Horticulture

ಹನಿ ನೀರಾವರಿಗೆ ಶೇ. 90 ರಷ್ಟು ರೈತರಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನ

19 December, 2020 11:14 AM IST By:

ತೋಟಗಾರಿಕೆ ಬೆಳೆಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಸಲುವಾಗಿ ತೋಟಗಾರಿಕೆ ಇಲಾಖೆ ಹನಿ ನೀರಾವರಿ ಯೋಜನೆ ಅನುಷ್ಠಾನಗೊಳಿಸುತ್ತಿದ್ದು ಈ ಯೋಜನೆಯಡಿ ರೈತರಿಗೆ ಸಹಾಯ ಧನ ನೀಡಲು ರೈತರಿಂದ ಅರ್ಜಿ ಆಹ್ವಾನಿಸಿದೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನಲ್ಲಿ ಕೃಷಿ ಸಂಚಯಿನಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಶೇ 90 ಸಹಾಯಧನದಲ್ಲಿ ಹನಿ ನೀರಾವರಿ ಅಳವಡಿಕೆಗೆ ಅವಕಾಶವಿದ್ದು, 5 ಎಕರೆವರೆಗೂ ಹನಿ ನೀರಾವರಿ ವಿಸ್ತರಿಸಿಕೊಳ್ಳಬಹುದು.

ಇದನ್ನೂ ಓದಿ:ಮಾವಿನ ಬೆಳೆ: ರೈತರು ಕೈಗೊಳ್ಳಬೇಕಾದ ನಿರ್ವಹಣಾ ಕ್ರಮಗಳು

ಆಸಕ್ತ ರೈತರು ಡಿ. 31 ಒಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ತಾಲ್ಲೂಕಿನ ಹೊಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸುವಂತೆ ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಬಣಕಾರ ತಿಳಿಸಿದ್ದಾರೆ.

ಹನಿ ನೀರಾವರಿಗೆ ಶೇ. 90 ರಷ್ಟು ಸಹಾಯಧನ ನೀಡಲು ರೈತರಿಂದ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆ ಹನಿ ನೀರಾವರಿ ಯೋಜನೆಯಡಿ ಸಹಾಯಧನ ಸೌಲಭ್ಯ ದೊರೆಯಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್  ತಾಲೂಕಿನ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಎಸ್‌.ಕೇಶವಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಯೋಜನೆಯಡಿ ಫಲಾನುಭವಿಗೆ ಗರಿಷ್ಠ 2 ಎಕರೆ ಪ್ರದೇಶದ ಬೆಳೆಗಳಿಗೆ ಹನಿ ನೀರಾವರಿ ಅಳವಡಿಕೆಗೆ ಅವಕಾಶವಿದೆ. ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ 90ರಷ್ಟು ಸಹಾಯಧನ ದೊರೆಯುತ್ತದೆ. ಆಸಕ್ತರು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸಿ ಅರ್ಜಿ ಸಲ್ಲಿಸಲು ಕೋರಿದೆ.