ಕರ್ನಾಟಕ ವಿಧಾನ ಸಭೆ ಸಚಿವಾಲಯದ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಾವಳಿಗಳು 2003ರ ನಿಯಮ 6 (vi)ರ ಅವಕಾಶದಡಿ ಕರ್ನಾಟಕ ವಿಧಾನ ಸಭೆ ಸಚಿವಾಲಯದ ಕೆಳಕಂಡ ವಿವಿಧ ವೃಂದಗಳ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ವಿವರಗಳು ಈ ಕೆಳಕಂಡಂತಿರುತ್ತದೆ.
ಹುದ್ದೆಗಳ ವಿವರ
ಕಂಪ್ಯೂಟರ್ ಆಪರೇಟರ್ – 04
ವರದಿಗಾರರು – 02
ಬೆರಳಚ್ಚುಗಾರರು – 01
ಕಿರಿಯ ಸಹಾಯಕರು – 10
ದಲಾಯತ್ – 26
ವಯೋಮಿತಿ – ಸಾಮಾನ್ಯ ವರ್ಗದವರಿಗೆ 35 ವರ್ಷ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಗೆ 38 ವರ್ಷ, ಪರಿಶಿಷ್ಟ ಜಾರಿ, ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷ
MNCFC ಇಂಟರ್ನ್‌ಶಿಪ್: ಕೃಷಿ ಸಹಕಾರ ಮತ್ತು ರೈತರ ಕಲ್ಯಾಣ ಇಲಾಖೆ ಅಡಿಯಲ್ಲಿ ತರಬೇತಿ ಅವಕಾಶ
ಅತಿದೊಡ್ಡ ಹಾಲು ಸಹಕಾರಿ ಸಂಸ್ಥೆ ಅಮೂಲ್‌ನಲ್ಲಿ ಭಾರೀ ನೇಮಕಾತಿ..ಪದವಿ ಹೊಂದಿದವರಿಗೆ ಭರ್ಜರಿ ಅವಕಾಶ
ವೇತನ ಶ್ರೇಣಿ
ಕಿರಿಯ ಸಹಾಯಕರು – ರೂ.21,400 ರಿಂದ 42,000
ಬೆರಳಚ್ಚುಗಾರರು – ರೂ.21,400 ರಿಂದ 42,000
ದಲಾಯತ್ – 17,000 ರಿಂದ 28,950
ವರದಿಗಾರರು – ರೂ.37,900 ರಿಂದ 70,850
ಕಂಪ್ಯೂಟರ್ ಆಪರೇಟರ್ – ರೂ.30,350 ರಿಂದ 58,250
KPSC Recruitment: ಸಹಾಯಕ ಟೌನ್ ಪ್ಲಾನರ್ ಅರ್ಜಿ ಆಹ್ವಾನ.. 62,600 ರೂ ವೇತನ
Air India ನೇಮಕಾತಿ: ಈಗಲೇ ಅರ್ಜಿ ಸಲ್ಲಿಸಿ!
ವಿದ್ಯಾರ್ಹತೆ
ದಲಾಯತ್ – 7ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ಕಿರಿಯ ಸಹಾಯಕರು – ಪದವಿ ಜೊತೆಗೆ ಗಣಕಯತಂತ್ರ ಸಾಮಾನ್ಯ ಜ್ಞಾನ ಹೊಂದಿರಬೇಕು.
ಬೆರಳಚ್ಚುಗಾರರು – ಎಸ್ಎಸ್ ಎಲ್ ಸಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಗಣಕ ಯಂತ್ರದ ಕನಿಷ್ಠ 1 ವರ್ಷ ತರಬೇತಿ
ಕನ್ನಡ ವರದಿಗಾರರಿಗೆ ಯಾವುದೇ ಅಂಗೀಕೃತ ವಿವಿಯಿಂದ ಪದವಿ, ಪ್ರವೀಣ ದರ್ಜೆಯ ಕನ್ನಡ ಶೀಘ್ರಲಿಪಿಗಾರ, ಕನ್ನಡ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಕಂಪ್ಯೂಟರ್ ಆಪರೇಟರ್ – ಯಾವುದೇ ವಿವಿಯಿಂದ ಕಂಪ್ಯೂಟರ್ ಅಪ್ಲಿಕೇಷನ್ ನಲ್ಲಿ ಬ್ಯಾಚಲರ್ಸ್ ಪದವಿ ಅಥವಾ ಬಿಎಸ್ಸಿ ಕಂಪ್ಯೂಟರ್ ಸೈನ್ಸ್
ಅರ್ಜಿ ಶುಲ್ಕ
ಪರಿಶಿಷ್ಟ ಜಾತಿ, ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದ ಸಾಮಾನ್ಯ ವರ್ಗದ ಮತ್ತು ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಕ್ರಾಸ್ ಮಾಡಿದ ರೂ.500ರ ಇಂಡಿಯನ್ ಪೋಸ್ಟಲ್ ಆರ್ಡರ್ ಅನ್ನು, 27 ಮೇ 2022 ರ ಒಳಗಾಗಿ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು -560001ಗೆ ಪಾವತಿಸಬೇಕು.
TCS ನೇಮಕಾತಿ.. ಪದವಿ ಹೊಂದಿದ Freshersಗೆ ಇಲ್ಲಿದೆ ಸುವರ್ಣಾವಕಾಶ
NDDB ನೇಮಕಾತಿ: ಮಾ. 1,82,200 ಸಂಬಳ!
ವಿಶೇಷ ಸೂಚನೆ:
ಅರ್ಜಿಗಳ ಮೇಲೆ ಹುದ್ದೆಯ ಹೆಸರನ್ನು ಹಾಗೂ ಅರ್ಜಿದಾರರ ಹೆಸರು, ತಂದೆಯ ಹೆಸರು ಮತ್ತು ಸರಿಯಾದ ವಿಳಾಸವನ್ನು ದಪ್ಪ ಅಕ್ಷರಗಳಲ್ಲಿ ನಮೂದಿ ರತಕ್ಕದ್ದು.
ಅರ್ಜಿಯನ್ನು ಸಲ್ಲಿಸಲು ನೀಡಿರುವ ಕಾಲಾವಧಿಯು ಸರ್ಕಾರಿ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಭ್ಯರ್ಥಿಗಳು ಸೇರಿದಂತೆ ಎಲ್ಲಾ ಅಭ್ಯರ್ಥಿಗಳಿಗೂ ಅನ್ವಯವಾಗುವುದು.
ಅಗತ್ಯ ಪ್ರಮಾಣ ಪತ್ರಗಳನ್ನು ಲಗತ್ತಿಸದೆ ಇರುವ, ಲೋಪದಿಂದ ಕೂಡಿರುವ ಅರ್ಜಿಗಳನ್ನು, ಅಪೂರ್ಣ ಅರ್ಜಿಗಳನ್ನು ಹಾಗೂ ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅಭ್ಯರ್ಥಿಗಳು ಮೂಲ ಪ್ರಮಾಣ ಪತ್ರಗಳನ್ನು ಲಗತ್ತಿಸಬಾರದು.
ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದ ನಂತರ ಆ ಸಂಬಂಧ ಯಾವುದೇ ಪತ್ರ ವ್ಯವಹಾರಕ್ಕೆ ಅವಕಾಶವಿರುವುದಿಲ್ಲ.
Share your comments