1. ಸುದ್ದಿಗಳು

ಲಾಕ್ ಡೌನ್ ನಿಂದ ಕೃಷಿ ವಲಯಕ್ಕೆ ತೀವ್ರ ಆರ್ಥಿಕ ಸಂಕಷ್ಟ: ತರಕಾರಿ, ಹಣ್ಣು, ಹೂವು ಬೆಳೆಗಾರರಿಗೆ ಹೆಕ್ಟೇರಿಗೆ 10 ಸಾವಿರ ರೂಪಾಯಿ ನೆರವು ಘೋಷಣೆ

Cm bs yediyurappa announces relief package to farmers

ಲಾಕ್ ಡೌನ್ ನಿಂದ ಹಲವು ಅಸಂಘಟಿತ ವಲಯಗಳಿಗೆ, ರೈತರಿಗೆ, ದಿನಗೂಲಿ ನೌಕರರಿಗೆ, ಬಡವರು-ನಿರ್ಗತಿಕರಿಗೆ ತೀವ್ರ ಸಂಕಷ್ಟವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಸುಮಾರು 1,250 ಕೋಟಿ ರೂಪಾಯಿಗೂ ಅಧಿಕ ವಿಶೇಷ ಪರಿಹಾರ ಪ್ಯಾಕೇಜ್ ನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರಿಂದ ಲಾಕ್ಡೌನ್ ಘೋಷಣೆ ಅನಿವಾರ್ಯವಾಗಿತ್ತು. ಈ ಲಾಕ್ಡೌನ್ ಮೇ 24ರವರೆಗೆ ಜಾರಿಯಲ್ಲಿದ್ದು, ಈ ನಿರ್ಬಂಧದಿಂದ ವ್ಯಾಪಾರ-ವಾಣಿಜ್ಯ ಚಟುವಟಿಕೆಗಳು ಕ್ಷೀಣಿಸಿ ಸಮಾಜದ ಹಲವು ವರ್ಗಗಳ ಜನರ ಬದುಕಿನ ಮೇಲೆ ತೀವ್ರ ಹೊಡೆತ ಬಿದ್ದಿದರಿಂದ ಆರ್ಥಿಕ ವಿಶೇಷ ಪ್ಯಾಕೇಜ್ ಘೋಷಿಸಲಾಗಿದೆ. ಸರ್ಕಾರ ಯಾವತ್ತಿಗೂ ಜನರ ಪರವಾಗಿರುತ್ತದೆ ಎಂದು ಆಶ್ವಾಸನೆ ನೀಡುತ್ತೇನೆ ಎಂದರು.

ಇತ್ತೀಚೆಗೆ ಲಾಕ್ಡೌನ್ ನಿಂದಾಗಿ ತರಕಾರಿ, ಹೂವು ಹಣ್ಣು ಬೆಳೆಯುವ ರೈತರಿಗೆ ಖರೀದಿದಾರರಿಲ್ಲದೆ ಹಾನಿಯಾಗಿತ್ತು. ಹಾಕಿದ ಖರ್ಚು ಬರದೆ ರೈತರ ಸಂಕಷ್ಟದಲ್ಲಿ ಸಿಲುಕಿದ್ದರು. ಹೀಗಾಗಿ ರೈತರಿಗೂ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

, ಹೂವು ಬೆಳೆಗಾರರಿಗೆ ಹಾನಿಯಾಗಿದ್ದರೆ ಹೆಕ್ಟೇರಿಗೆ 10 ಸಾವಿರ ರೂಪಾಯಿ, ಹಣ್ಣು ತರಕಾರಿ, ಬೆಳೆಯುವ ರೈತರಿಗೂ ಪ್ರತಿ ಹೆಕ್ಟೇರಿಗೆ 10ಸಾವಿರ ರೂಪಾಯಿ ಪರಿಹಾರ ನೀಡಿದದ್ರೆ. ಸುಮಾರು 70 ಸಾವಿರ ರೈತರಿಗೆ ಇದರ ಪ್ರಯೋಜನ ಸಿಗಲಿದೆ.

ಸಾಲ ಮರು ಪಾವತಿ ದಿನಾಂಕ ಜುಲೈ ಅಂತ್ಯದವರೆಗೆ ವಿಸ್ತರಣೆ

ರೈತರು, ಸ್ವಸಹಾಯ ಸಂಘ, ಸೊಸೈಟಿ ಸಾಲ ಮರು ಪಾವತಿ ದಿನಾಂಕ ಜುಲೈ ಅಂತ್ಯದವರೆಗೆ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಪಡೆದಿರುವ ಅಲ್ಪಾವಧಿ ಮತ್ತು ದೀರ್ಘಾವಧಿ ಸಾಲ ಕಂತಿನ ಮರುಪಾವತಿಯನ್ನು 31-07-2021ರವರೆಗೆ ಅಂದರೆ ಮೂರು ತಿಂಗಳು ವಿಸ್ತರಿಸಲಾಗಿದೆ. ಈ ಅವಧಿಯಲ್ಲಿನ ಬಡ್ಡಿ ಮೊತ್ತವನ್ನು ಸರ್ಕಾರದವೇ ಪಾವತಿಸಲಿದೆ ಇದಕ್ಕಾಗಿ 135 ಕೋಟಿ ರೂಪಾಯಿ ಖರ್ಚು ಆಗಲಿದೆ.

ಆಟೋ, ಟ್ಯಾಕ್ಸಿ, ಚಾಲಕರಿಗೆ 3 ಸಾವಿರ ಘೋಷಣೆ

ಲಾಕ್ಡೌನ್ ನಿಂದಾಗಿ ಆಟೋ,ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಗಳ ಚಾಲಕರಿಗೆ ಹಾನಿಯಾಗಿದೆ. ಅವರಿಗೆ ಸಂಕಷ್ಟದಲ್ಲಿ ನೆರವಾಗಲಿದೆಂದು ಆಟೋ ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್ ಗಳ ಚಾಲಕರಿಗೆ ತಲಾ 3 ಸಾವಿರ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಿಸಲಾಗಿದೆ.

ಕಾರ್ಮಿಕರಿಗೆ, ಬೀದಿ ವ್ಯಾಪಾರಿಗಳಿಗೆ ತಲಾ 2 ಸಾವಿರ ರೂಪಾಯಿ

ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರದಂತೆ ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಮಾಡಿಸಿಕೊಂಡವರಿಗೆ ಕೊಡಲು ತೀರ್ಮಾನ ಇದಕ್ಕೆ 494 ಕೋಟಿ ರೂ ಖರ್ಚು. ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ರೂಪಾಯಿ, ಅಸಂಘಟಿತ ವಲಯದ ಕಾರ್ಮಿಕರಿಗೆ ತಲಾ 2 ಸಾವಿರ ರೂಪಾಯಿ , ಬೀದಿ ವ್ಯಾಪಾರಿಗಳಿಗೆ 2 ಸಾವಿರ ಹಾಗೂ ಕಲಾವಿದರು ಮತ್ತು ಕಲಾತಂಡಗಳಿಗೆ 3 ಸಾವಿರ ರೂಪಾಯಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

Published On: 19 May 2021, 01:41 PM English Summary: 10,000 per hectare assistance announced for vegetable, flower fruit growers

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.