ಮಾರ್ಚ್ 31, 2023ರೊಳಗೆ ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ 100 ಕೋಟಿ ರೂಪಾಯಿ ಕ್ರಿಯಾಯೋಜನೆ ಸಲ್ಲಿಸಲು ಮುಖಮಂತ್ರಿ ಬಸವರಾಜ್ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಪಿಂಚಣಿದಾರರೇ ಗಮನಿಸಿ : ಫೆಬ್ರವರಿ 20ರೊಳಗೆ ಈ ಕೆಲಸ ಮಾಡುವಂತೆ ಸರ್ಕಾರದ ಸೂಚನೆ!
ಗಡಿಭಾಗದಲ್ಲಿ ಶಿಕ್ಷಣ, ಕೈಗಾರಿಕೆ, ಮೂಲಭೂತ ಸೌಕರ್ಯ, ಕನ್ನಡ ಭಾಷಾ ಅಭಿವೃದ್ಧಿಗಳ ಬಗ್ಗೆ ಕೆಲಸ ಮಾಡುವ ಅವಶ್ಯಕತೆ ಇದ್ದು, ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಇದೇ ವರ್ಷದ ಮಾರ್ಚ್ 31 ರೊಳಗೆ 100 ಕೋಟಿ ರೂಪಾಯಿಗಳನ್ನು ಒದಗಿಸಲಾಗುವುದು.
ಈ ಅನುದಾನಕ್ಕೆ ಕ್ರಿಯಾಯೋಜನೆಯನ್ನು ಸಿದ್ದಪಡಿಸಿ ಸಲ್ಲಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ “ಗಡಿನಾಡ ಚೇತನ” ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
14 ಲಕ್ಷ ರೈತರಿಗೆ 1900 ಕೋಟಿ ಬೆಳೆಹಾನಿ ಪರಿಹಾರ: ಸಿಎಂ ಬೊಮ್ಮಾಯಿ
ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಈಗಾಗಲೇ 25 ಕೋಟಿ ನೀಡಲಾಗಿದೆ. ಮುಂದಿನ ಬಜೆಟ್‌ನಲ್ಲಿಯೂ 100 ಕೋಟಿ ರೂಪಾಯಿಗಳ ಅನುದಾನ ಒದಗಿಸುವ ಭರವಸೆ ನೀಡಿದರು.
ಗಡಿಭಾಗದಲ್ಲಿರುವ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವಾಗಬೇಕು. ಗಡಿ ಆಚೆ ಇರುವ ಕನ್ನಡಿಗರೂ ನಮ್ಮವರು. ಅವರ ಬೇಡಿಕೆಗೂ ಸ್ಪಂದಿಸುವ ಕೆಲಸ ನಾವು ಮಾಡುತ್ತೇವೆ.
ಕರ್ನಾಟಕದ ಮುಖ್ಯಮಂತ್ರಿಯಾಗಿ ಭಾಷೆ, ಗಡಿಭಾಗದವರ ರಕ್ಷಣೆ, ಪೋಷಣೆ ಮತ್ತು ಭವಿಷ್ಯವನ್ನು ಸುನಿಶ್ಚಿತ ಗೊಳಿಸುವುದು ನನ್ನ ಕರ್ತವ್ಯ. ನಮ್ಮ ಗಡಿಯಲ್ಲಿನ ಕನ್ನಡಿಗರ ಅಭಿವೃದ್ಧಿಯ ಬಗ್ಗೆ ಮೊದಲು ನಾವು ಗಮನಹರಿಸಬೇಕು ಎಂದರು.
ಪಡಿತರದಾರರಿಗೆ ಬಜೆಟ್‌ನಲ್ಲಿ ಸಿಹಿ ಸುದ್ದಿ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್! ಏನದು ಗೊತ್ತೆ?
ಗಡಿಭಾಗದ ಜನರು ಸಾಮರಸ್ಯದಿಂದ ಬದುಕುವಂತಾಗಬೇಕು
ಆದ್ದರಿಂದ ಕಾಲ ಕಳೆದಂತೆ ವ್ಯತ್ಯಾಸಗಳನ್ನು ಮರೆತು ಸಾಮರಸ್ಯದಿಂದ ಬದುಕುವುದು ಬಹಳ ಮುಖ್ಯ. ಆದರೆ, ಈ ರೀತಿ ಆಗಲಿಲ್ಲ ಎಂಬ ಕೊರಗು ಕನ್ನಡಿಗರಿಗಿದೆ. ಗಡಿ ಭಾಗದಲ್ಲಿ ಯಾವುದೇ ಭಾಷೆ ಮಾತನಾಡಿದರು ನೆಮ್ಮದಿಯಿಂದ ಜೀವನ ನಡೆಸುತ್ತಾರೆ.
ನಾನು ಬೆಳಗಾವಿ ಅಧಿವೇಶನಕ್ಕೆ ಹೋದಾಗ ಗಡಿ ಭಾಗದ ಗ್ರಾಮಗಳಿಗೆ ಭೇಟಿ ನೀಡಿದಾಗ ಜನರು ಪ್ರೀತಿಯಿಂದ ಮಾತನಾಡುತ್ತಾರೆ. ಜನರ ಮಧ್ಯೆ ಇಲ್ಲದಿರುವ ಸಮಸ್ಯೆಗಳನ್ನು ಬೆಳೆಸಿಕೊಂಡು ಹೋಗುವುದು ರಾಜ್ಯಕ್ಕಾಗಲಿ, ದೇಶಕ್ಕಾಗಲಿ ಒಳಿತನ್ನು ತರುವುದಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಎಂದರು.
Share your comments