ಈ ಬಾರಿಯ ಬಜೆಟ್‌ನಲ್ಲಿ ಹಲವು ಕ್ಷೇತ್ರಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಧಾರಾಳವಾಗಿ ಅನುದಾನ ಮೀಸಲಿಟ್ಟಿದ್ದಾರೆ.
ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್‌ನಲ್ಲಿ ರೈತರಿಗೆ ಬಂಪರ್ ಗಿಫ್ಟ್!
ಅದೇ ರೀತಿಯಲ್ಲಿ ಮಠ ಮಾನ್ಯಗಳಿಗೂ ಅನುದಾನ ನೀಡಲಾಗಿದೆ.
2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಪ್ರವಾಸೋದ್ಯಮ ಇಲಾಖೆಗೆ ವಿಶೇಷ ಕೊಡುಗೆಗಳನ್ನು ನೀಡಲಾಗಿದೆ.
ರಾಜ್ಯದ ಮಠ-ಮಂದಿರಗಳ ಅಭಿವೃದ್ಧಿಗೆ ಬರೋಬ್ಬರಿ 1,000 ಕೋಟಿ ರೂ ಅನುದಾನವನ್ನು ಮೀಸಲಿಟ್ಟಿದ್ದಾರೆ.
ಕಿಸಾನ್ ಕಾರ್ಡ್‌ದಾರರಿಗೆ ಸಿಗಲಿದೆ ಬರೋಬ್ಬರಿ 10,000 ಸಾವಿರ ರೂ!
ಇನ್ನು ನಂದಿ ಗಿರಿಧಾಮ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ, ನಂದಿಬೆಟ್ಟಕ್ಕೆ ಖಾಸಗಿ-ಸರ್ಕಾರಿ ಸಹಭಾಗಿತ್ವದಲ್ಲಿ ರೋಪ್ ವೇ ನಿರ್ಮಾಣ,
ಪ್ರವಾಸಿ ಗೈಡ್‌ಗಳ ಮಾಸಿಕ ಪ್ರೋತ್ಸಾಹ ಧನವನ್ನು 2,000ದಿಂದ 5,000 ಸಾವಿರಕ್ಕೆ ಹೆಚ್ಚಳ, ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ರೂ. ಕೋಟಿ ನೀಡಿರುವುದು ವಿಶೇಷವಾಗಿದೆ.
ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ 475 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ.
ಕಿತ್ತೂರು ಭಾಗದ ಅಭಿವೃದ್ಧಿಗೆ ಕಿತ್ತೂರು ಕರ್ನಾಟಕ ಮಂಡಳಿ ಸ್ಥಾಪನೆ ಮಾಡಲಾಗುವುದು ಎಂದಿದ್ದಾರೆ.
ಶ್ರೀ ಭುವನೇಶ್ವರಿ ತಾಯಿಯ ಬೃಹತ್ ಮೂರ್ತಿ ಹಾಗೂ ಥೀಮ್ ಪಾರ್ಕ್ ಅನ್ನು ಬೆಂಗಳೂರು ನಗರದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದಿದ್ದಾರೆ.
State budget 2023 ಬೊಮ್ಮಾಯಿ ಗಿಫ್ಟ್: ಗೃಹಿಣಿಯರಿಗೆ ಮಾಸಿಕ ಸಿಗಲಿದೆ ಇಷ್ಟು ಸಹಾಯಧನ!
ನಮ್ಮ ಜಿಲ್ಲೆ ನಮ್ಮ ಸಂಸ್ಕೃತಿ ಎಂಬ ಕಾರ್ಯಕ್ರಮದಡಿ ಪ್ರತಿ ಜಿಲ್ಲೆಯಲ್ಲಿ ಎಲ್ಲ ವರ್ಗದ ಸ್ಥಳೀಯ ಕಲಾವಿದರನ್ನು ಒಳಗೊಂಡಂತೆ
ಜಾನಪದ ಹಬ್ಬವನ್ನು ಆಯೋಜನೆ ಮಾಡಲು ಯೋಜನೆಯನ್ನು ಪರಿಚಯಿಸಲಾಗಿದೆ.
ಅಲ್ಲದೇ ಮುಖ್ಯವಾಗಿ ಗಡಿನಾಡು ಪ್ರದೇಶದಲ್ಲಿ ಕನ್ನಡ ಭಾಷೆ, ಕಲೆ, ಶಿಕ್ಷಣ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಪ್ರಾಶಸ್ತ್ರ ನೀಡಲು ಉದ್ದೇಶಿಸಲಾಗಿದೆ.
ಗಡಿ ಪ್ರದೇಶದ ರಸ್ತೆಗಳ ಹಾಗೂ ಸಮಗ್ರ ವಿವಿಧ ಇಲಾಖೆಗಳ ಮುಖಾಂತರ 150 ಕೋಟಿ ರೂ. ಒದಗಿಸಲಾಗಿಸಲಾಗಿದೆ.
ರಾಮನಗರದ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ ಘೋಷಣೆ ಮಾಡಲಾಗಿದೆ.
