News

ಅಡಿಕೆ ಚುಕ್ಕೆರೋಗ ತಡೆಗೆ 10 ಕೋಟಿ ರೂ. ಅನುದಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

08 November, 2022 3:56 PM IST By: Hitesh
Areca palm

ರಾಜ್ಯದಲ್ಲಿ ಅಡಿಕೆ ಮರಗಳಿಗೆ ಚುಕ್ಕೆ ರೋಗ ಬಂದಿದ್ದು,ಅದನ್ನು ತಡೆಗಟ್ಟಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಗತ್ಯ ಕ್ರಮ ವಹಿಸಿವೆ.

ಸಕ್ಕರೆ ರಫ್ತಿಗೆ ಭಾರತ ನಿರ್ಬಂಧ: ವಿಶ್ವದ ವಿವಿಧೆಡೆ ಸಮಸ್ಯೆ!

ಕೇಂದ್ರ ಸರ್ಕಾರವು ಅಡಿಕೆಯಲ್ಲಿ ಕಂಡು ಬಂದಿರುವ ರೋಗದ ಬಗ್ಗೆ ಅಧ್ಯಯನ ಮಾಡಿ ವರದಿ ನೀಡುವಂತೆ ತಜ್ಞರ ಸಮಿತಿಯನ್ನು ರಚನೆ ಮಾಡಿದೆ.

ಈಗಾಗಲೇ ರಾಜ್ಯ ಸರ್ಕಾರವೂ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದೆ.

ರೈತರಿಗೆ ಮಾಹಿತಿ ನೀಡುವ ಕೆಲಸವೂ ಆಗುತ್ತಿದೆ. ಇದೀಗ ಅಡಿಕೆ ಮರದಲ್ಲಿ ಕಾಣಿಸಿಕೊಂಡಿರುವ ರೋಗವನ್ನು ತಡೆಯುವ ನಿಟ್ಟಿನಲ್ಲಿ

ಅವಶ್ಯವಿರುವ ಔಷಧಿಗೆ 10 ಕೋಟಿ ರೂಪಾಯಿ ಮೊತ್ತದ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಅಡಿಕೆ ಮರದಲ್ಲಿ ಕಂಡು ಬಂದಿರುವ ಚುಕ್ಕಿರೋಗ ತಡೆಗೆ ಅಗತ್ಯ ಕ್ರಮ ವಹಿಸಲಾಗುತ್ತಿದೆ.

ಅಗತ್ಯ ಔಷಧಿಯನ್ನು ಖರೀದಿಸಲು ತುರ್ತಾಗಿ 10 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.  

ಆಧಾರ್‌ ಕಾರ್ಡ್‌ಗಾಗಿ 24 ವರ್ಷ ಬಿಟ್ಟು ಮನೆಗೆ ಬಂದ ವ್ಯಕ್ತಿ!

ಇನ್ನು ಕರಾವಳಿ ಭಾಗದಲ್ಲಿ ಪಡಿತರ ಚೀಟಿ ಮೂಲಕ ಕುಚಲಕ್ಕಿ ವಿತರಣೆ ಈ ಭಾಗದಲ್ಲಿ ಕುಚುಲಕ್ಕಿ ಸೇವನೆ ಸಾಮಾನ್ಯ.

ಕುಚಲಕ್ಕಿಯನ್ನು ರೈತರಿಂದ ಖರೀದಿಸಿ ಪಡಿತರ ಚೀಟಿ ಮೂಲಕ ವಿತರಿಸಲು ಸೂಚಿಸಲಾಗಿದೆ. ಈ ಭಾಗದ ಬೇಕು ಬೇಡಗಳ ಬಗ್ಗೆ ನಮಗೆ ಅರಿವಿದೆ.

ಬರುವ ದಿನಗಳಲ್ಲಿ ನಮ್ಮ ಕೆಲಸಗಳ ವರದಿಯನ್ನು ಜನರ ಮುಂದೆ ಇಡಲಾಗುವುದು, ರಾಜ್ಯದ ಅಭಿವೃದ್ಧಿಯನ್ನು ನಿರಂತರವಾಗಿ ಮಾಡುತ್ತಿದ್ದೇವೆ. ಅ

ಭಿವೃದ್ಧಿ ನಿರಂತರವಾಗಿ ತಿರುಗುವ ಚಕ್ರ. ಅದು ಎಂದೂ ನಿಲ್ಲಬಾರದು ಎಂದು ಅವರು ತಿಳಿಸಿದ್ದಾರೆ.    

