ನಮಸ್ಕಾರ ಕೃಷಿ ಜಾಗರಣ ಅಗ್ರಿ ನ್ಯೂಸ್‌ಗೆ ಸ್ವಾಗತ. ಇಂದಿನ ಪ್ರಮುಖ ಸುದ್ದಿಗಳು ಈ ರೀತಿ ಇವೆ.
1. ಗೃಹಿಣಿಯರಿಗೆ ಮಾಸಿಕ 1,000 ಸಾವಿರ: ಬಸವರಾಜ ಬೊಮ್ಮಾಯಿ
2. ಕಟ್ಟಡ ಕಾರ್ಮಿಕರ ಮಕ್ಕಳಿಗೆ ನಾಲ್ಕು ಸಾವಿರ ಶಿಶು ವಿಹಾರ
3. ಶತಮಾನದ ಹಿಂದೆ ಬ್ರಿಟೀಷರು ನೆಟ್ಟಿದ್ದ ಮರ ಲಕ್ಷ ಲಕ್ಷಕ್ಕೆ ಹರಾಜು!
4. ಜನಕಲ್ಯಾಣ, ಆರ್ಥಿಕ ಸ್ಥಿರತೆಯ ಬಜೆಟ್ ಸಿ.ಎಂ ಬೊಮ್ಮಾಯಿ
5. ಶೇ.16 ರಷ್ಟು ಬಜೆಟ್ ಗಾತ್ರ ಹೆಚ್ಚಳ ರಾಜ್ಯದ ಆರ್ಥಿಕ ಪ್ರಗತಿಯ ಪ್ರತಿಬಿಂಬ: ಬೊಮ್ಮಾಯಿ
ಶತಮಾನದ ಹಿಂದೆ ಬ್ರಿಟೀಷರು ನೆಟ್ಟಿದ್ದ ಮರ ಲಕ್ಷ ಲಕ್ಷಕ್ಕೆ ಹರಾಜು!
1. ಗೃಹಿಣಿಶಕ್ತಿ ಯೋಜನೆಯಡಿ ಮಹಿಳೆಯರಿಗೆ ಈಗ ಘೋಷಿಸಿರುವ ಮಾಸಿಕ 500 ರೂಪಾಯಿ ಸಹಾಯಧನದ ಬದಲಾಗಿ 1,000 ರೂಪಾಯಿ ಸಹಾಯಧನ ನೀಡಲಾಗುವುದು
ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ವೇಳೆ ಈ ವಿಷಯ ತಿಳಿಸಿದ್ದಾರೆ.
ಶಾಲಾ - ಕಾಲೇಜುಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಜೆಟ್‍ನಲ್ಲಿ ಘೋಷಿಸಲಾಗಿದ್ದ ಒಂದು ಸಾವಿರ ಬಸ್‌ಗಳ ಸಂಖ್ಯೆಯನ್ನೂ 2000ಕ್ಕೆ ಹೆಚ್ಚಳ ಮಾಡುವುದಾಗಿ ತಿಳಿಸಿದ್ದಾರೆ.
-----------------
Unemployment in india ಭಾರತದಲ್ಲಿ ಇನ್ನೂ ಮೂರು ಪಟ್ಟು ಹೆಚ್ಚಾಗಲಿದೆ ನಿರುದ್ಯೋಗ ಸಮಸ್ಯೆ!
2. ಕಟ್ಟಡ ಕಾರ್ಮಿಕರ ಮಕ್ಕಳಿಗೆ ನಾಲ್ಕು ಸಾವಿರ ಶಿಶು ವಿಹಾರಗಳನ್ನು ಪ್ರಾರಂಭಿಸಲು ಬಜೆಟ್‍ನಲ್ಲಿ ಅನುದಾನ ಮೀಸಲಿಡಲಾಗಿದೆ.
ಆಶಾ ಅಂಗನವಾಡಿ ಕಾರ್ಯಕರ್ತೆಯರು, ಅಡುಗೆ ಸಹಾಯಕರ ಗೌರವಧನವನ್ನು ಒಂದು ಸಾವಿರ ರೂ.ಗಳಿಗೆ ಹೆಚ್ಚಿಸಲಾಗಿದೆ.
ಇ-ಕಾಮರ್ಸ್‌ನಲ್ಲಿ ತೊಡಗಿರುವವರ ವಾಹನಗಳಿಗೆ 2 ಲಕ್ಷ ಜೀವ ವಿಮೆ ಹಾಗೂ ಅಪಘಾತ ವಿಮೆಯನ್ನು ಮೊದಲ ಬಾರಿಗೆ ಘೋಷಿಸಲಾಗಿದೆ ಎಂದು ಸಿ.ಎಂ ಬೊಮ್ಮಾಯಿ ತಿಳಿಸಿದ್ದಾರೆ.
-----------------
PMKisanUpdate ಪಿ.ಎಂ ಕಿಸಾನ್ ಹಣ ಇದೇ ದಿನ ನಿಮ್ಮ ಖಾತೆಗೆ ಬರಲಿದೆ!
3. ಕೇರಳದಲ್ಲಿ ಬ್ರಿಟೀಷರ ಕಾಲದಲ್ಲಿ ನೆಡಲಾಗಿದ್ದ ಸಸಿಯೊಂದು ಇದೀಗ ಬರೋಬ್ಬರಿ 40 ಲಕ್ಷಕ್ಕೆ ಮಾರಾಟವಾಗಿದೆ.
ಕೇರಳದ ನಿಲಂಬೂರು ಮರಗಳ ತೋಪಿನಲ್ಲಿ ಬ್ರಿಟೀಷರು 114 ವರ್ಷ ಹಿಂದೆ ನೆಟ್ಟಿದ್ದ ತೇಗದ ಮರವೊಂದು 40 ಲಕ್ಷಕ್ಕೆ ಹರಾಜಾಗಿದೆ.
ಬ್ರಿಟೀಷ್ ಅಧಿಕಾರಿಯೊಬ್ಬರು 1909ರಲ್ಲಿ ಈ ಮರವನ್ನು ನೆಟ್ಟಿದ್ದರು ಎಂದು ಹೇಳಲಾಗಿದೆ.
ಇತ್ತೀಚೆಗಷ್ಟೇ ಈ ಮರವು ಧರೆಗುರುಳಿತ್ತು. ಹೀಗಾಗಿ ಅದನ್ನು ಹರಾಜಿಗೆ ಇರಿಸಲಾಗಿತ್ತು. ಕೇರಳದ ನೆಡುಂಕಯಮ್ ಅರಣ್ಯ ಡಿಪೋದಲ್ಲಿ
ಫೆಬ್ರುವರಿ 10 ರಂದು ನಡೆದ ಹರಾಜಿನಲ್ಲಿ ವರ್ಧಮಾನ್ ಟಿಂಬರ್ ಮಾಲೀಕ ಅಜನೀಶ್ ಕುಮಾರ್ ಎಂಬವರು ಬರೋಬ್ಬರಿ 39.25 ಲಕ್ಷ ರೂಪಾಯಿಗೆ ಈ ಮರವನ್ನು ಖರೀದಿ ಮಾಡಿದ್ದಾರೆ.
-----------------
4. ಹಣಕಾಸಿನ ಇತಿಮಿತಿಗಳು ಹಾಗೂ ಅವಶ್ಯಕ ಖರ್ಚುಗಳನ್ನು ನಿಭಾಯಿಸುವುದರ ನಡುವೆ ಉತ್ತಮ ಬಜೆಟ್ ನೀಡುವ ಮೂಲಕ ಆರ್ಥಿಕ ಅಭಿವೃದ್ಧಿ ವೇಗ,
ಜನಕಲ್ಯಾಣ , ಆರ್ಥಿಕ ಸ್ಥಿರತೆಯನ್ನು ಸಾಧಿಸುವ ವಾಸ್ತವಿಕತೆಯ ಬಜೆಟ್ ಮಂಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಗುರುವಾರ ಅವರು ಉತ್ತರ ನೀಡಿದರು.
ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದ್ದರೆ, ರಾಜ್ಯದ ಆದಾಯ ಹೆಚ್ಚುತ್ತದೆ. ರಾಜ್ಯದ ಹಣಕಾಸಿನ ಸ್ಥಿತಿ, ಜನರ ಆಶೋತ್ತರಗಳನ್ನು ಈಡೇರಿಸುವ ಯೋಜನೆಗಳನ್ನು ಪರಿಚಯಿಸಲಾಗಿದೆ ಎಂದಿದ್ದಾರೆ.