ಚಾಮುಂಡಿ ಬೆಟ್ಟದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಮ್ಯೂಸಿಯಂ, ಕಲಾ ಗ್ಯಾಲರಿ ನಿರ್ಮಾಣ ಯೋಜನೆ ಪರಿಚಯಿಸಲಾಗಿದೆ.
ಹೊನ್ನಾವರದಲ್ಲಿ ಚೆನ್ನಭೈರಾದೇವಿ ಸ್ಮಾರಕ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಲಾಗಿದೆ.
State budget 2023 ಬೊಮ್ಮಾಯಿಯಿಂದ ರೈತರಿಗೆ ಮಿಠಾಯಿ: ರೈತರಿಗೆ 5 ಲಕ್ಷ ರೂಪಾಯಿಯವರೆಗೆ ಬಡ್ಡಿರಹಿತ ಸಾಲ!
ರಾಜ್ಯ ಬಜೆಟ್‌ನ ಮುಖ್ಯಾಂಶಗಳು
- ರೈತರಿಗೆ ಈ ಹಿಂದೆ 3 ಲಕ್ಷ ರೂಪಾಯಿಯವರೆಗೆ ಬಡ್ಡಿ ರಹಿತ ಸಾಲವನ್ನು ನೀಡಲಾಗುತ್ತಿತ್ತು. ಇದೀಗ 5 ಲಕ್ಷ ರೂಪಾಯಿವರೆಗಿನ ಬಡ್ಡಿ ರಹಿತ ಸಾಲ ಸೌಲಭ್ಯ ಸಿಗಲಿದೆ.
- ಕಿಸಾನ್ ಕಾರ್ಡ್ ಸೌಲಭ್ಯ ಇರುವ ರೈತರಿಗೆ ಭೂಸಿರಿ ಯೋಜನೆ
- ಗೃಹಿಣಿಯರಿಗೆ ತಿಂಗಳಿಗೆ 500 ರೂಪಾಯಿ ಮೊತ್ತದ ಸಹಾಯ ಧನ
- ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಸಿಗಲಿದೆ ಇನ್ಮುಂದೆ ಉಚಿತ ಬಸ್ ಪಾಸ್
- ಮಹಿಳಾ ಸಂಘಟಿತ ಕಾರ್ಮಿಕರಿಗೂ ಸಿಹಿ ಇನ್ಮುಂದೆ ಎಲ್ಲರಿಗೂ ಉಚಿತ ಬಸ್ ಪಾಸ್
- ಆರ್ಥಿಕವಾಗಿ ಹಿಂದುಳಿದವರಿಗೆ ವಸತಿ ಯೋಜನೆ ಕಲ್ಪಿಸಲು ಕ್ರಮ
- ನೇತಾರ ಸಮ್ಮಾನ ಯೋಜನೆಯಡಿ ಸಹಾಯಧನ 3 ಸಾವಿರ ರೂಪಾಯಿಯಿಂದ 5 ಸಾವಿರಕ್ಕೆ ಹೆಚ್ಚಳ!
- ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ 180 ಕೋಟಿ ವೆಚ್ಚದಲ್ಲಿ ಜೀವನ್ ಜ್ಯೋತಿ ಕಿಸಾನ್ ಯೋಜನೆ ಪರಿಚಯ
- ಮಹಿಳಾ ಸಂಘಟಿತ ಕಾರ್ಮಿಕರಿಗೂ ಉಚಿತ ಬಸ್ ಪಾಸ್ ಸೌಲಭ್ಯ. 30 ಲಕ್ಷ ಮಹಿಳೆಯರಿಗೆ ಉಚಿತ ಬಸ್ ಪಾಸ್ ಸೌಲಭ್ಯ ಸಿಗಲಿದೆ.
- ನೇತಾರ ಸಮ್ಮಾನ ಯೋಜನೆಯಡಿ ಸಹಾಯಧನ 3 ಸಾವಿರ ರೂಪಾಯಿಯಿಂದ 5 ಸಾವಿರಕ್ಕೆ ಹೆಚ್ಚಳ
- ನೇಕಾರರು ಹಾಗೂ ಮೀನುಗಾರರಿಗೂ ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ
- ರಾಜ್ಯದಲ್ಲಿ 19 ಕಾರ್ಮಿಕರ ವಿಮಾ ಆಸ್ಪತ್ರೆ ಪ್ರಾರಂಭ
- ಬಿಪಿಎಲ್ ಕಾರ್ಡ್‌ದಾರರಿಗೆ ಮಾಸಿಕ ಅಕ್ಕಿಯನ್ನು 5 ರಿಂದ 6 ಕೆ.ಜಿಗೆ ಹೆಚ್ಚಳ
- ನೇಕಾರ ಸಮ್ಮಾನ ಯೋಜನೆಯಡಿ ಸಹಾಯಧನ 3 ಸಾವಿರ ರೂಪಾಯಿಯಿಂದ 5 ಸಾವಿರಕ್ಕೆ ಹೆಚ್ಚಳ
- ಈಗಾಗಲೇ ಹೇಳಿದಂತೆ ನೇಕಾರರು, ಮೀನುಗಾರರಿಗೂ ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ
- ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ 5 ಕೋಟಿ ರೂಪಾಯಿ ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಾಣ.