1. ಸುದ್ದಿಗಳು

ಯುವಕರಿಗೆ ಪ್ರತಿ ತಿಂಗಳು 10 ಸಾವಿರ ಉದ್ಯೋಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Hitesh
Hitesh
10 thousand jobs for youth every month: Chief Minister Basavaraja Bommai

ರಾಜ್ಯದ ಯುವಕರಿಗೆ ಪ್ರತಿ ತಿಂಗಳು ಹತ್ತು ಸಾವಿರ ಉದ್ಯೋಗವನ್ನು ಕಲ್ಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿರ್ದೇಶನ ನೀಡಿದರು.  

ಬೆಂಬಲ ಬೆಲೆ ಯೋಜನೆಯಡಿ ಭತ್ತ, ಬಿಳಿಜೋಳ ಖರೀದಿ ಕೇಂದ್ರ ಪ್ರಾರಂಭ

ಮಾಜಿ ಪ್ರಧಾನಿ ದಿ.ಅಟಲ್‌ಬಿಹಾರಿ ವಾಜಪೇಯಿ ಅವರ ಜನ್ಮದಿನದ ಸುಶಾಸನ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ 10 ಸಾವಿರ ಯುವಕರಿಗೆ ಉದ್ಯೋಗ ಪತ್ರ ವಿತರಿಸಿದರು.

ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಗಳು ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಎಂಟು ಅಭ್ಯರ್ಥಿಗಳಿಗೆ ಉದ್ಯೋಗಾದೇಶಗಳನ್ನು ನೀಡಲಾಯಿತು.

ನಂತರ ಮಾತನಾಡಿದ ಅವರು, ಉನ್ನತ ಶಿಕ್ಷಣ, ಐಟಿ,ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಅವರ ಪ್ರಯತ್ನ ಶ್ಲಾಘನೀಯವಾಗಿದೆ. ಖಾಸಗಿ ಕಂಪನಿಗಳ ಸಹಾಯದಿಂದ ಪ್ರತಿ ತಿಂಗಳು 10 ಸಾವಿರ ಉದ್ಯೋಗಾವಕಾಶಗಳನ್ನು ಒದಗಿಸಬೇಕು ಎಂದರು. 
ಇನ್ನು ರಾಜ್ಯ ಕೌಶಲ್ಯಾಭಿವೃದ್ಧಿ ಇಲಾಖೆಯ ಈ ಉಪಕ್ರಮದಡಿ, ಮಾಸಿಕ ಕನಿಷ್ಠ 18 ಸಾವಿರದಿಂದ ಗರಿಷ್ಠ 45 ಸಾವಿರ ವೇತನದವರೆಗಿನ ಉದ್ಯೋಗ ಲಭ್ಯವಾಗಿದೆ. ಎಂಜಿನಿಯರಿಂಗ್, ಬಿ.ಎಸ್ಸಿ, ಬಿ.ಕಾಂ., ನರ್ಸಿಂಗ್‌, ಡಿಪ್ಲೊಮಾ, ಪಾಲಿಟೆಕ್ನಿಕ್‌ ಪದವೀಧರರು ಇದರಲ್ಲಿ ಸೇರಿದ್ದಾರೆ ಎಂದು ಹೇಳಿದರು.  

PM Kisan| ಪಿ.ಎಂ ಕಿಸಾನ್‌ 13ನೇ ಕಂತು: ಹೊಸ ವರ್ಷದ ಮೊದಲು ಬಿಡುಗಡೆ 

ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ 10 ಸಾವಿರ ಆಕಾಂಕ್ಷಿಗಳಿಗೆ ಒಂದೇ ಬಾರಿಗೆ ಉದ್ಯೋಗ ಪತ್ರಗಳನ್ನು ಹಸ್ತಾಂತರಿಸಲಾಗುತ್ತಿದೆ. ನಮ್ಮ ಸರ್ಕಾರವು ಯುವಕರಿಗೆ ತರಬೇತಿ ಕಲ್ಪಿಸುತ್ತಿದ್ದು, ಇದರೊಂದಿಗೆ ಅಗತ್ಯವಿರುವ ಕೌಶಲ್ಯಗಳನ್ನು ನೀಡುತ್ತಿದೆ. ಇದರಿಂದ ಅವರ ವ್ಯಕ್ತಿತ್ವ ಸುಧಾರಣೆ ಕಂಡಿದ್ದು, ಉದ್ಯೋಗ ಪಡೆಯುವ ಸಂದರ್ಭದಲ್ಲಿ ಇದು ನಿರ್ಣಾಯಕ ಪಾತ್ರ ವಹಿಸುತ್ತಿದೆ ಎಂದು ಅಭಿಪ್ರಾಯಪಟ್ಟರು. 

ಸಚಿವ ಅಶ್ವತ್ಥ್ ನಾರಾಯಣ ಅವರು ಮಾತನಾಡಿ, ರಾಜ್ಯ ಸರ್ಕಾರವು ಉನ್ನತ ಶಿಕ್ಷಣ ಇಲಾಖೆ ಮಾತ್ರವಲ್ಲದೆ ಇತರ ಇಲಾಖೆಗಳಲ್ಲಿಯೂ ಹೊಣೆಗಾರಿಕೆ, ಪಾರದರ್ಶಕತೆ ಮತ್ತು ದಕ್ಷತೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಿಕೊಳ್ಳುತ್ತಿರುವುದಾಗಿ ಹೇಳಿದರು.   

Heavy Rain| ರಾಜ್ಯದ ವಿವಿಧೆಡೆ ಧಾರಾಕಾರ ಮಳೆ!   

Published On: 26 December 2022, 10:07 AM English Summary: 10 thousand jobs for youth every month: Chief Minister Basavaraja Bommai

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.