-----------------
2022-23ನೇ ಸಾಲಿನಲ್ಲಿ 14,699 ಕೋಟಿ ವಿತ್ತೀಯ ಕೊರತೆ ಆಗಬಹುದೆಂದು ಅಂದಾಜಿಸಲಾಗಿತ್ತು.
ಆದರೆ, ಜವರಿವರೆಗೆ 5,996 ಕೋಟಿ ರೂಪಾಯಿಗೆ ಕಡಿಮೆಗೊಳಿಸಲಾಗಿದೆ. 2023-24ರ ಆರ್ಥಿಕ ವರ್ಷದಲ್ಲಿ ಆದಾಯ ಹೆಚ್ಚಳವನ್ನು ಸಾಧಿಸುವ ಸಾಧ್ಯತೆ ಇದೆ.
ಕರ್ನಾಟಕ ಆರ್ಥಿಕ ನಿರ್ವಹಣೆಯಲ್ಲಿ ಕ್ರಮಬದ್ಧತೆಯನ್ನು ಸಾಧಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕಳೆದ ಬಾರಿಯ ಬಜೆಟ್‌ಗೆ ಹೋಲಿಸಿದರೆ ಈ ಬಾರಿಯ ಬಜೆಟ್ ಗಾತ್ರ ಶೇ.16 ರಷ್ಟು ಹೆಚ್ಚಾಗಿದ್ದು, ರಾಜ್ಯದ ಆರ್ಥಿಕ ಪ್ರಗತಿಯ ಸಂಕೇತ ಎಂದಿದ್ದಾರೆ.
-----------------
6. ರಾಯಚೂರಿನಲ್ಲಿ ಏಮ್ಸ್ ಮಾದರಿಯ ಆಸ್ಪತ್ರೆ ಸ್ಥಾಪನೆಗೆ ಬೇಡಿಕೆ ಇದೆ. ಈ ಬಗ್ಗೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸುತ್ತಿದೆ.
ರಾಜ್ಯ ಸರ್ಕಾರವು ಭೂಮಿ, ಮೂಲಸೌಕರ್ಯದ ವೆಚ್ಚವನ್ನು ಭರಿಸುವುದಾಗಿ ಪ್ರಸ್ತಾವನೆ ಸಲ್ಲಿಸಿದೆ.
ಅವಶ್ಯಕತೆ ಹಾಗೂ ಸಂದರ್ಭಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಕಳೆದ ಬಾರಿ ಬಜೆಟ್ ನಂತರದಲ್ಲಿಯೂ ಘೋಷಣೆಗಳನ್ನು ಮಾಡಿದ್ದೇವೆ
ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
-----------------
7. ಕೇಂದ್ರದ ತೆರಿಗೆಯಲ್ಲಿ ರಾಜ್ಯದ ತೆರಿಗೆ ಪಾಲು 37,252 ಕೋಟಿ ರೂ. ಗೆ ಹೆಚ್ಚಿಸುವ ಗುರಿ ಇದೆ.
ಕೇಂದ್ರ ಸರ್ಕಾರದಿಂದ ಡಿಬಿಟಿ ಸೇರಿದಂತೆ ರಾಜ್ಯಕ್ಕೆ ಅನುದಾನ ಹೆಚ್ಚಾಗಿದೆ.
2023-24ರಲ್ಲಿ ಕರ್ನಾಟಕವು 402 ಕೋಟಿ ಆದಾಯ ಹೆಚ್ಚಳವನ್ನು ಸಾಧಿಸಿದೆ.
ರಾಜಸ್ಥಾನ ಹಾಗೂ ಕೇರಳ ರಾಜ್ಯಗಳು ಆದಾಯ ಕೊರತೆಯನ್ನು ತೋರಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
----------------
Children Missing Case 9,018 ಮಕ್ಕಳು ರಾಜ್ಯದಲ್ಲಿ ನಾಪತ್ತೆ: ಆತಂಕಕ್ಕೆ ಕಾರಣವಾದ ಅಂಕಿ- ಅಂಶ!