Horticulture

ಮಾವು ಬೆಳೆಯಲ್ಲಿ ಕೈಗೊಳ್ಳಬೇಕಾದ ಅಗತ್ಯ ಪೂರಕ ಕ್ರಮಗಳು

09 January, 2023 2:30 PM IST By: Kalmesh T
Necessary supplementary measures to be taken in mango crop

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನಲ್ಲಿ (ಲಕ್ಷ್ಮೇಶ್ವರ ತಾಲೂಕ ಒಳಗೊಂಡಂತೆ ) ಸುಮಾರು 215 ಎಕರೆ ಪ್ರದೇಶದಲ್ಲಿ ಮಾವಿನ ಬೆಳೆಯನ್ನು ಬೆಳೆಯಲಾಗುತ್ತಿದೆ. ಮಾವಿನ ಬೆಳೆಗೆ ಹಲವಾರು ಕೀಟ ರೋಗಗಳ ಬಾಧೆ ತಗುಲಿದ್ದು, ಪರಿಣಾಮಕಾರಿಯಾಗಿ ನಿಯಂತ್ರಿಸಿದರೆ, ಉತ್ತಮ ಗುಣಮಟ್ಟದ ಇಳುವರಿಯನ್ನು ಪಡೆಯಬಹುದಾಗಿದೆ.

  • ಹೂ ಬಿಟ್ಟಾಗ ಮತ್ತು ಪರಾಗ ಸ್ಪರ್ಷ ಆಗುತ್ತಿರುವ ಸಮಯದಲ್ಲಿ ಗಂಧಕವನ್ನು ಸಿಂಪಡಿಸಬಾರದು. ಏಕೆಂದರೆ, ಗಂಧಕವು ಪರಾಗ ಸ್ಪರ್ಷ ಕ್ರಿಯೆಗೆ ಸಹಕರಿಸುವ ಕೀಟಗಳಿಗೆ ಅರಳಿದ ಹೂವುಗಳು ಮತ್ತು ಎಳೆಯ ಕಟ್ಟಿದ ಕಾಯಿಗಳಿಗೆ ಹಾನಿಯನ್ನುಂಟು ಮಾಡುತ್ತವೆ.
  • ಪರಾಗ ಸ್ಪರ್ಷ ಆಗುತ್ತಿರುವ ಸಮಯದಲ್ಲಿ ಯಾವುದೇ ಕಾರಣಕ್ಕು ಗಿಡಗಳಿಗೆ ನೀರುಣಿಸಬಾರದು ಪರಾಗ ಸ್ಪರ್ಷ ಪೂರ್ಣಗೊಂಡ ನಂತರ ಕಾಯಿಯು ಬಟಾಣಿಯಿಂದ ಗೋಲಿ ಗಾತ್ರದ ಹಂತದಲ್ಲಿ ನೀರು ಕೊಡಲು ಪ್ರಾರಂಭಿಸಬಹುದು. ಎರಡು ಮತ್ತು ಮೂರು ರಕ್ಷಾಣಾತ್ಮಕ/ಪೂರಕ ನೀರಾವರಿ ಕೈಗೊಳ್ಳಬಹುದು.
  • ಕಚ್ಚಿದ ಕಾಯಿಗಳು ಉದುರದಂತೆ ನೋಡಕೊಳ್ಳಲು ಅವುಗಳಿಗೆ ಸಸ್ಯ ಬೆಳವಣಿಗೆ ಬೋದಕ (NAA) (Plantofx) 50ppm ಪ್ರಮಾಣದಲ್ಲಿ ಸಿಂಪಡಿಸಬೇಕು (0.5M/L,ಪ್ರಮಾಣದಲ್ಲಿ ಬೆರೆಸಿ)
  • ಚಿಕ್ಕ ಕಾಯಿಗಳು ಬೆಳೆಯುತ್ತಿರುವ ಹಂತದಲ್ಲಿ ಅವುಗಳಿಗೆ ಭಾರತಿಯ ತೋಟಗಾರಿಕೆ ಸಂಶೋಧನಾ ಸಂಸ್ಥೆ (IIHR) ರವರು ಹೊರತಂದಿರುವ “Mango Special” ವನ್ನು ಪ್ರತಿ 10 ಲೀಟರ್ ನೀರಿನಲ್ಲಿ 50 ಗ್ರಾಂ ಪ್ರಮಾಣದಲ್ಲಿ ಕರಗಿಸಿ ಸಿಂಪಡಿಸುವುದು. ಈ ಸಿಂಪರಣಾ ದ್ರಾವಣಕ್ಕೆ ಸೋಪು ದ್ರಾವಣವನ್ನು (0.5 ಮಿ ಲೀ/ಲೀ) ಮತ್ತು ಅರ್ಧ ಹೋಳು ನಿಂಬೆ ರಸ ಬೆರೆಸಿ ಸಿಂಪಡಿಸಿದರೆ ಅದು ಪರಿಣಾಮಕಾರಿ ಕಾಯಿಲೆಗಳಿಗೆ ಅಂಟಿಕೊಳ್ಳುವುದು.
  • ಪೋಟ್ಯಾಷಿಯಂ ನೈಟ್ರೇಟ್ (Potssium nitrate-KN03) (13-0-45) 20 ಗ್ರಾಂ/ಲೀ ಸಿಂಪರಣೆಯನ್ನು ಕೈಗೊಳ್ಳುವುದರಿಂದ ಮೊಗ್ಗು ಅರಳಲು ಮತ್ತು ಏಕರೂಪದ ಹೂ ಬಿಡುವಿಕೆಯನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ.
  • ಯಾವುದೇ ಕೀಟನಾಶಕಗಳನ್ನು ಒಂದು ಅಥವಾ ಎರಡು ಬಾರಿಗಿಂತ ಹೆಚ್ಚಾಗಿ ಉಪಯೋಗಿಸಬಾರದು
  • ಕೈಗೆಟಕಿರುವ ಹಂತದ ಸಣ್ಣ ಕಾಯಿಗಳಿಗೆ ಪೇಪರ್ ಕವರ ಹೊದಿಕೆ ಅಳವಡಿಸಿದಲ್ಲಿ ಉತ್ತಮ ಗುಣಮಟ್ಟದ ಹಣ್ಣುಗಳನ್ನು ಪಡೆಯಬಹುದಾಗಿದೆ. ನೇರ ಮಾರುಕಟ್ಟೆ ಸಂಪರ್ಕ ಹೊಂದಿದ ಬೆಳೆಗಾರರಿಗೆ ಇದು ಉತ್ತಮ ಕ್ರಮವಾಗಲಿದೆ. ಎಲ್ಲಾ ಕಾಯಿಲೆಗಳಿಗೆ ಕವರ ಅಳವಡಿಕೆ ಮಾಡುವ ಅಗತ್ಯವಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ತೋಟಗಾರಿಕೆ ಇಲಾಖೆಗೆ, ಭೇಟಿ ನೀಡಿ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಶಿರಹಟ್ಟಿ ಶ್ರೀ ಸುರೇಶ ವಿ ಕುಂಬಾರ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಮಾಹಿತಿ: ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು,(ಜಿ.ಪಂ) ಶಿರಹಟ್ಟಿ