರತಿ ವರ್ಷದಂತೆ ಈ ವರ್ಷವೂ ಮಾರ್ಚ್‌ 8 ರಿಂದ 11 ರವರೆಗೆ ತೋಟಗಾರಿಕೆ ಉಪನಿರ್ದೇಶಕರು (ಜಿಲ್ಲಾ ಪಂಚಾಯತ್) ಕೊಪ್ಪಳನಲ್ಲಿರುವ  ಕಚೇರಿ ಆವರಣದಲ್ಲಿ  ನಾಲ್ಕು ದಿನಗಳ ಕಾಲ ದ್ರಾಕ್ಷಿ, ದಾಳಿಂಬೆ, ಪೇರಲ, ಅಂಜೂರ, ಕಲ್ಲಂಗಡಿ, ಮೋಸಂಬಿ, ಕರಬೂಜ, ಬಾಳೆ, ಅಣಬೆ ಮತ್ತು ಜೇನು ಮೇಳ ಆಯೋಜಿಸಲಾಗಿದೆ.

 ರೈತರು ತಮ್ಮ ಉತ್ಪನ್ನಗಳಿಗೆ ಯೋಗ್ಯ ಬೆಲೆ ದೊರೆಯಲು ಹಾಗೂ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು, ಆಸಕ್ತ ರೈತರು ತಮ್ಮ ಪಹಣಿ ಪ್ರತಿಯೊಂದಿಗೆ, ತಮ್ಮ ಹೆಸರು, ವಿಳಾಸ, ಸರ್ವೆ ನಂಬರ್, ಬೆಳೆ, ತಳಿಗಳು ಹಾಗೂ ವಿಸ್ತೀರ್ಣ ಮುಂತಾದ ವಿವರಗಳೊಂದಿಗೆ ಹೆಸರು ನೋಂದಾಯಿಸಿಕೊಳ್ಳಬೇಕು.

ಮೇಳದಲ್ಲಿ ಭಾಗವಹಿಸುವ ಜಿಲ್ಲೆಯ ಆಸಕ್ತ ಬೆಳೆಗಾರರು ಮುಂಗಡವಾಗಿ ಮಾರಾಟ ಮಳಿಗೆಗಳನ್ನು ಕಾಯ್ದಿರಿಸುವ ಸಲುವಾಗಿ ತಮ್ಮ ಹೆಸರನ್ನು ನೋಂದಾಯಿಸುವಂತೆ ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಉಕ್ಕುಂದ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್‌: 9740212164/ 7760967550 ಸಂಪರ್ಕಿಸಬಹುದು ಎಂದು ಇಲಾಖೆಯ ಉಪನಿರ್ದೇಶಕರು   ತಿಳಿಸಿದ್ದಾರೆ.

ಇತ್ತೀಚೆಗೆ ರೈತರು ಹೊಸ ಹೊಸ ತಳಿಗಳ ಹಣ್ಣುಗಳನ್ನು ಬೆಳೆಸಲಾಗುತ್ತಿದೆ. ದೇಶ ವಿದೇಶಗಳಲ್ಲಿರುವ ಹಣ್ಣುಗಳ ತಳಿಗಳನ್ನು ಸಹ ಬೆಳಸಲಾಗುತ್ತಿದೆ. ಈ ಮೇಳದಲ್ಲಿ ವಿವಿಧ ಹಣ್ಣುಗಳನ್ನು ಪ್ರದರ್ಶನಕ್ಕಿಡಲಾಗುವುದು. ಉತ್ತಮ ಹಣ್ಣುಗಳ ಬೇಡಿಕೆಯೂ ಹೆಚ್ಚಾಗುವುದಲ್ಲದೇ ರೈತರಿಂದ ನೇರವಾಗಿ ಖರೀದಿಸಲಾಗುವುದು.

Published On: 06 March 2021, 05:00 PM English Summary: Fruit Fair on March 8

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.