ತೋಟಗಾರಿಕೆ ಇಲಾಖೆಯಿಂದ 2020-21 ನೇ ಸಾಲಿನ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಿಗೆ ನೀರಿನ ಮಿತಬಳಕೆಗಾಗಿ ಹನಿ ನೀರಾವರಿ ಅಳವಡಿಸಿಕೊಳ್ಳಲು ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಸಹಾಯಧನ ನೀಡಲಾಗುತ್ತಿದೆ. ಇದಕ್ಕಾಗಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ (ಜಿ.ಪಂ.) ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
ಆಸಕ್ತ ರೈತರು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಹಾಗೂ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಲಾಗಿದೆ.
ತೋಟಗಾರಿಕೆ ಮಾಡುತ್ತಿರುವ ರೈತರಿಗೆ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ನೀಡುವ ಸಹಾಯಧನ ಅನುಕೂಲವಾಗುತ್ತದೆ.ಆರ್ಥಿಕವಾಗಿ ಹಿಂದುಳಿದ ಜನರಿಗೆ ನೀರಾವರಿ ಮಾಡಲು ಹಣವಿಲ್ಲದೆ ಅವರು ಬೇರೆ ಬೇರೆ ನಗರಗಳಿಗೆ ವಲಸೆ ಹೋಗುತ್ತಿರುತ್ತಾರೆ. ಇದ್ದ ಜಮೀನನ್ನು ಬೇರೆಯವರಿಗೆ ಲೀಸ್ ಹಾಕಿ ಹೋಗಿರುತ್ತಾರೆ. ಇಂತಹ ರೈತರನ್ನು ಗಮನದಲ್ಲಿಟ್ಟುಕೊಂಡು ಹಾಗೂ ಕೃಷಿಯಲ್ಲಿ ಆಸಕ್ತಿಯಿರುವ ರೈತರಿಗಾಗಿ ಸರ್ಕಾರ ಈ ಯೋಜನೆ ಜಾರಿಗೆ ತಂದಿದೆ.
ಗ್ರಾಮಾಂತರ ರೈತರು ನೀರಾವರಿ ಮಾಡಲು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಸಲ್ಲಿಸಿ ತೋಟಗಾರಿಕೆ ಇಲಾಖೆಯಿಂದ ಸಿಗುವ ಸೌಲಭ್ಯವನ್ನು ಸದುಪಯೋಗ ಪಡೆದುಕೊಳ್ಳಬಹುದು.