Areca palm: ರಾಜ್ಯದ ಅಡಿಕೆ ತೋಟಗಳಲ್ಲಿ ಕಾಣಿಸಿಕೊಂಡ ಹಾಗೂ ಹಬ್ಬಿರುವ ಎಲೆ ಚುಕ್ಕಿ ರೋಗದ ಬಗ್ಗೆ ಸಮಗ್ರ ಅಧ್ಯಯನ ಮಾಡುವುದಕ್ಕೆ ಕೇಂದ್ರ ಸರ್ಕಾರ ಈಗಾಗಲೇ ಮುಂದಾಗಿದೆ.

ಅಡಿಕೆಗೆ ಎಲೆಚುಕ್ಕಿ ರೋಗ: ಕೇಂದ್ರದಿಂದ ತಜ್ಞರ ಸಮಿತಿ ರಚನೆ, ಮುಂದೇನು?

Basavaraja Bommai

ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಅಡಿಕೆ ತೋಟದಲ್ಲಿ ಎಲೆ ಚುಕ್ಕಿರೋಗ ಕಾಣಿಸಿಕೊಂಡಿತ್ತು. ಇದರಿಂದ ಅಡಿಕೆ ಬೆಳೆಯನ್ನು ಬೆಳೆದ ಸಾವಿರಾರು ರೈತರು ಸಂಕಷ್ಟಕ್ಕೆ ಸಿಲುಕಿದ್ದರು.

ಇದನ್ನು ತಪ್ಪಿಸಲು ಕೇಂದ್ರ ಸರ್ಕಾರವು ಅಡಿಕೆಯಲ್ಲಿ ಕಂಡು ಬಂದಿರುವ ಎಲೆಚುಕ್ಕಿ ರೋಗದ ಬಗ್ಗೆ ಅಧ್ಯಯನ ಮಾಡಲು ಏಳು ತಜ್ಞರನ್ನು ಒಳಗೊಂಡ ಸಮಿತಿಯನ್ನು ಕೇಂದ್ರ ಕೃಷಿ ಸಚಿವಾಲಯ ರಚಿಸಿದೆ.

ಕೇಂದ್ರ ಸರ್ಕಾರ ರಚಿಸಿರುವ ಈ ಸಮಿತಿಯಲ್ಲಿ ಕಾಸರಗೋಡಿನ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯ (ಸಿಪಿಸಿಆರ್‌ಐ) ಭಾರತೀಯ ಕೃಷಿ ವಿಜ್ಞಾನ ಪರಿಷತ್‌ನ ನಿರ್ದೇಶಕಿ ಅನಿತಾ ಕರುಣ್‌, ಕಲ್ಲಿಕೋಟೆಯ ಅಡಿಕೆ ಮತ್ತು ಮಸಾಲೆ ಅಭಿವೃದ್ಧಿ ನಿರ್ದೇಶನಾಲಯದ ನಿರ್ದೇಶಕ ಹನಿ ಚೆರಿಯನ್, ನಿರ್ದೇಶನಾಲಯದ ಉಪ ನಿರ್ದೇಶಕ ಫೆಮಿನಾ, ಸಿಪಿಸಿಆರ್‌ಐ ಬೆಳೆ ಉತ್ಪಾದನಾ ವಿಭಾಗದ ಮುಖ್ಯಸ್ಥ ರವಿ ಭಟ್‌, ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಎಂ.ವಾಲಿ, ತೋಟಗಾರಿಕೆ ಇಲಾಖೆಯ ದಕ್ಷಿಣ ಕನ್ನಡದ ಉಪನಿರ್ದೇಶಕ ಎಚ್‌.ಆರ್‌.ನಾಯ್ಕ್, ಸಿಪಿಸಿಆರ್‌ಐನ ಬೆಳೆ ಸಂರಕ್ಷಣಾ ವಿಭಾಗದ ಮುಖ್ಯಸ್ಥ ವಿನಾಯಕ ಹೆಗಡೆ ಇದ್ದಾರೆ.

ಸಮಿತಿಯು ಸಭೆಗಳನ್ನು ನಡೆಸಬಹುದು ಹಾಗೂ ಅಡಿಕೆಯ ಎಲೆ ಚುಕ್ಕಿ ರೋಗದ ಸಮಸ್ಯೆ ಬಗೆಹರಿಸಲು ಕಾರ್ಯತಂತ್ರಗಳನ್ನು ರೂಪಿಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.  

ಕರಾವಳಿ ಬಿಪಿಎಲ್‌ ಕಾರ್ಡ್‌ದಾರರಿಗೆ ಸಿಹಿಸುದ್ದಿ: ಇನ್ಮುಂದೆ ಸಿಗಲಿದೆ ಕುಚಲಕ್ಕಿ!